ಕಲಬುರಗಿಯಲ್ಲಿ ಒಂದು ವಾರದ ವರೆಗೆ ಚಿತ್ರಮಂದಿರ ಶಾಲಾ-ಕಾಲೇಜಿಗೆ ರಜೆ: ಜಿಲ್ಲಾಧಿಕಾರಿ

ಕಲಬುರಗಿ: ನಗರದ ಶಾಲಾ-ಕಾಲೇಜು (ಪರೀಕ್ಷೆಗಳನ್ನು ಹೊರತುಪಡಿಸಿ) ಮತ್ತು ಸಿನಿಮಾ ಚಿತ್ರಮಂದಿರಗಳನ್ನು ಒಂದು ವಾರಗಳ‌ ಕಾಲ ಮುಚ್ಚಲು ಆದೇಶಿಸಿಲಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ ತಿಳಿಸಿದ್ದಾರೆ.

ಇಂದು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋರೋನ ಭೀತಿಯಿಂದ ನಲ್ಲಿ ಶುಕ್ರವಾರ  ನಡೆಯಬೇಕಾದ ಪ್ರಸಿದ್ಧ ಶ್ರೀ ಶರಣಬಸವೇಶ್ವರ ಜಾತ್ರೆಯನ್ನು ರದ್ದು ಪಡಿಸಲಾಗಿದ್ದು, ಇದೇ ಮಾದರಿಯನ್ನು ಎಲ್ಲಾ ಧಾರ್ಮಿಕ ಸಂಸ್ಥೆಗಳು ಜನಸಂದಣಿ ಸೇರುವುದನ್ನು ತಡೆಗಟ್ಟಬೇಕು ಸಾರ್ವಜನಿಕ ಸ್ಥಳದಲ್ಲಿ ಜನ ಸೇರಿರುವುದನ್ನು ನಿರ್ಬಂಧಿಸಲಾಗಿದೆ ಎಂದರು.

ಜಿಮ್ಸ್ ಆಸ್ಪತ್ರೆಯಲ್ಲಿ ಕೊರೋನಾ ವೈರಸ್ ಕುರಿತು ಪರೀಕ್ಷಿಸಲು ಲ್ಯಾಬ್ ತೆರೆಯಲು ಈಗಾಗಲೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಇದಕ್ಕೆಅಗತ್ಯವಿರುವ ಕಿಟ್ಸ್ ಕುಡಲೆ ಸರಬರಾಜಿಗೆ ಲೋಕಸಭಾ ಸದಸ್ಯ ಡಾ.ಉಮೇಶ ಜಾಧವ ಅವರು ಕೇಂದ್ರ ಆರೋಗ್ಯ ಸಚಿವರನ್ನು ಮಾತನಾಡಿದ್ದಾರೆ ಎಂದು ತಿಳಿಸಿದರು.

ಖಾಸಗಿ ಆಸ್ಪತ್ರೆಯಲ್ಲಿ ಕೆಮ್ಮು ನೆಗಡಿ ಜ್ವರ ಉಸಿರಾಟ ತೊಂದರೆಯಿಂದ ಯಾರೇ ದಾಖಲಾದರೂ ಅದರ ಬಗ್ಗೆ ಪ್ರತಿ ದಿನ ಮೂರು ಬಾರಿ ಜಿಲ್ಲಾಡಳಿತಕ್ಕೆ ಮತ್ತು ಆರೋಗ್ಯ ಇಲಾಖೆಗೆ ಖಾಸಗಿ ಆಸ್ಪತ್ರೆಗಳು ಮಾಹಿತಿ ನೀಡಬೇಕು ಎಂದು ಸೂಚಿಸಿದೆ. ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು ನಿಷ್ಕ್ರಿಯಗೊಳಿಸಿದೆ ಎಂದು ಈ ಸಂದರ್ಭದಲ್ಲಿ ಮಾಹಿತಿ ನೀಡಿದರು.

ಈ ವೇಳೆಯಲ್ಲಿ ಜಿಲ್ಲಾ ಪಂಚಾಯಿತ್ ಸಿಇಓ ಎ ರಾಜಾ, ಪೊಲೀಸ್ ಆಯುಕ್ತರಾದ ಎನ್. ನಾಗರಾಜು, ಉಪ ಆಯುಕ್ತರಾದ ಕಿಶೋರ್ ಬಾಬು ಎಸ್.ಪಿ ಯಡಾ ಮಾರ್ಟಿನ್ ಸೇರಿದಂತೆ ಮುಂತಾದವರು ಇದ್ದರು.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

2 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

8 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

19 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

20 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

20 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

20 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420