ಕಲಬುರಗಿ: ಮಹಾಮಾರಿ ಕೊರೋನಾ ವೈರಸ್ ಎಲ್ಲೆಡೆ ಹಬ್ಬಿರುವುದರಿಂದ ಇದರ ನಿಯಂತ್ರಣಕ್ಕೆ ಕಲಬುರಗಿ ಜಿಲ್ಲೆಯಲ್ಲಿ ಜಿಲ್ಲಾಡಳಿತ ಹಲವು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಇದಕ್ಕೆ ಪೂರಕವಾಗಿ ಸರ್ಕಾರಿ ನೌಕರರು ಜಿಲ್ಲಾಳಿತದೊಂದಿಗೆ ಕೈಜೋಡಿಸಿ ಹಗಲಿರುಳು ಶ್ರಮಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಲಬುರಗಿ ಜಿಲ್ಲಾಧ್ಯಕ್ಷ ರಾಜು ಲೇಂಗಟಿ ಅವರು ನೌಕರ ಬಾಂಧವರಿಗೆ ಕರೆ ನೀಡಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಕೊರೋನಾ ವಿಶ್ವವ್ಯಾಪಿಯಾಗಿದ್ದರಿಂದ ರಾಜ್ಯದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಘೋಷಣೆಯಾಗಿದೆ. ಜಿಲ್ಲಾಧಿಕಾರಿ ಶರತ್ ಬಿ. ನೇತೃತ್ವದ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಮತ್ತು ವಿಶೇಷವಾಗಿ ಆರೋಗ್ಯ ಇಲಾಖೆಯ ಅಧಿಕಾರಿ-ಸಿಬ್ಬಂದಿಗಳು ಕೊರೋನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಂಡಿದಲ್ಲದೆ ಹಗಲು ರಾತ್ರಿ ಎನ್ನದೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂದಿದ್ದಾರೆ.
ಜಿಲ್ಲಾಡಳಿತಕ್ಕೆ ನೈತಿಕ ಬೆಂಬಲವಾಗಿ ಸರ್ಕಾರದ ಸಲಹೆ ಮತ್ತು ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರ ಜೊತೆಗೆ ಅದಕ್ಕೆ ಪೂರಕವಾಗಿ ಎಲ್ಲಾ ನೌಕರ ಬಾಂಧವರು ಕಾರ್ಯನಿರ್ವಹಿಸಬೇಕು. ಈ ಮೂಲಕ ಮಾನವ ಕುಲಕ್ಕೆ ಕಂಟಕವಾಗಿರುವ ಕೋವಿಡ್-೧೯ನ್ನು ನಿಯಂತ್ರಿಸಿ ಜಿಲ್ಲೆ ಮತ್ತು ನಾಡಿನ ಜನತೆಯನ್ನು ಕೊರೋನಾ ವೈರಸ್‌ನಿಂದ ರಕ್ಷಿಸೋಣ ಎಂದು ರಾಜು ಲೇಂಟಗಿ ಅವರು ನೌಕರರಲ್ಲಿ ಮನವಿ ಮಾಡಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…