ಬಿಸಿ ಬಿಸಿ ಸುದ್ದಿ

ದಿ. ವೀರೇಂದ್ರ ಪಾಟೀಲ, ದಿ.ಎನ್.ಧರ್ಮಸಿಂಗ್ ಭಾವ ಚಿತ್ರ, ವಿಶೇಷ ಅಂಚೆ ಲಕೋಟೆ ಬಿಡುಗಡೆ 14 ರಂದು

ಕಲಬುರಗಿ: ಮಾಜಿ ಮುಖ್ಯಂತ್ರಿಗಳು, ಕರ್ನಾಟಕ ಸರಕಾರ ಹಾಗೂ ಹೈದ್ರಾಬಾದ ಕನಾಟಕ ಪ್ರದೇಶದ ಧಿಮಂತ ನಾಯಕ ವೀರೇಂದ್ರ ಪಾಟೀಲ ಮತ್ತು ಶ್ರಮಜೀವಿ ಹಾಗೂ ಅಜಾತ ಶತ್ರು ಎಂದೇ ಖ್ಯಾತಿ ಪಡೆದ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಎನ್. ಧರ್ಮಸಿಂಗ್ ಅವರು ರಾಜ್ಯಕ್ಕೆ ಸಲ್ಲಿಸಿದ ಅಪರಿಮಿತ ಸೇವೆ ಹಾಗೂ ಕೈಗೊಂಡು ಅಭಿವೃದ್ಧಿಕಾರ್ಯಗಳನ್ನು ಸ್ಮರಿಸಿ ಅವರಿಗೆ ಗೌರವಪೂರಕವಾಗಿ ಅವರ ಭಾವ ಚಿತ್ರ ಮತ್ತು ನಾಮ ನಿರ್ದೇಶಿತ ಅಂಚೆ ಲೋಕೋಟೆಗಳನ್ನು ಬಿಡುಗಡೆ ಮಾಡುವ ಸಮಾರಂಭವನ್ನು ಮಾರ್ಚ ೧೪ರಂದು ಸಾಯಂಕಾಲ ೪ ಗಂಟೆಗೆ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಸಭಾಂಗಣ, ಪಿ.ಡಿ.ಎ. ಇಂಜಿನಿಯರಿಂಗ್ ಕಾಲೇಜು ಕಲಬುರಗಿಯಲ್ಲಿ ಹಮ್ಮಿಕೊಳ್ಳಲಾಗಿದೆ.

ಕಲಬುರ್ಗಿ ವಿಭಾಗೀಯ ಅಂಚೇ ಕಛೇರಿಯ ವತಿಯಿಂದ ಹಸ್ತಾಂತರಿಸಲಾಗುವ ಈ ವಿಶೇಷ ಅಂಚೆ ಲಕೋಟೆಗಳು ಈ ಧಿಮಂತ ನಾಯಕರ ಸೇವೆಯನ್ನು ಪ್ರತಿಬಿಂಬಿಸುತ್ತದೆ ಎಂದು ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಭೀಮಾಶಂಕರ ಸಿ. ಬಿಲಗುಂದಿಯವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ವೀರೇಂದ್ರ ಪಾಟೀಲರ ವಿಶೇಷ ಅಂಚೆ ಲಕೋಟೆ ಅವರು ಸುಪುತ್ರಿ ಹಾಗೂ ಮಾಜಿ ಲೋಕಸಭಾ ಸದಸ್ಯರಾದ ಡಾ. ಬಿ.ಜಿ.ಜವಳಿಯವರ ಧರ್ಮಪತ್ನಿಯವರಾದ ಶ್ರೀಮತಿ ಲಲಿತಾ ಬಿ. ಜವಳಿಯವವರು ಬಿಡುಗಡೆ ಮಾಡಲಿದ್ದಾರೆ. ಅದೇ ರೀತಿ ಎನ್. ಧರ್ಮಸಿಂಗ್ ಅವರ ವಿಶೇಷ ಅಂಚೆ ಲಕೋಟೆಯನ್ನು ಎನ್. ಧರ್ಮಸಿಂಗ್ ಅವರ ಧರ್ಮಪತ್ನಿಯವರಾದ ಶ್ರೀಮತಿ ಪ್ರಭಾವತಿ ಧರ್ಮಸಿಂಗ್ ಅವರು ಬೀಡುಗಡೆ ಮಾಡಲಿದ್ದಾರೆ.

ಈ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಲೋಕಸಭಾ ಮಾಜಿ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆಯವರು ಆಗಮಿಸಲಿದ್ದಾರೆ. ಗೌರವ ಅತಿಥಿಗಳಾಗಿ ಶರಣಬಸಪ್ಪ ದರ್ಶನಾಪೂರ, ಶಾಸಕರು, ಶಹಾಪೂರ, ಪ್ರಿಯಾಂಕ ಖರ್ಗೆ ಶಾಸಕರು, ಚಿತ್ತಾಪೂರ, ಎಮ್. ವಾಯ್ ಪಾಟೀಲ, ಶಾಸಕರು, ಅಫಲಜಲಪೂರ, ಶ್ರೀಮತಿ ಖನಿಜಾ ಫಾತಿಮಾ, ಶಾಸಕರು ಕಲಬುರರ್ಗಿ(ಉತ್ತರ), ಬಿ.ಜಿ.ಪಾಟೀಲ, ಎಂ.ಎಲ್.ಸಿ., ಶರಣಪ್ರಕಾಶ ಪಾಟೀಲ, ಮಾಜಿ ಸಚಿವರು, ಕರ್ನಾಟಕ ಸರಕಾರ, ಶಶೀಲ ಜಿ. ನಮೋಶಿ, ಮಾಜಿ ಅಧ್ಯಕ್ಷರು, ಹೈ.ಕ.ಶಿಕ್ಷಣ ಸಂಸ್ಥೆ, ಕಲಬುರಗಿ, ಅಲ್ಲಂಪ್ರಭು ಪಾಟೀಲ, ಮಾಜಿ ಶಾಸಕರು ಅವರು ಆಗಮಿಸಲಿದ್ದಾರೆ.

ಕಲಬುರ್ಗಿ ವಿಭಾಗಿಯ ಅಂಚೆ ಕಛೇರಿಯ ಬಿ. ಅರ್. ನನಜಗಿ ಎಸ್.ಎಸ್.ಪಿ.ಓ. ಐಪಿ ಓಎಸ್. ಕಲಬುರ್ಗಿ ಇವರು ವಿಶೇಷ ಅಂಚೆ ಲಕೋಟೆಗಳನ್ನು ಹಸ್ತಾಂತರ ಮಾಡುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಭೀಮಾಶಂಕರ ಸಿ. ಬಿಲಗುಂದಿಯವರು ವಹಿಸಲಿದ್ದಾರೆ.

ಸಮಾರಂಭದಲ್ಲಿ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಜಂಟಿ ಕಾರ್ಯದರ್ಶಿಗಳು ಹಾಗೂ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿರುವರು. ಈ ಧೀಮಂತ ನಾಯಕರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಾರಂಭಕ್ಕೆ ಶೋಭೆ ತರಬೇಕಾಗಿ ಕೋರುತ್ತೇನೆ

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

20 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago