ಸುರಪುರ: ಕರ್ನಾಟಕದಲ್ಲಿ ವೀರಶೈವ ಲಿಂಗಾಯತ ಸಮುದಾಯವು ಅಲ್ಪಸಂಖ್ಯಾತ ಸಮುದಾಯವಾಗಿರುವದರಿಂದ ಸಮುದಾಯದ ಸಮಗ್ರ ಅಭಿವೃಧ್ಧಿಗಾಗಿ ರಾಜ್ಯ ಸರಕಾರ ವೀರಶೈವ ಲಿಂಗಾಯತ ಅಭಿವೃಧ್ಧಿ ನಿಗಮ ಸ್ಥಾಪನೆ ಮಾಡುವಂತೆ ವೀರಶೈವ ಲಿಂಗಾಯತ ಯುವ ವೇದಿಕೆ ತಾಲೂಕು ಅಧ್ಯಕ್ಷ ಚಂದ್ರಶೇಖರ ಡೊಣೂರ ಸರಕಾರಕ್ಕೆ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,ಈಗಾಗಲೆ ಮಹಾರಾಷ್ಟ್ರದಲ್ಲಿ ಮರಾಠ ಸಮುದಾಯವನ್ನು ಅಲ್ಪಸಂಖ್ಯಾತರೆಂದು ಪರಿಗಣಿಸಿ ಮೀಸಲಾತಿ ನೀಡಲಾಗಿದೆ.ಆದರೆ ಕರ್ನಾಟಕದಲ್ಲಿರುವ ವೀರಶೈವ ಲಿಂಗಾಯತ ಸಮುದಾಯಕ್ಕೆ ಇಲ್ಲಿಯ ಸರಕಾರಗಳು ಯಾವುದೇ ಆದ್ಯತೆ ನೀಡದೆ ವಂಚಿಸುತ್ತಿದೆ.ರಾಜ್ಯದಲ್ಲಿಯ ನಮ್ಮ ಸಮಾಜದ ಯುವಕರು ಉದ್ಯೋಗವಿಲ್ಲದೆ,ಸರಿಯಾದ ಶಿಕ್ಷಣವಿಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.ಬಡ ಜನತೆಗೆ ಸರಕಾರದ ಯೋಜನೆಗಳು ಸರಿಯಾಗಿ ಸಿಗದೆ ಸಮಸ್ಯೆ ಹೆದರಿಸುವಂತಾಗಿದೆ.
ಆದ್ದರಿಂದ ರಾಜ್ಯದಲ್ಲಿಯ ವಿರಶೈವ ಲಿಂಗಾಯತ ಸಮುದಾಯದ ಅಭಿವೃಧ್ಧಿಯ ದೃಷ್ಟಿಯಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಅಭಿವೃಧ್ಧಿ ನಿಗಮವನ್ನು ಸ್ಥಾಪನೆ ಮಾಡಿ,ಸಮಾಜದ ಅಭಿವೃಧ್ಧಿಗೆ ಸಹಕರಿಸಬೇಕು.ಇಲ್ಲವಾದರೆ ವೀರಶೈವ ಲಿಂಗಾಯತ ಸಮಾಜದ ಜನರೊಂದಿಗೆ ಸೇರಿ ನಮ್ಮ ಯುವ ವೇದಿಕೆ ನೇತ್ರತ್ವದಲ್ಲಿ ರಾಜ್ಯಾದ್ಯಂತ ಹೋರಾಟ ಹಮ್ಮಿಕೊಳ್ಳಬೇಕಾಗುವುದು ಎಂದು ಸರಕಾರ‍್ಕಕೆ ಎಚ್ಚರಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…