ಬಿಸಿ ಬಿಸಿ ಸುದ್ದಿ

ವಿದೇಶದಿಂದ ಬರುವವರ ಬಗ್ಗೆ ಮಾಹಿತಿ ನೀಡಿರಿ: ಜಿಲ್ಲಾಧಿಕಾರಿ ಶರತ್. ಬಿ

ಕಲಬುರಗಿ: ಕೊರೋನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ವಿದೇಶದಿಂದ ಕಲಬುರಗಿ ಜಿಲ್ಲೆಗಳಿಗೆ ಬರುವ ವ್ಯಕ್ತಿಗಳು ಸ್ವಯಂ ಆಗಿ ಮಾಹಿತಿಯನ್ನು ನೀಡಬೇಕು ಎಂದು ಜಿಲ್ಲಾಧಿಕಾರಿಗಳಾದ ಶರತ್. ಬಿ ಅವರು ಕೋರಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ಸಹಾಯಕ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಇಂದು ಕರೆದಿದ್ದ ಮುಸ್ಲಿಂ ಧಾರ್ಮಿಕ ಮುಖಂಡರು ಹಾಗೂ ನಾಯಕರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.
ಯಾರಾದರೂ ನಿಮ್ಮ ನೆರೆಹೊರೆಯವರು ವಿದೇಶದಿಂದ ಬಂದ ಬಗ್ಗೆ ಮಾಹಿತಿ ಇದ್ದರೆ ಕೂಡ ನೀಡಬೇಕು ಎಂದು ಮನವಿ ಮಾಡಿದರು.

ಈ ಬಗ್ಗೆ ಮಾಹಿತಿ ನೀಡಿದರೆ, ಸುಲಭವಾಗಿ ಕೊರೋನಾ ಶಂಕಿತರನ್ನು ಗುರುತಿಸಬಹುದು ಎಂದು ಅವರು ಹೇಳಿದರು.
ಯಾರನ್ನು ಹೋಂ ಕ್ವಾರಾಂಟೀನ್ ನಲ್ಲಿ ಇರಲು ಸೂಚಿಸಲಾಗಿದೆಯೋ, ಅವರು ಮನೆಯಲ್ಲಿಯೇ ಇರಬೇಕು ಎಂದು ಹೇಳಿದರು.

ಸಾರ್ವಜನಿಕ ಸಭೆ-ಸಮಾರಂಭಗಳಲ್ಲಿ ಭಾಗವಹಿಸುವುದನ್ನು ಕಡಿಮೆ ಮಾಡಬೇಕು. ಯಾರಿಗೂ ಕೈಕುಲುಕಬಾರದು, ಕೈಯಿಂದ ಬಾಯಿ, ಕಣ್ಣು, ಮೂಗುಗಳನ್ನು ಮುಟ್ಟಬಾರದು. ಆಗಾಗ ಕೈ ತೊಳೆಯಬೇಕು ಮುಂತಾದ ಜಾಗ್ರತೆ ವಹಿಸಬೇಕು ಎಂದು ತಿಳಿಸಿದರು.

ಶ್ವಾಸಕೋಶದ ತೊಂದರೆ ಇರುವವರಿಗೆ ಹೆಚ್ಚು ಸಮಸ್ಯೆ ಆಗಲಿದ್ದು, ಎಚ್ಚರ ವಹಿಸಬೇಕು ಎಂದು ಹೇಳಿದರು.
ಕಲಬುರಗಿ ನಗರ ಪೊಲೀಸ್ ಆಯುಕ್ತ ಎಂ.ಎನ್. ನಾಗರಾಜ್ ಅವರು ಮಾತನಾಡಿ, ಜನರು ಓಡಾಡದೆ ಮನೆಯಲ್ಲೇ ಇದ್ದರೆ, ಈ ರೋಗ ತಡೆಗಟ್ಟುವಲ್ಲಿ ಯಶಸ್ವಿಯಾಗಬಹುದು. ಇಲ್ಲದಿದ್ದಲ್ಲಿ ರಾಜ್ಯವ?ಯಲ್ಲ, ಇಡೀ ದೇಶವನ್ನೇ ಅಪಾಯಕ್ಕೆ ತಂದೊಡ್ಡಲಿದೆ ಎಂದು ಅವರು ಎಚ್ಚರಿಸಿದರು.

ಕೊರೋನಾ ವೈರಸ್ ಭೀತಿಯಿಂದ ಸೌದಿ ಅರೇಬಿಯಾದ ಮುಸ್ಲಿಮರ ಪವಿತ್ರ ಕ್ಷೇತ್ರ ಮೆಕ್ಕಾದ ಐತಿಹಾಸಿಕ ಮಸೀದಿಯನ್ನೇ ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಅದೇ ರೀತಿ ಮಸೀದಿ, ದೇವಸ್ಥಾನ ಮುಂತಾದ ಧಾರ್ಮಿಕ ಸ್ಥಳಗಳಲ್ಲಿ ಹೆಚ್ಚು ಜನ ಸೇರಬಾರದು ಎಂದು ಮನವಿ ಮಾಡಿದರು.

ಕೊರೋನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಮುಂದಿನ ಒಂದು ತಿಂಗಳ ಕಾಲ ಮಹತ್ವದ್ದಾಗಿದೆ. ೧೪೪ ಸೆಕ್ಷನ್ ಹೇರಿ ರೋಗ ತಡೆಯಲು ಅಸಾಧ್ಯ. ಇದರಲ್ಲಿ ಹಾಗಾಗಿ ಜನರ ಸಹಕಾರ ಅತ್ಯಗತ್ಯ ಎಂದು ಪ್ರತಿಪಾದಿಸಿದರು.
ಡಿಸಿಪಿ ಕಿಶೋರ್ ಬಾಬು, ಎಸಿಪಿಗಳಾದ ಗಿರೀಶ್, ವಿಜಯ್ ಕುಮಾರ್, ಸಂಚಾರ ವಿಭಾಗದ ಎಸಿಪಿ ವಿರೇಶ್ ಕರಡಿಗುಡ್ಡ, ಸಿಪಿಐ ರಮೇಶ್ ಕಾಂಬ್ಳೆ ಮುಂತಾದ ಪೊಲೀಸ್ ಅಧಿಕಾರಿಗಳು ಹಾಜರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

4 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

14 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

14 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

14 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago