ಕಲಬುರಗಿ: ಕೊರೋನಾ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಲಬುರಗಿಯಿಂದ ಹೊರಹೋಗುವ ಮತ್ತು ಒಳಬರುವ ಎಲ್ಲಾ ಖಾಸಗಿ ಬಸ್‌ಗಳ ಸಂಚಾರವನ್ನು ಸ್ಥಗಿತಗೊಳಿಸುವಂತೆ ಜಿಲ್ಲಾಧಿಕಾರಿಗಳಾದ ಬಿ.ಶರತ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಇಂದು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಖಾಸಗಿ ಟ್ರಾವೆಲರ್ಸ್ ಮತ್ತು ಬುಕ್ಕಿಂಗ್ ಏಜೆಂಟರ ಸಭೆಯಲ್ಲಿ ಅವರು ಕಟ್ಟಪ್ಪಣೆ ಮಾಡಿ, ರಾಜ್ಯದ ರಾಜಧಾನಿ ಬೆಂಗಳೂರು, ಇತರೆ ಜಿಲ್ಲೆಗಳು, ನೆರೆರಾಜ್ಯಗಳಾದ ಮಹಾರಾಷ್ಟ್ರ, ತೆಲಂಗಾಣ ಹಾಗೂ ಆಂಧ್ರ ಪ್ರದೇಶಗಳಿಗೆ ತೆರಳುವ ಮತ್ತು ಜಿಲ್ಲೆಯೊಳಗೆ ಬರುವ ಬಸ್‌ಗಳ ಸಂಚಾರ ನಿಲ್ಲಿಸಬೇಕು. ಈಗಾಗಲೇ ಬುಕ್ಕಿಂಗ್ ಮಾಡಿರುವ ಸೀಟುಗಳ ಟಿಕೆಟ್ ಗಳನ್ನು ರದ್ದುಮಾಡುವಂತೆ ಬಸ್ ಮಾಲೀಕರು ಮತ್ತು ಏಜಂಟರಿಗೆ ಸೂಚನೆ ನೀಡಿ, ಮುಂದಿನ ಆದೇಶದವರೆಗೆ ಇದನ್ನು ಪಾಲಿಸಬೇಕೆಂದು ಅವರು ತಿಳಿಸಿದರು.
ಒಂದುವೇಳೆ, ಈ ಸೂಚನೆಯನ್ನು ಮೀರಿ ಬಸ್‌ಗಳ ಓಡಾಟ ನಡೆಸಿದಲ್ಲಿ, ಅಂತಹ ವಾಹನಗಳನ್ನು ಜಫ್ತಿ ಮಾಡಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದರು. ಜಿಲ್ಲೆಯಲ್ಲಿ ೧೭ ಚೆಕ್ ಪೋಸ್ಟ್ ತೆರೆದಿದ್ದು, ಬಸ್ ಗಳ ಸಂಚಾರದ ಮೇಲೆ ನಿಗಾವಹಿಸಲಾಗುತ್ತದೆ ಎಂದರು.
ಇತ್ತೀಚೆಗೆ ಕೆಲವರು ಮುಂಬೈ, ಪುಣೆ, ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ಇಳಿದು, ಬಸ್‌ಗಳ ಮೂಲಕ ಕಲಬುರಗಿ ಜಿಲ್ಲೆಗೆ ಬಂದಿರುತ್ತಾರೆ. ಹಾಗಾಗಿ ಇದುವರೆಗೆ ಕಲಬುರಗಿ ನಗರ ಮತ್ತು ಜಿಲ್ಲೆಗೆ ಬಂದಿರುವ ಪ್ರಯಾಣಿಕರ ಸಂಪೂರ್ಣ ವಿವರ ನೀಡುವಂತೆಯೂ ಅವರು ಇದೇ ಸಂದರ್ಭದಲ್ಲಿ ಏಜೆಂಟರಿಗೆ ಸೂಚಿಸಿದರು. ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ದಾಮೋದರ ಮುಂತಾದವರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…