ಕಲಬುರಗಿ: ಕಲಬುರಗಿ ನಗರದ ೭೬ ವ?ದ ವಯೋವೃದ್ಧ ಕೋರೋನಾ ವೈರಸ್‌ನಿಂದ ನಿಧನವಾಗಿರುವ ಹಿನ್ನೆಲೆಯಲ್ಲಿ ಸದರಿ ವ್ಯಕ್ತಿ ವಾಸಿಸುವ ವಾರ್ಡ್ ನಂಬರ್ ೩೦ರ (ಕೆ.ಎನ್.ಜೆಡ್ ಫಂಕ್ಷನ್ ಹಾಲ್ ಬಳಿ) ಪ್ರದೇಶಕ್ಕೆ ಜಿಲ್ಲಾಧಿಕಾರಿ ಶರತ್ ಬಿ. ಸೇರಿದಂತೆ ಹಿರಿಯ ಅಧಿಕಾರಿಗಳು ಶುಕ್ರವಾರ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಪಾಲಿಕೆ ಮತ್ತು ಆರೋಗ್ಯಾಧಿಕರಿಗಳಿಗೆ ಸೊಂಕು ಹರಡುವಿಕೆಗೆ ತಡೆಗಟ್ಟಬಹುದಾದ ಎಲ್ಲಾ ಮುನ್ನೇಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚನೆ ನೀಡಿದರು.
ನಿಧನ ಹೊಂದಿದ ವ್ಯಕ್ತಿಯ ಮನೆಯಿರುವ ವಾರ್ಡ್‌ನ್ನು ಅಡಳಿತ ಬ್ಲಾಕ್/ ಕಂಟೇನ್‌ಮೆಂಟ್ ಝೋನ್ ಎಂದು ಪರಿಗಣಿಸಿ ಇಲ್ಲಿಂದ ಬೇರೆ ಪ್ರದೇಶಕ್ಕೆ ಸೊಂಕು ಹರಡದಂತೆ ಮುಂಜಾಗ್ರತವಾಗಿ ಸ್ಕ್ರೀನಿಂಗ್ ಮತ್ತು ಅರಿವು ಮೂಡಿಸುವ ಐ.ಇ.ಸಿ ಚಟುವಟಿಕೆಗಳು ತ್ವರಿತಗತಿಯಲ್ಲಿ ನಡೆಸಬೇಕು. ಇನ್ನು ಕಂಟೇನ್‌ಮೆಂಟ್ ಝೋನ್ ಸುತ್ತಮುತ್ತ ೫ ಕಿ.ಮೀ ಪ್ರದೇಶ ಬಫರ್ ಝೋನ್ ಎಂದು ಗುರುತಿಸಿ ಸೊಂಕಿನ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳು ನಿರಂತರ ನಡೆಯಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಖಡಕ್ ಸೂಚನೆ ನೀಡಿದರು.
ಜಿಲ್ಲಾ ಪೊಲೀಸ್ ಅಧೀಕ್ಷಕ ಯಡಾ ಮಾರ್ಟಿನ್, ಡಿಸಿಪಿ ಕಿಶೋರ್ ಬಾಬು, ಜಿಲ್ಲಾ ಪಂಚಾಯತಿ ಸಿ.ಇ.ಓ. ಡಾ.ಪಿ.ರಾಜಾ, ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ಪಾಂಡ್ವೆ ಸೇರಿದಂತೆ ಮಹಾನಗರ ಪಾಲಿಕೆ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳು ಈ ಸಂದರ್ಭದಲ್ಲಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…