ಆಳಂದ: ಭಯಾನಕ ಕೊರೋನಾ ವೈರಸನಿಂದ ಮುಕ್ತಿ ಪಡೆಯಲು ತಾಲೂಕಾ ಆರೋಗ್ಯ ಆಡಳಿತ ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ತಾಲೂಕಾ ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕೊರೋನಾ ವೈರಸ್ ಇದು ವೈದ್ಯಕೀಯ ಲೋಕಕ್ಕೆ ಸವಾಲಾಗಿದ್ದು ಅದನ್ನು ನಿವಾರಿಸಲು ವೈದ್ಯರು ಶ್ರಮಿಸುತ್ತಿದ್ದಾರೆ ತಾಲೂಕಿನಲ್ಲಿ ಎಲ್ಲ ಕಡೆ ಪರಿಸರ ಸ್ವಚ್ಛತೆಯನ್ನು ಕಾಪಾಡುವುದರ ಮೂಲಕ ವೈರಸನಿಂದ ದೂರವಿರಲು ಕರೆ ನೀಡಿದ್ದಾರೆ.
ಆಸ್ಪತ್ರೆಯ ಆವರಣ, ಸಾರ್ವಜನಿಕ ಸ್ಥಳಗಳನ್ನು ಪ್ರತಿದಿನ ಗುಡಿಸಿ ಸ್ವಚ್ಛಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಸ್ಥಳೀಯ ಸಂಸ್ಥೆಗಳು ಕೂಡ ತಮ್ಮ ಅಧೀನದ ವ್ಯಾಪ್ತಿಯ ಪ್ರದೇಶದಲ್ಲಿ ವೈರಸ್ ಕುರಿತು ಜಾಗೃತಿ ಮೂಡಿಸುವಂತೆ ಕರೆ ನೀಡಿದ್ದಾರೆ. ಕಲಬುರಗಿಯಲ್ಲಿಯೇ ವೈರಸ್ ಪತ್ತೆ ಪ್ರಯೋಗಾಲಯ ಆದಷ್ಟು ಬೇಗ ಸ್ಥಾಪಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.