ಕಲಬುರಗಿ: ನಗರದ ಶಾಲಾ-ಕಾಲೇಜು (ಪರೀಕ್ಷೆಗಳನ್ನು ಹೊರತುಪಡಿಸಿ) ಮತ್ತು ಸಿನಿಮಾ ಚಿತ್ರಮಂದಿರಗಳನ್ನು ಒಂದು ವಾರಗಳ ಕಾಲ ಮುಚ್ಚಲು ಆದೇಶಿಸಿಲಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ ತಿಳಿಸಿದ್ದಾರೆ.
ಇಂದು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋರೋನ ಭೀತಿಯಿಂದ ನಲ್ಲಿ ಶುಕ್ರವಾರ ನಡೆಯಬೇಕಾದ ಪ್ರಸಿದ್ಧ ಶ್ರೀ ಶರಣಬಸವೇಶ್ವರ ಜಾತ್ರೆಯನ್ನು ರದ್ದು ಪಡಿಸಲಾಗಿದ್ದು, ಇದೇ ಮಾದರಿಯನ್ನು ಎಲ್ಲಾ ಧಾರ್ಮಿಕ ಸಂಸ್ಥೆಗಳು ಜನಸಂದಣಿ ಸೇರುವುದನ್ನು ತಡೆಗಟ್ಟಬೇಕು ಸಾರ್ವಜನಿಕ ಸ್ಥಳದಲ್ಲಿ ಜನ ಸೇರಿರುವುದನ್ನು ನಿರ್ಬಂಧಿಸಲಾಗಿದೆ ಎಂದರು.
ಜಿಮ್ಸ್ ಆಸ್ಪತ್ರೆಯಲ್ಲಿ ಕೊರೋನಾ ವೈರಸ್ ಕುರಿತು ಪರೀಕ್ಷಿಸಲು ಲ್ಯಾಬ್ ತೆರೆಯಲು ಈಗಾಗಲೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಇದಕ್ಕೆಅಗತ್ಯವಿರುವ ಕಿಟ್ಸ್ ಕುಡಲೆ ಸರಬರಾಜಿಗೆ ಲೋಕಸಭಾ ಸದಸ್ಯ ಡಾ.ಉಮೇಶ ಜಾಧವ ಅವರು ಕೇಂದ್ರ ಆರೋಗ್ಯ ಸಚಿವರನ್ನು ಮಾತನಾಡಿದ್ದಾರೆ ಎಂದು ತಿಳಿಸಿದರು.
ಖಾಸಗಿ ಆಸ್ಪತ್ರೆಯಲ್ಲಿ ಕೆಮ್ಮು ನೆಗಡಿ ಜ್ವರ ಉಸಿರಾಟ ತೊಂದರೆಯಿಂದ ಯಾರೇ ದಾಖಲಾದರೂ ಅದರ ಬಗ್ಗೆ ಪ್ರತಿ ದಿನ ಮೂರು ಬಾರಿ ಜಿಲ್ಲಾಡಳಿತಕ್ಕೆ ಮತ್ತು ಆರೋಗ್ಯ ಇಲಾಖೆಗೆ ಖಾಸಗಿ ಆಸ್ಪತ್ರೆಗಳು ಮಾಹಿತಿ ನೀಡಬೇಕು ಎಂದು ಸೂಚಿಸಿದೆ. ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು ನಿಷ್ಕ್ರಿಯಗೊಳಿಸಿದೆ ಎಂದು ಈ ಸಂದರ್ಭದಲ್ಲಿ ಮಾಹಿತಿ ನೀಡಿದರು.
ಈ ವೇಳೆಯಲ್ಲಿ ಜಿಲ್ಲಾ ಪಂಚಾಯಿತ್ ಸಿಇಓ ಎ ರಾಜಾ, ಪೊಲೀಸ್ ಆಯುಕ್ತರಾದ ಎನ್. ನಾಗರಾಜು, ಉಪ ಆಯುಕ್ತರಾದ ಕಿಶೋರ್ ಬಾಬು ಎಸ್.ಪಿ ಯಡಾ ಮಾರ್ಟಿನ್ ಸೇರಿದಂತೆ ಮುಂತಾದವರು ಇದ್ದರು.