ಕಲಬುರಗಿ: ಶ್ವಾಸಕೋಶ ಮತ್ತಿತರ ಕಾಯಿಲೆಯಿಂದ ಬಳಲುತ್ತಿದ್ದ ಕಲಬುರಗಿ ನಗರದ ಮೃತ ಮಹ್ಮದ್ ಹುಸೇನ್ ಸಿದ್ದಿಕಿ ಅವರ ಗಂಟಲು ದ್ರವದ ಮಾದರಿಗಳನ್ನು ಕೊರೋನಾ ವೈರಸ್ ಸೋಂಕು ಇದೆಯೇ ಎಂಬುದರ ಪತ್ತೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಿದ್ದು, ಇನ್ನೂ ಕೂಡ ವರದಿ ಬಂದಿರುವುದಿಲ್ಲ ಎಂದು ಕಲಬುರಗಿ ಜಿಲ್ಲಾಧಿಕಾರಿ ಶರತ್ ಬಿ. ಅವರು ಸ್ಪಷ್ಟಪಡಿಸಿದ್ದಾರೆ.
ಗುರುವಾರ ಕಲಬುರಗಿ ನಗರದ ವಾರ್ತಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಮೃತಪಟ್ಟ ಮಹ್ಮದ್ ಹುಸೇನ್ ಸಿದ್ದಿಕಿ ಅವರ ಕುಟುಂಬದ ಸದಸ್ಯರು, ನೆರೆಹೊರೆಯವರು, ಅವರಿಗೆ ಚಿಕಿತ್ಸೆ ನೀಡಿದ ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಒಟ್ಟು ೪೩ ಜನರ ಆರೋಗ್ಯದ ಮೇಲೆ ಸಂಪೂರ್ಣ ನಿಗಾವಹಿಸಲಾಗಿದೆ. ಈ ಕುರಿತು ಆತಂಕ ಬೇಡ ಎಂದು ಜನರಿಗೆ ಧೈರ್ಯ ತುಂಬಿದ್ದಾರೆ.
ಇ.ಎಸ್.ಐ.ಸಿ. 400 ಬೆಡ್ ವ್ಯವಸ್ಥೆ: ಕೊರೋನಾ ವೈರಸ್ ಸೋಂಕಿತ ರೋಗಿಗಳ ಶುಶ್ರೂಷೆಗಾಗಿ ಕಲಬುರಗಿ ನಗರದ ಇ.ಎಸ್.ಐ.ಸಿ.ಆಸ್ಪತ್ರೆಯಲ್ಲಿ ೨೦೦ ಹಾಸಿಗೆಗಳ ಪ್ರತ್ಯೇಕ ( ಐಸೋಲೇಷನ್) ವಾರ್ಡ್‌ಗಳ ವ್ಯವಸ್ಥೆಯನ್ನು ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ ಸದ್ಯಕ್ಕೆ ೨೦೦ ಬೆಡ್ ವ್ಯವಸ್ಥೆ ಮಾಡಲಾಗುತ್ತದೆ. ನಂತರ ಇದನ್ನು ೪೦೦ ಬೆಡ್ ವ್ಯವಸ್ಥೆಗೆ ಕ್ರಮ ವಹಿಸಲಾಗುವುದು ಎಂದು ಅವರು ಹೇಳಿದರು.
ಜಿಮ್ಸ್‌ನಲ್ಲಿ ಲ್ಯಾಬ್: ಜಿಮ್ಸ್ ಆಸ್ಪತ್ರೆಯಲ್ಲಿ ಕೊರೋನಾ ವೈರಸ್ ಸೋಂಕಿನ ಪ್ರಕರಣ ಪತ್ತೆಗಾಗಿ ಲ್ಯಾಬ್‌ನ್ನು ತೆರೆಯಲು ಈಗಾಗಲೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಮನವಿ ಕಳುಹಿಸಲಾಗಿದೆ. ಅಗತ್ಯ ಸಾಧನಾ-ಸಲಕರಣೆ ಬಂದ ನಂತರ ೨-೩ ದಿನಗಳಲ್ಲಿ ಜಿಮ್ಸ್ ಆಸ್ಪತ್ರೆಯಲ್ಲಿಯೇ ಲ್ಯಾಬ್ ತೆರೆಯಲಾಗುವುದು ಎಂದು ಅವರು ಹೇಳಿದರು. ರೈಲ್ವೆ ಸ್ಟೇಷನ್, ವಿಮಾನ ನಿಲ್ದಾಣ, ಪ್ರವಾಸಿ ತಾಣಗಳಲ್ಲಿ ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಜಾಗೃತಿ ಮೂಡಿಸಲಾಗುತ್ತದೆ. ಕೆಮ್ಮು, ಜ್ವರ, ನೆಗಡಿ, ಉಸಿರಾಟದ ತೊಂದರೆ ಇರುವವರು ಸೂಕ್ತ ಚಿಕಿತ್ಸೆ ಪಡೆಯಬೇಕು. ಈ ರೋಗಿಗಳು ಹೊರಗಡೆ ತಿರುಗಾಡದೆ ಮನೆಯಲ್ಲಿಯೇ ಇದ್ದು ವಿಶ್ರಾಂತಿ ಪಡೆಯಬೇಕು ಎಂದು ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು.
