ವಾಡಿ: ಕೊರೊನಾ ವೈರಸ್ಸಿನ ಪಿಡುಗನ್ನು ನಿಯಂತ್ರಿಸಲು ಕೈಗೊಳ್ಳಲಾದ ಹಲವು ಕ್ರಮಗಳಿಂದಾಗಿ ಕೂಲಿ ಕಾರ್ಮಿಕರ ಬದುಕು ದುಸ್ತರಗೊಂಡಿದೆ. ಮುಂದಿನ ಕನಿಷ್ಠ ನಾಲ್ಕು ವಾರಗಳ ವರೆಗೆ ಬಡವರಿಗೆ ಊಟ ಮತ್ತು ಪಡಿತರವನ್ನು ಉಚಿತವಾಗಿ ವಿತರಿಸಬೇಕು ಎಂದು ಸೋಷಲಿಸ್ಟ್ ಯುನಿಟಿ ಸೆಂಟರ್ ಅಫ್ ಇಂಡಿಯಾ (ಎಸ್‌ಯುಸಿಐ) ಕಮ್ಯುನಿಸ್ಟ್ ಪಕ್ಷ ರಾಜ್ಯ ಸರಕಾರವನ್ನು ಆಗ್ರಹಿಸಿದೆ.
ಈ ಕುರಿತು ಶುಕ್ರವಾರ ಪತ್ರಿಕಾ ಹೇಳಿಕೆ ನೀಡಿರುವ ಎಸ್‌ಯುಸಿಐ (ಕಮ್ಯುನಿಸ್ಟ್) ಪಕ್ಷದ ಜಿಲ್ಲಾ ಸಮಿತಿ ಸದಸ್ಯ, ವಾಡಿ ನಗರ ಸಮಿತಿ ಕಾರ್ಯದರ್ಶಿ ಕಾಮ್ರೇಡ್ ವೀರಭದ್ರಪ್ಪ ಆರ್.ಕೆ, ಉದ್ಯೋಗದ ಕೊರತೆ ಇರುವಂತಹ ಭಾರತದಲ್ಲಿ ಆರ್ಥಿಕ ಕುಸಿತ ಉಂಟಾಗಿ ಲಕ್ಷಾಂತರ ಜನ ಕೆಲಸ ಕಳೆದುಕೊಂಡಿದ್ದಾರೆ. ತೀವ್ರ ಬೆಲೆಯೇರಿಕೆಯಿಂದ ಬದುಕು ತೊಂದರೆಗೆ ಸಿಲುಕಿದೆ. ಇಂಥಹ ಪರಸ್ಥಿತಿಯಲ್ಲಿ ಕೊರೊನಾ ವೈರಸ್ ಹರಡುವಿಕೆಯನ್ನು ತಡೆಗಟ್ಟಲು ಕೈಗೊಂಡಿರುವ ಕ್ರಮಗಳಿಂದಾಗಿ ದೊಡ್ಡ ಸಂಖ್ಯೆಯಲ್ಲಿ ಉದ್ಯೋಗ ನಷ್ಟ ಉಂಟಾಗಿದೆ. ನಿತ್ಯದ ಬದುಕಿಗಾಗಿ ಹೊರಗೆ ದುಡಿಯಬೇಕಾದ ಚಾಲಕರು, ಪೆಟ್ಟಿಗೆ ಮತ್ತು ಬೀದಿ ವ್ಯಾಪಾರಿಗಳು, ಬಿಪಿಎಲ್ ಕಾರ್ಡುದಾರರು ಒಂದೊತ್ತಿನ ಊಟಕ್ಕೂ ಪರದಾಡಬೇಕಾದ ಸ್ಥಿತಿ ಸೃಷ್ಠಿಯಾಗಿದೆ. ಇವರಿಗೆ ಸರಕಾರ ಉಚಿತವಾಗಿ ಊಟ ಮತ್ತು ಪಡಿತರದ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಕೊರೊನಾ ತಡೆಗಟ್ಟಲು ಮತ್ತು ಸೊಂಕಿತರಿಗೆ ತಕ್ಷಣ ಚಿಕಿತ್ಸೆ ನೀಡಲು ದೇಶದ ಉನ್ನತ ಮಟ್ಟದ ವೈರಾಣು ತಜ್ಞರ, ಸರಕಾರಿ ಮತ್ತು ಖಾಸಗಿ ವೈದ್ಯಕೀಯ ಸಂಸ್ಥೆಗಳ ಹಾಗೂ ವಿಜ್ಞಾನಿಗಳ ರಾಷ್ಟ್ರೀಯ ಮಟ್ಟದ ಸಭೆ ಕರೆದು ಸಲಹೆಗಳನ್ನು ಪಡೆದುಕೊಳ್ಳಲು ಸರಕಾರ ಮುಂದಾಗಬೇಕು. ವಿದೇಶದಿಂದ ಬರುವ ಪ್ರತಿಯೊಬ್ಬ ವ್ಯಕ್ತಿಗಳನ್ನು ಕಡ್ಡಾಯವಾಗಿ ಪರೀಕ್ಷೆಗೊಳಪಡಿಸಿ ಪ್ರತ್ಯೇಕ ವಾರ್ಡ್‌ಗಳಲ್ಲಿ ಇರಿಸಬೇಕು. ಆಸ್ಪತ್ರೆಗಳಲ್ಲಿ ವೈದ್ಯರು, ಆರೋಗ್ಯ ಸಿಬ್ಬಂದಿ ಮತ್ತು ಹೊರರೋಗಿ ಚಿಕಿತ್ಸಾ ವಿಭಾಗಗಳನ್ನು ಹೆಚ್ಚಿಸಬೇಕು. ಸೋಂಕು ನಿಯಂತ್ರಿಸಲು ಎಲ್ಲರಿಗೂ ಉಚಿತ ಮಾಸ್ಕ್‌ಗಳನ್ನು ವಿತರಿಸಬೇಕು. ನಗರ ಮತ್ತು ಪಟ್ಟಣಗಳಲ್ಲೂ ಕೂಡ ಕೊರೊನಾ ಪರೀಕ್ಷಾ ಕೇಂದ್ರಗಳನ್ನು ಆರಂಭಿಸಬೇಕು. ಕೊರೊನಾ ಕಾಯಿಲೆಗೆ ಗೋಮೂತ್ರ ಕುಡಿಯುವುದು ಮತ್ತು ಸೆಗಣಿಯನ್ನು ಮೆತ್ತಿಕೊಳ್ಳುವುದೇ ಔಷಧ ಎಂದು ಆರ್‌ಎಸ್‌ಎಸ್ ಮತ್ತು ಬಿಜೆಪಿಗೆ ಸೇರಿದ ಕೆಲ ನಾಯಕರು ಪ್ರಚಾರ ಮಾಡುತ್ತಿದ್ದು, ಇದು ಅವೈಜ್ಞಾನಿಕ ಮತ್ತು ಹಾನಿಕಾರಕವೂ ಆಗಿದೆ. ಆನರ ಅಜ್ಞಾನ ಮತ್ತು ಅಸಹಾಯಕತೆಯನ್ನು ಬಳಸಿಕೊಂಡು ಮೂಢನಂಬಿಕೆಗಳನ್ನು ಹರಡುತ್ತಿರುವವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…