ಸುರಪುರ: ತಾಲ್ಲೂಕಿನ ಅರಕೇರಾ ಜೆ. ಗ್ರಾಮದಲ್ಲಿರುವ ಗುರಯ್ಯಸ್ವಾಮಿ ಲೋಯೇರ್ ಅನಾಥಾಶ್ರಮಕ್ಕೆ ಚಿತ್ರನಟ ದರ್ಶನ್ ತನ್ನ ಹುಟ್ಟು ಹಬ್ಬದ ಅಂಗವಾಗಿ ಬೆಂಗಳೂರಿನಿಂದ ಕಳುಹಿಸಿ ಕೊಟ್ಟಿದ್ದ ಅಕ್ಕಿ ಬೇಳೆ ಮತ್ತಿತರೆ ದಿನಸಿಗಳನ್ನು ಅಭಿಮಾನಿಗಳು ವಿತರಿಸಿದರು.
ಈ ಸಂದರ್ಭದಲ್ಲಿ ದರ್ಶನ್ ಅಭಿಮಾನಿಗಳ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಮಲ್ಲಪ್ಪ ಕಬಾಡಗೇರಾ ಮಾತನಾಡಿ, ದರ್ಶನ್ ಅವರು ತಮ್ಮ ಸಂಪಾದನೆಯ ಅರ್ಧದಷ್ಟು ಹಣವನ್ನು ಬಡ ಬಗ್ಗರಿಗೆ, ಅನಾಥಾಶ್ರಮಕ್ಕೆ ದೇಣಿಗೆ ನೀಡುತ್ತಾರೆ ಅಲ್ಲದೆ ತಮ್ಮ ಜನ್ಮ ದಿನಕ್ಕೆ ಅಭಿಮಾನಿಗಳು ನೀಡಿದ ಅಕ್ಕಿ, ಬೇಳೆ ಇತರ ದಿನಸಿಗಳನ್ನು ರಾಜ್ಯದ ಅನಾಥಾಶ್ರಮಗಳಿಗೆ ಕಳಿಸಿಕೊಟ್ಟಿದ್ದಾರೆ.
ಅದರಂತೆ ದರ್ಶನ್ ಅವರು ಮುಂದಿನ ದಿನಗಳಲ್ಲಿ ಇನ್ನಷ್ಟು ಸಮಾಜಮುಖಿ ಕೆಲಸಗಳನ್ನು ಮಾಡಲು ತಿಳಿಸಿದ್ದಾರೆ. ಮುಂಬರುವ ದಿನಗಳಲ್ಲಿ ದರ್ಶನ್ ಹೆಸರಿನಲ್ಲಿ ರಕ್ತದಾನ ಶಿಬಿರ, ಉದ್ಯೋಗ ಮೇಳ, ಆರೋಗ್ಯ ಮೇಳ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ ಶರಣಪ್ಪ ಡಿಬಾಸ್, ಉಪಾಧ್ಯಕ್ಷ ಮೌನೇಶ ಕಟ್ಟಿಮನಿ, ರಾಘವೇಂದ್ರ ಗೋಗಿಕರ್, ರಾಜು ಹುಣಸಗಿ, ಮಲ್ಲು ಹುಣಸಗಿ, ಮಂಜು ಸುರಪುರ ಇತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…