ಬಿಸಿ ಬಿಸಿ ಸುದ್ದಿ

ವಿದ್ಯುತ್ ಕಂಬ ಹತ್ತಿದ ಲೈನ್ ಮೆನ್ ಗೆ ವಿದ್ಯುತ್ ತಗುಲಿ ಕಂಬದ ಮೇಲೆ ಮೃತ್ಯು

ಕಲಬುರಗಿ: ವಿದ್ಯುತ್‌ ದುರಸ್ತಿ ಕಾರ್ಯದಲ್ಲಿ ತೊಡಗಿದ್ದ ಲೈನ್​ಮೆನ್ ಕಂಬದ ಮೇಲೆ ​ ವಿದ್ಯುತ್‌ ಸ್ಪರ್ಶಿಸಿ ಮೃತಪಟ್ಟಿರುವ ಘಟನೆ ಗುಲಬರ್ಗಾ ವಿಶ್ವ ವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಇಬ್ರಾಹೀಂ ಮೃತಪಟ್ಟ ಲೈನ್ ಮೆನ್ ಎಂದು ತಿಳಿದುಬಂದಿದೆ,  ಕಳೆದ ರಾತ್ರಿ ಜಿಲ್ಲೆಯಲ್ಲಿ ಮಳೆಯಿಂದ ಹಲವೆಡೆ ವಿದ್ಯುತ್​​ ಸಂಪರ್ಕ ಸ್ಥಗಿತಗೊಂಡಿದ್ದು, ಇಂದು ಬೆಳಿಗ್ಗೆ ಇಲ್ಲಿನ ಗುಲ್ಬರ್ಗಾ ವಿಶ್ವವಿದ್ಯಾಲಯ ಆವರಣದಲ್ಲಿ ವಿದ್ಯುತ್ ದುರಸ್ತಿ ಕಾರ್ಯದಲ್ಲಿ ತೊಡಗಿದ್ದ ಇಬ್ರಾಹಿಂ ವಿದ್ಯುತ್ ಕಂಬ ಹತ್ತಿ ದುರಸ್ತಿ ಮಾಡುತ್ತಿದ್ದ ವೇಳೆಯಲ್ಲಿ, ವಿದ್ಯುತ್​​​ ಸ್ಪರ್ಶಿಸಿ ಕಂಬದ ಮೇಲೆಯೇ ಇಬ್ರಾಹಿಂ ಮೃತಪಟ್ಟಿದ್ದಾರೆ.

ಕಂಬ ಹತ್ತುವ ಮುಂಚೆ ಮುಖ್ಯ​ ಲೈನ್​ ಬಂದ್​​ ಮಾಡಲಾಗಿತ್ತು ಎಂದು ಹೇಳಲಾಗುತ್ತಿದ್ದು, ಯಾರೋ ಫ್ಯೂಜ್​ ಹಾಕಿರೋ ಸಾಧ್ಯತೆಯಿಂದ ಘಟನೆ ನಡೆದಿದೆ ಎಂದು ಅನುಮಾನ ವ್ಯಕ್ತವಾಗಿದೆ.

ಈ ಕುರಿತು ಮಾಹಿತಿ ಪಡೆದ ವಿಶ್ವವಿದ್ಯಾಲಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

10 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

10 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

12 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

12 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

12 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

12 hours ago