18ರಿಂದ ಕಲಬುರಗಿಯಲ್ಲಿ ಕೊರೋನಾ ವೈರಸ್ ಪತ್ತೆಹಚ್ಚುವ ಲ್ಯಾಬ್ ಆರಂಭ: ಸಂಸದ ಜಾಧವ್

0
34

ಕಲಬುರಗಿ: ನಗರದ ಜಿಮ್ಸ್ ಆಸ್ಪತ್ರೆಯಲ್ಲಿ ಕೊರೋನಾ ವೈರಸ್ ಪತ್ತೆ ಹಚ್ಚುವ ಆರ್ ಟಿ ಪಿಸಿಆರ್ ಟೆಸ್ಟ್ ಲ್ಯಾಬ್ (VRDL LAB) ದಿ:18 ರಿಂದು ಕಾರ್ಯಾರಂಭ ಮಾಡಲಿದ್ದು, ಲ್ಯಾಬ್ ಸ್ಥಾಪಿಸುವ ನಿಟ್ಟಿನಲ್ಲಿ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರನ್ನು ಇಂದು ಭೇಟಿ ಮಾಡಿ ಪ್ರಸ್ತಾಪಿಸಿದ್ದೇನೆ ಎಂದು ಲೋಕಸಭಾ ಸದಸ್ಯ ಉಮೇಶ್ ಜಾಧವ್ ಅವರು ಟ್ವೀಟ್ ಮಾಡಿ ತಿಳಿಸಿದ್ದಾರೆ.

ನವದೆಹಲಿಯಲ್ಲಿರುವ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಮಹಾನಿರ್ದೇಶಕರ ಜೊತೆ ಮಾತುಕತೆ ನಡೆಸಿದ್ದು, ಲ್ಯಾಬ್ ಗೆ ಸಂಬಂಧಪಟ್ಟ ಪರಿಕರಗಳು ಹಾಗೂ ರಾಸಾಯನಿಕ ವಸ್ತುಗಳನ್ನು ಕಳುಹಿಸಲಾಗಿದೆ. ನಾಳೆ (ಮಾ.17)ರೊಳಗೆ ಇವು ಕಲಬುರಗಿ ತಲುಪಲಿವೆ ಎಂದು ಟ್ವೀಟ್ ಮಾಡಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here