ಕಲಬುರಗಿ: ಕರೋನಾ ವೈರಸ್ ಸೋಂಕಿತ ವೃದ್ಧನ ಸಾವಿನಿಂದಾಗಿ ಕಲಬುರಗಿ ಸಂಪೂರ್ಣವಾಗಿ ಸ್ತಬ್ದಗೊಂಡಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಇಂದು ರಾತ್ರಿ 8 ಗಂಟೆಯಿಂದಲೇ ಜಾರಿಯಾಗುವಂತೆ 144 ಕಲಂ ಜಾರಿಗೆ ತರಲಾಗಿದೆ.
ಕಳೆದ ಮೂರ್ನಾಲ್ಕು ದಿನಗಳಿಂದ ಅಂಗಡಿ ಮುಂಗಟ್ಟುಗಳು ಬಂದ್ ಆಗಿ ಜನ ಸಂಚಾರ ಕಡಿಮೆಯಾಗಿತ್ತು. ಆದರೂ ಜನ ರಸ್ತೆ ಯಲ್ಲಿ ಓಡಾಡುವುದನ್ನು ನಿಲ್ಲಿಸಿರಲಿಲ್ಲ. ಜನತೆಯ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ನಗರದಲ್ಲಿ 144 ಕಲಂ ಜಾರಿ ಮಾಡಲಾಗಿದ್ದು, ಜನ ಗುಂಪು ಗುಂಪಾಗಿ ತಿರುಗಾಡುವುದನ್ನು ನಿಲ್ಲಿಸಬೇಕೆಂದು ಜಿಲ್ಲಾಧಿಕಾರಿ ಬಿ. ಶರತ್ ಸೂಚಿಸಿದ್ದಾರೆ.