ಕಲಬುರಗಿ: ಬೆಂಗಳೂರು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು ಹುಟ್ಟಿ ಸುಮಾರು ೧೦೫ ವರ್ಷಗಳನ್ನು ಯಶಸ್ವಿಯಾಗಿ ಪುರೈಸಿದ್ದು, ಆ ನಿಮಿತ್ತವಾಗಿ ರಾಜ್ಯಾಧ್ಯಂತ ಜಿಲ್ಲಾ, ತಾಲ್ಲೂಕು, ವಲಯ ಮಟ್ಟದಲ್ಲಿಗಳಲ್ಲಿ ೧೦೫ನೇ ಸಂಸ್ಥಾಪನಾ ದಿನಾಚರಣೆ ಆಚರಿಸಲಾಗಿದ್ದು, ಈಗಾಗಲೇ ಜಿಲ್ಲಾಮಟ್ಟದಲ್ಲಿ ಆಚರಿಸಲಾಗಿದೆ.
ಆ ದೀಸೆಯಲ್ಲಿ ಇದೆ ತಿಂಗಳ ೩ನೇ ವಾರದಲ್ಲಿ ಕಲಬುರಗಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವಿನೂತನವಾಗಿ ಹಮ್ಮಿಕೊಳ್ಳುವ ಸಾಹಿತ್ಯ ಪರಿಷತ್ತು ನಡೆದು ಬಂದ ದಾರಿ ಉಪನ್ಯಾಸ ಕಾರ್ಯಕ್ರಮದಲ್ಲಿ ೨೦೧೮-೧೯ರ ಸಾಲಿನ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಪರೀಕ್ಷೆಯಲ್ಲಿ ಯಾವುದೇ ಮಾಧ್ಯಮದವರಾದರೂ ಕನ್ನಡ ವಿಷಯದಲ್ಲಿ ನೂರಕ್ಕೆ ನೂರು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪುರಸ್ಕರಿಸಿ ಗೌರವಿಸಲಾಗುವುದು. ಇದು ಕಲಬುರಗಿ ತಾಲೂಕಿನ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯಸಂಬಂಧಿಸಿರುತ್ತದೆ.
ಮೇ. ೧೫ ರ ಒಳಗಾಗಿ ನಗರದ ಕನ್ನಡ ಭವನದಲ್ಲಿ ವಿದ್ಯಾರ್ಥಿಗಳು ತಾವು ಗಳಿಸಿದ ಅಂಕಗಳ ನಕಲುಪ್ರತಿ ಅಂಕಪಟ್ಟಿಯನ್ನು ಪರಿಶೀಲನೆಗಾಗಿ ಸಲ್ಲಿಸಬೇಕು ಎಂದು ಪರಿಷತ್ತಿನ ಅಧ್ಯಕ್ಷ ಸಿ.ಎಸ್ ಮಾಲಿಪಾಟೀಲ ಹಾಗೂ ಗೌರವ ಕಾರ್ಯದರ್ಶಿ ಡಾ. ಶರಣಬಸಪ್ಪ ವಡ್ಡನಕೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9108790711, 9448180918ಗೆ ಸಂಪರ್ಕಿಸಲು ಕೋರಲಾಗಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…