ಕಲಬುರಗಿ: ಕೊರೋನಾ ಸೊಂಕು ಹರಡದಂತೆ ಮುಂಜಾಗ್ರತವಾಗಿ ಕಲಬುರಗಿ ನಗರದ ವಾರ್ಡ್ ಸಂಖ್ಯೆ 14 ಸಹ ಕಂಟೇನ್‍ಮೆಂಟ್ ಝೋನ್ ಎಂದು ಘೋಷಿಸಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿ ಶರತ್ ಬಿ. ಹೇಳಿದರು.
ಗುರುವಾರ ಇಲ್ಲಿನ ವಾರ್ತಾ ಭವನದಲ್ಲಿ ಕರೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡುತ್ತಾ, ಕೋವಿಡ್-19 ಸೋಂಕಿನಿಂದ ಮೃತಪಟ್ಟ ಕಲಬುರಗಿ ವಯೋವೃದ್ಧನ ಮನೆಯಿರುವ ವಾರ್ಡ್ ಸಂಖ್ಯೆ 30ರ ಜೊತೆಗೆ ವಾರ್ಡ್ ಸಂಖ್ಯೆ 14 ಸಹ ಸೇರಿಸಿ ಎರಡು ವಾರ್ಡ್‍ಗಳಲ್ಲಿ ಸ್ಕ್ರೀನಿಂಗ್ ಮತ್ತು ಸ್ಯಾನಿಟೈಜೇಷನ್ ಮಾಡಲಾಗಿದೆ ಎಂದರು.
ಕಲಬುರಗಿ ಜಿಲ್ಲೆಯಿಂದ ಇದೂವರೆಗೆ ಕೋವಿಡ್-19 ಪರೀಕ್ಷೆಗೆ ಮೃತ ವಯೋವೃದ್ಧ ವ್ಯಕ್ತಿ ಸೇರಿದಂತೆ ಒಟ್ಟಾರೆ 22 ಸ್ಯಾಂಪಲ್ಸ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಇದರಲ್ಲಿ 8 ನೆಗೆಟಿವ್ ಮತ್ತು 3 ಪಾಸಿಟಿವ್ ಬಂದಿದೆ. ಎರಡು ಪ್ರಕರಣದಲ್ಲಿ ತಾಂತ್ರಿಕ ಕಾರಣದಿಂದ ಪರೀಕ್ಷೆಯಾಗಿರುವುದಿಲ್ಲ. ಇನ್ನೂ 9 ಪ್ರಕರಣದಲ್ಲಿ ವೈದ್ಯಕೀಯ ಪರೀಕ್ಷೆಯ ವರದಿ ಬರಬೇಕಿದೆ ಎಂದು ವಿವರ ನೀಡಿದರು.
ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ಹೊಂದಿದ ವ್ಯಕ್ತಿಗಳೊಂದಿಗೆ ನೇರ ಸಂಪರ್ಕ ಹೊಂದಿರುವ 98 ಜನ ಹಾಗೂ ಎರಡನೇ ಸಂಪರ್ಕ ಹೊಂದಿರುವ 333 ಜನರನ್ನು ಗುರುತಿಸಲಾಗಿದೆ. ಇದಲ್ಲದೆ ವಿದೇಶದಿಂದ ಆಗಮಿಸಿದ 250 ಜನರನ್ನು ಸಹ ಪತ್ತೆ ಹಚ್ಚಲಾಗಿ ಒಟ್ಟಾರೆ ಇದೂವರೆಗೆ 641 ಜನರನ್ನು ಹೋಂ ಕ್ವಾರಂಟೈನ್‍ನಲ್ಲಿಟ್ಟು ಎಲ್ಲರ ಮೇಲೆ ನಿಗಾ ವಹಿಸಿದೆ. 11 ಜನರನ್ನು ಐಸೋಲೇಟೆಡ್ ವಾರ್ಡ್‍ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಶರತ್ ಬಿ. ಅವರು ಅಂಕಿ-ಸಂಖ್ಯೆಯೊಂದಿಗೆ ವಿವರ ನೀಡಿದರು.
ಸುಳ್ಳು ಸುದ್ದಿ ಹರಡಿಸಿದರೆ ಕ್ರಮ: ಸಾಮಾಜಿಕ ಜಾಲತಾಣದಲ್ಲಿ ಬರುವ ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ. ಸುಳ್ಳು ಸುದ್ದಿ ಹರಡಿಸಿದವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ನಗರ ಪೊಲೀಸ್ ಆಯುಕ್ತರು ಮತ್ತು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ತಿಳಿಸಲಾಗಿದೆ ಎಂದರು.
4720 ಮನೆ ಸರ್ವೇ, ಸ್ಕ್ರೀನಿಂಗ್:- ಜಿಲ್ಲೆಯಲ್ಲಿ ಇದೂವರೆಗೆ ಪತ್ತೆಯಾದ ಕೊರೋನಾ ಪಾಸಿಟಿವ್ (ಮೃತ ವ್ಯಕ್ತಿ ಸೇರಿದಂತೆ) ಪ್ರಕರಣದ ರೋಗಿಗಳ ಮನೆ ಸುತ್ತಮುತ್ತ ಒಟ್ಟಾರೆ 4720 ಮನೆಗಳನ್ನು ಸರ್ವೆ ಮಾಡಿ ಅಲ್ಲಿ ಮುಂಜಾಗೃತ ಕ್ರಮವಾಗಿ ಸ್ಕ್ರೀನಿಂಗ್, ಸ್ಯಾನಿಟೈಜೇಷನ್ ಮತ್ತು ಅರಿವು ಮೂಡಿಸುವ ಕಾರ್ಯಕ್ರಮ ನಡೆಯುತ್ತಿದೆ ಎಂದರು.
