ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಜಾಗತಿಕ ಗುಣಮಟ್ಟದ ಎಸ್ ನಿಜಲಿಂಗಪ್ಪ ದಂತ ಮಹಾವಿದ್ಯಾಲಯವು ಉನ್ನತ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಪ್ರಮುಖವಾದ ಪಾತ್ರವಹಿಸಿದೆ ಎಂದು ರಾಷ್ಟ್ರೀಯ ಮೌಲ್ಯೀಕರಣ ಮತ್ತು ಮಾನ್ಯತಾ ಪರಿಷತ್ತು ಗುರುತಿಸಿದೆ. ಹೀಗಾಗಿ ಮಾರ್ಚ.೧೨ ಮತ್ತು ೧೩ ರಂದು ರಾಷ್ಟ್ರೀಯ ಮೌಲ್ಯೀಕರಣ ಮತ್ತು ಮಾನ್ಯತಾ ಪರಿಷತ್ತು ಮಹಾವಿದ್ಯಾಲಯಕ್ಕೆ ಭೇಟಿ ನೀಡಿ ಮೌಲ್ಯಮಾಪನವನ್ನು ಮಾಡಿ ಮಾನ್ಯತೆಯನ್ನು ನೀಡಲಿದೆ ಎಂದು ಮಹಾವಿದ್ಯಾಲಯದ ಪ್ರೀನ್ಸಿಪಲ್ ಡಾ. ಜಯಶ್ರೀ ಎ. ಮುದ್ದಾ ತಿಳಿಸಿದ್ದಾರೆ.
ಶಿಕ್ಷಣದ ಗುಣಮಟ್ಟದ ಸುಧಾರಣೆಗೆ ಸಹಾಯ ಮಾಡುವ ಉದ್ದೇಶದಿಂದ ಉನ್ನತ ಕಲಿಕೆಯ ಸಂಸ್ಥೆಯನ್ನು ನಿರ್ಣಯಿಸಲು ಮತ್ತು ಮಾನ್ಯತೆ ನೀಡಲು ರಾಷ್ಟ್ರೀಯ ಮೌಲ್ಯೀಕರಣ ಮತ್ತು ಮಾನ್ಯತಾ ಪರಿಷತ್ತು ನಮ್ಮ ಮಹಾವಿದ್ಯಾಲಯಕ್ಕೆ ಭೇಟಿ ನೀಡಿ ಮೌಲ್ಯಮಾಪನವನ್ನು ಮಾಡುತ್ತಿರುವುದು ಖುಷಿಯ ಸಂಗತಿ ಎಂದು ತಿಳಿಸಿದ್ದಾರೆ.