ಕಲಬುರಗಿ: ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಅಫಜಲಪುರ ತಾಲೂಕಿನ ದೇವಲಗಾಣಗಾಪುರದ ಶ್ರೀ ದತ್ತಾತ್ರೇಯ ದೇವಸ್ಥಾನದಲ್ಲಿ ನಡೆಯುವ ಸಭೆ, ಸಮಾರಂಭ ಹಾಗೂ ಮತ್ತಿತರ ಜನಸಂದಣಿ ಸೇರುವ ಕಾರ್ಯಕ್ರಮಗಳ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ ಎಂದು ಅಫಜಲಪುರ ತಾಲೂಕಿನ ಗಾಣಗಾಪುರ ಶ್ರೀ ದತ್ತಾತ್ರೇಯ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದರ ಜೊತೆಗೆ ಭಕ್ತಾಧಿಗಳು ಸ್ವಯಂ ಆಗಿ ದೇವರ ದರ್ಶನಕ್ಕೆ ಬರುವುದು, ಪೂಜಾ ಸೇವೆಗಳನ್ನು, ನಿತ್ಯ ಅನ್ನಸಂತರ್ಪಣೆ ಹಾಗೂ ದೇವರ ದರ್ಶನ ಸೇರಿದಂತೆ ಉಳಿದ ಎಲ್ಲ ಸೇವೆಗಳನ್ನು ಮುಂದಿನ ಆದೇಶದವರೆಗೆ ರದ್ದುಪಡಿಸಲಾಗಿದೆ. ಈ ದೇವಸ್ಥಾನದಲ್ಲಿ ರಾಜ್ಯ ಮತ್ತು ನೆರೆ ರಾಜ್ಯದಿಂದ ಬರುವ ಭಕ್ತಾಧಿಗಳಿಗೆ ಹಾಗೂ ಸಾರ್ವಜನಿಕರಿಗೆ ದೇವಸ್ಥಾನದ ವಸತಿ ಕೋಣೆ ಮತ್ತು ಯಾತ್ರಿ ನಿವಾಸದ ಕೋಣೆಯಲ್ಲಿ ಹಾಗೂ ದೇವಾಲಯದ ಇನ್ನುಳಿದ ತೆರೆದ ಪ್ರದೇಶದಲ್ಲಿಯೂ ತಂಗುವುದನ್ನು ಸಹ ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…