32 ವೆಂಟಿಲೇಟರ್ ಲಭ್ಯ:- ಸರ್ಕಾರಿ ವ್ಯವಸ್ಥೆಯಡಿ ಜಿಲ್ಲೆಯಲ್ಲಿ 32 ವೆಂಟಿಲೇಟರ್ ಲಭ್ಯ ಇವೆ. ಜಿಮ್ಸ್ ಮತ್ತು ಇ.ಎಸ್.ಐ.ಸಿ.ಯ ಐಸೋಲೇಷನ್ ವಾರ್ಡ್‍ನಲ್ಲಿ ತಲಾ 2 ವೆಂಟಿಲೇಟರ್‍ಗಳು ವಿಶೇಷವಾಗಿ ಕೊರೋನಾ ಸೊಂಕಿತ ರೋಗಿಗಳ ಚಿಕಿತ್ಸೆಗೆಂದೆ ಮೀಸಲಿರಿಸಿದೆ. ಅಗತ್ಯವಿದ್ದಲ್ಲಿ ಹೆಚ್ಚಿನ ವೆಂಟಿಲೇಟರ್‍ಗಳನ್ನು ಪೂರೈಸಲಾಗುವುದು ಎಂದು ಡಿ.ಸಿ. ಶರತ್ ಬಿ. ತಿಳಿಸಿದರು.
ಸಹಾಯವಾಣಿ ಸಂಖ್ಯೆ 4ಕ್ಕೆ ಹೆಚ್ಚಳ: ಕೊರೋನಾ ವೈರಸ್ ಕುರಿತು ವಿದೇಶದಿಂದ ಬಂದ ವ್ಯಕ್ತಿಗಳ ಬಗ್ಗೆ ಮಾಹಿತಿ ನೀಡಲು ಮತು ಜನರು ಈ ವಿಷಯದ ಕುರಿತು ತುರ್ತಾಗಿ ಜಿಲ್ಲಾಡಳಿತಕ್ಕೆ ಸಂಪರ್ಕಿಸಲು ಸ್ಥಾಪಿಸಲಾದ 24 ಗಂಟೆ ಸಹಾಯವಾಣಿ ಸಂಖ್ಯೆಗಳನ್ನು 2 ರಿಂದ 4ಕ್ಕೆ ಹೆಚ್ಚಿಸಲಾಗಿದೆ. ಈಗಾಗಲೆ ಸ್ಥಾಪಿಸಲಾಗಿರುವ ಸಹಾಯವಾಣಿ ಸಂಖ್ಯೆ 08472-278604/ 278677 ಜೊತೆಗೆ 08472-278648/ 278698 ಸಹಾಯವಾಣಿ ಹೊಸದಾಗಿ ತೆರೆಯಲಾಗಿದ್ದು, ಸಾರ್ವಜನಿಕರು ಈ ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ, ಹುಸಿ ಕರೆ ಮಾಡಿದ ವ್ಯಕ್ತಿ ಪೊಲೀಸ್ ವಶಕ್ಕೆ: ಸಹಾಯವಾಣಿಗೆ ಎರಡು ಹುಸಿ ಕರೆ ಬಂದಿದ್ದು, ಕರೆ ಮಾಡಿದ ವ್ಯಕ್ತಿಗಳನ್ನು ಪೊಲೀಸ್ ವಶಕ್ಕೆ ಒಪ್ಪಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಸೂಚಿಸಿದೆ ಎಂದರು. ವಿದೇಶದಿಂದ ಮರಳಿದರೆ ಮಾಹಿತಿ ಕೊಡಿ: ಸ್ಥಳೀಯ ವ್ಯಕ್ತಿ ಅಥವಾ ಹೊಸದಾಗಿ ಯಾರೇ ಹೊರದೇಶದಿಂದ ಕಲಬುರಗಿ ಜಿಲ್ಲೆಗೆ ಬಂದಲ್ಲಿ ಸ್ವಯಂಪ್ರೇರಿತರಾಗಿ ಅವರು ಮಾಹಿತಿ ನೀಡುವ ಮೂಲಕ ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು.
ಸಾರ್ವಜನಿಕರು ಮನೆಯಿಂದ ಹೊರಬರಬೇಡಿ: ಕೊರೋನಾ ಸಾಂಕ್ರಾಮಿಕ ಸೊಂಕು ಆಗಿದ್ದರಿಂದ ಸಾರ್ವಜನಿಕರು ಅನಾವಶ್ಯಕ ಮನೆಯಿಂದ ಹೊರಗಡೆ ಬರಬೇಡಿ. ಅಗತ್ಯ ವಸ್ತು ಪಡೆಯಲು ಓರ್ವ ಕುಟುಂಬದ ಸದಸ್ಯ ಬಂದರೆ ಸಾಕು ಎಂದು ಡಿ.ಸಿ. ಮನವಿ ಮಾಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಜಿಲ್ಲಾ ಪಂಚಾಯತ್ ಸಿ.ಇ.ಓ ಡಾ.ಪಿ.ರಾಜಾ, ಡಿ.ಸಿ.ಪಿ ಕಿಶೋರ ಬಾಬು, ಮಹಾನಗರ ಪಾಲಿಕೆಯ ಆಯುಕ್ತ ರಾಹುಲ ಪಾಂಡ್ವೆ ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…