ನೆರೆ ರಾಜ್ಯಗಳ ಗಡಿಭಾಗದ ಪ್ರವಾಸಿ ತಾಣಗಳಿಗೆ ಬರುವ ಪ್ರವಾಸಿಗರ ಮೇಲೂ ನಿಗಾ ವಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಹಾಗೆಯೇ ಇಂತಹ ಪ್ರವಾಸಿ ತಾಣಗಳಲ್ಲಿ ಹೆಲ್ಪ್ ಡೆಸ್ಕ್‌ಗಳನ್ನು ಕೂಡ ತೆರೆಯಲಾಗುತ್ತದೆ ಎಂದು ಅವರು ತಿಳಿಸಿದರು.
ಹೊರದೇಶಕ್ಕೆ ತೆರಳುವವರಿಗೆ ವೀಸಾವನ್ನು ನಿರ್ಬಂಧಿಸಲಾಗಿದೆ. ದೇಶದಲ್ಲಡೆ ಹೊರದೇಶದಿಂದ ಬರುವ ಪ್ರಯಾಣಿಕರನ್ನು ಸೂಕ್ಷ್ಮವಾಗಿ ಪರೀಕ್ಷಿಸಿ ಅವರ ಸಂಪೂರ್ಣ ಮಾಹಿತಿಯನ್ನು ಪಡೆಯಲಾಗುತ್ತದೆ. ೧೪ ದಿನಗಳ ಕಾಲ ಅವರ ಆರೋಗ್ಯದ ಮೇಲೆ ನಿಗಾವಹಿಸಲಾಗುತ್ತದೆ ಎಂದರು. ನಗರದ ಮಾಲ್, ಹೊಟೇಲ್, ಪ್ರವಾಸಿ ಮಂದಿರಗಳ ಮಾಲಿಕರೊಂದಿಗೆ ಸಭೆ ನಡೆಸಿ ಕೊರೋನಾ ವೈರಸ್ ಕುರಿತು ಜಾಗೃತಿ ಮೂಡಿಸಲಾಗುತ್ತದೆ ಎಂದು ಮಾಹಿತಿ ನೀಡಿದರು. ಯಾವುದೇ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸಮ್ಮೇಳನಗಳನ್ನು ಆಯೋಜಿಸುವುದನ್ನು ತಡೆಯಬೇಕು ಎಂದು ರಾಜ್ಯದ ಮುಖ್ಯಕಾರ್ಯದರ್ಶಿಗಳು ವಿಡಿಯೋ ಕಾನ್ಫೆರೆನ್ಸ್‌ನಲ್ಲಿ ತಿಳಿಸಿರುವುದಾಗಿ ಜಿಲ್ಲಾಧಿಕಾರಿಗಳು ಇದೇ ಸಂದರ್ಭದಲ್ಲಿ ಹೇಳಿದರು.
ಶರಣಬಸವೇಶ್ವರ ಜಾತ್ರೆಯಲ್ಲಿ ಜಾಗೃತಿ: ನಗರದಲ್ಲಿ ಜರುಗಲಿರುವ ಶರಣಬಸವೇಶ್ವರ ಜಾತ್ರೆಯಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಸೇರುವ ಸಾಧ್ಯತೆಯಿದ್ದು, ಈ ಕುರಿತು ಜಿಲ್ಲಾ ಆರೋಗ್ಯ ಅಧಿಕಾರಿ ಹಾಗೂ ಜಾತ್ರೆ ಆಯೋಜಕರ ಜೊತೆ ಸಭೆ ನಡೆಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡಲಾಗುತ್ತದೆ ಎಂದು ಹೇಳಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…