ಬಿಸಿ ಬಿಸಿ ಸುದ್ದಿ

ಆಲ್ದಾಳ ಗ್ರಾಮದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ತಡೆದ ಅಧಿಕಾರಿಗಳು

ಸುರಪುರ: ತಾಲೂಕಿನ ಆಲ್ದಾಳ ಗ್ರಾಮದ ಮನೆಯೊಂದರಲ್ಲಿ ಬಾಲ್ಯ ವಿವಾಹ ನಡೆಯುತ್ತಿದೆ ಎಂದು ಮಕ್ಕಳ ಸಹಾಯವಾಣಿ ೧೦೯೮ಗೆ ಯಾರೋ ಫೋನ್ ಮಾಡಿ ಮಾಹಿತಿ ನೀಡಿದ್ದರಿಂದ ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ವಿವಾಹ ನಡೆಯುತ್ತಿದ್ದ ಮನೆಗೆ ದಿಢೀರ ಭೇಟಿ ನೀಡಿ ವಿವಾಹ ನಡೆಯದಂತೆ ತಡೆದಿರುವ ಘಟನೆ ನಡೆದಿದೆ.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ಅಶೋಕ ರಾಜನ್ ಹಾಗೂ ದಶರಥ ನಾಯಕ (ಅಸಾಂಸ್ಥಿಕ) ನೇತೃತ್ವದಲ್ಲಿ ಅಧಿಕಾರಿಗಳ ತಂಡ ವಿವಾಹ ನಡೆಯುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿದಾಗ ಅಲ್ಲಿ ನಡೆಯುತ್ತಿದ್ದ ಎರಡು ಜೋಡಿಗಳ ವಿವಾಹ ಕಾರ್ಯಕ್ರಮದಲ್ಲಿ ಒಂದು ಜೋಡಿಯ ಹುಡುಗ ಹಾಗೂ ಹುಡುಗಿ ಇಬ್ಬರೂ ಅಪ್ರಾಪ್ತ ವಯಸ್ಸಿನವರಾಗಿರುವುದು ಕಂಡು ಬಂತು, ವಿವಾಹ ನಡೆಯುತ್ತಿದ್ದ ಬಾಲಕನಿಗೆ ೧೯ವರ್ಷ ಹಾಗೂ ಬಾಲಕಿಗೆ ೧೦ವರ್ಷ ಇರುವದನ್ನು ಖಚಿತಪಡಿಸಿಕೊಂಡ ಅಧಿಕಾರಿಗಳು ಬಾಲಕಿಯನ್ನು ವಶಕ್ಕೆ ಪಡೆದರು ನಂತರ ಬಾಲ್ಯ ವಿವಾಹ ನಡೆಸದಂತೆ ಪಾಲಕರಿಗೆ ತಿಳಿಸಿದರು.

ಅಂಸಾಸ್ಥಿಕ ರಕ್ಷಣಾಧಿಕಾರಿ ದಶರಥ ನಾಯಕ ಅವರು ಸರಕಾರದ ಕಾನೂನು ಪ್ರಕಾರ ಹುಡುಗನಿಗೆ ೨೧ ವರ್ಷ ಹಾಗೂ ಹುಡುಗಿಗೆ ೧೮ ವರ್ಷಗಳು ತುಂಬಿರಬೇಕು ಆದರೆ ಇಲ್ಲಿ ನಡೆಯುತ್ತಿರುವ ವಿವಾಹವು ಸರಕಾರದ ಕಾನೂನಿಗೆ ವಿರುದ್ಧವಾಗಿ ನಡೆಯುತ್ತಿದ್ದು ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗೂ ಶಿಕ್ಷೆ ಮತ್ತು ಬಾಲ್ಯ ವಿವಾಹದಿಂದ ಆಗುರವ ದುಷ್ಪರಿಣಾಮಗಳು ಕುರಿತು ಬಾಲಕ ಮತ್ತು ಬಾಲಕಿಯರ ತಂದೆ-ತಾಯಿ, ಪೋಷಕರು ಹಾಗೂ ಸ್ಥಳದಲ್ಲಿದ್ದ ಊರಿನ ಪ್ರಮುಖರಿಗೆ ತಿಳಿಸಿ ಮನವರಿಕೆ ಮಾಡಿಕೊಟ್ಟರು ನಂತರ ಬಾಲ್ಯ ವಿವಾಹ ಮಾಡದಂತೆ ಪೋಷಕರಿಂದ ಮುಚ್ಚಳಿಕೆ ಪತ್ರ ಬರೆಸಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಪೋಲಿಸ್ ಇಲಾಖೆಯ ಸಿದ್ಧಾರೂಢ, ಮಹಿಳಾ ಮೇಲ್ವಿಚಾರಕಿ ಸರೋಜಿನಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

6 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

6 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

8 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

8 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

8 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

8 hours ago