ಆಳಂದ: ಜೀವನದಲ್ಲಿ ಅನುಭವಿಸಿದ ಅನುಭವ ಸಿಹಿ ಕಹಿ ಕಷ್ಟ ಕಾರ್ಪಣ್ಯಗಳೇ ನಮ್ಮ ಪಾಠಗಳಾಗಿವೆ ಎಂದು ಆಳಂದನ ಶ್ರೀನಿವಾಸ ದೇಸಾಯಿ ಪ್ರೌಢಶಾಲೆಯ ಮುಖ್ಯ ಗುರು ಮಲ್ಲಿನಾಥ ಮುನ್ನೊಳ್ಳಿ ಅಭಿಪ್ರಾಯಪಟ್ಟರು.
ಗುರುವಾರ ತಾಲೂಕಿನ ಮೋಘಾ (ಬಿ) ಗ್ರಾಮದಲ್ಲಿ ಜೀವನಜ್ಯೋತಿ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆಯ ಸಂಚಾಲಿತ ಶ್ರೀಮಂತ ಧೋತ್ರೆ ಸ್ಮಾರಕ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ೧೦ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮುಖ್ಯ ಅತಿಥಿಹಗಳಾಗಿ ಮಾತನಾಡಿದರು.
ವಿದ್ಯಾರ್ಥಿಗಳು ಪರೀಕ್ಷೆಯ ಬಗ್ಗೆ ಪೂರ್ವಾಗ್ರಹ ಪೀಡಿತರಾಗಿ ಭಯಪಡಬಾರದು ಪರೀಕ್ಷೆಯನ್ನು ಒಂದು ಸಂಭ್ರಮದಂತೆ ಆಚರಿಸಲು ಮಾನಸಿಕವಾಗಿ ಸಿದ್ಧರಾಗಬೇಕು ಅದಕ್ಕಾಗಿ ಸಮತೂಕದ ದೈಹಿಕ ಮತ್ತು ಮಾನಸಿಕ ಸ್ಥಿತಿಯನ್ನು ಕಾಪಾಡಿಕೊಂಡು ಬರುವುದು ಅವಶ್ಯಕವಾಗಿದೆ ಎಂದು ಹೇಳಿದರು.
ಹೆಚ್ಚು ಅಂಕಗಳಿಸಬೇಕು ಎಂಬ ಆಸೆಯಿರಲಿ ಆದರೆ ಅದಕ್ಕಾಗಿ ವಾಮಮಾರ್ಗವನ್ನು ಅನುಸರಿಸುವುದು ಬೇಡ. ಎಷ್ಟೇ ಅಡಚಣೆ ಬಂದರೂ ಧೈರ್ಯ ಮತ್ತು ಸ್ಥೈರ್ಯದಿಂದ ಪರೀಕ್ಷೆ ಎದುರಿಸಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಹಣಮಂತ ಶೇರಿ, ಮಲ್ಲಿನಾಥ ಬುಕ್ಕೆ, ಸತೀಶ ಸನ್ಮುಖ ಮಾತನಾಡಿದರು. ಶಾಲಾ ವಿದ್ಯಾರ್ಥಿಗಳು ಕಾರ್ಯಕ್ರಮ ನಿರ್ವಹಿಸಿದರು. ಮುಖ್ಯ ಗುರು ಸಿದ್ದಾರಾಮ ಧೋತ್ರೆ ಅಧ್ಯಕ್ಷತೆ ವಹಿಸಿದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…