ಕಲಬುರಗಿ: ಹಿರಿಯ ಸಾಹಿತಿ, ಲೇಖಕ ದೊಡ್ಡಬಸಪ್ಪ ಬಳೂರಗಿ ಅವರು ರಚಿಸಿರುವ ಜೀವನ ನೀತಿ ಮತ್ತು ವಚನ ಸುಮ ಎಂಬ ಎರಡು ಕೃತಿಗಳು ಲೋಕಾರ್ಪಣೆಯನ್ನು ಇದೇ ತಿಂಗಳು ಮಾರ್ಚ ೧೫ ರಂದು ಭಾನುವಾರ ಬೆಳಿಗ್ಗೆ ೧೦:೩೦ಕ್ಕೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸಾಹಿತ್ಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕ.ಸಾ.ಪ ಅಧ್ಯಕ್ಷರಾದ ಸಿದ್ದಲಿಂಗಣ್ಣ ಆನೆಗುಂದಿ ಅವರು ಪ್ರಕಟಣೆಗೆ ತಿಳಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ಫಕಿರೇಶ್ವರ ಮಠದ ಗುರುಪಾದ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಖ್ಯಾತ ವೈದ್ಯರಾದ ಡಾ. ಎಸ್.ಎರ್.ಸಿಣ್ಣೂರು ಉದ್ಘಾಟಿಸಲಿದ್ದು, ಹಿರಿಯ ಸಾಹಿತಿ ಡಾ.ಅಬ್ದುಲ್ ಕರೀಂ ಕನ್ಯಾಕೋಳೂರು, ಕೃತಿ ಬಿಡುಗಡೆ ಮಾಡಲಿದ್ದಾರೆ. ಚಿಂತಕ ವಿಶ್ವಾರಾಧ್ಯ ಸತ್ಯಂಪೇಟೆ, ಕೃತಿಗಳ ಕುರಿತು ಮಾತನಾಡಲಿದ್ದಾರೆ ಹಾಗೂ ಬಸವರಾಜ ಹಿರೇಮಠ, ಸಾಹಿತಿ ಹಾಗೂ ಸಂಶೋಧಕರಾದ ಡಾ.ಮೋನಪ್ಪ ಶಿರವಾಳ ಪ್ರಗತಿಪರ ಚಿಂತಕರಾದ ನೀಲಕಂಠ ಬಡಿಗೇರ, ಡಾ. ರಮೇಶ ಹಿರೇಮಠ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಆದ್ದರಿಂದ ಸಾಹಿತ್ಯಾಸಕ್ತರು, ಸಾಹಿತ್ಯಾಭಿಮಾನಿಗಳು ಹಾಗೂ ಡಿ.ಜಿ.ಬಳೂರಗಿಯವರ ಶಿಷ್ಯಂದಿರ ಬಳಗ ಹೆಚ್ಚಿನ ರೀತಿಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಬಸವರಾಜ ಸಿನ್ನೂರ ಹಾಗೂ ಪಂಚಾಕ್ಷರಿ ಹಿರೇಮಠ ಅವರು ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…