ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ, ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಮಹಿಳಾ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಕೇಂದ್ರ ಕಲಬುರಗಿಯ ರಾಷ್ಟ್ರೀಯ ಸೇವಾ ಯೋಜನೆ ಘಟಕ ‘ಎ’ ಮತ್ತು ‘ಬಿ’ ಗಳ ವತಿಯಿಂದ ಮಹಾವಿದ್ಯಾಲಯದ ಪದವಿ ಪೂರ್ವ ಪರೀಕ್ಷಾ ಕೇಂದ್ರದಲ್ಲಿ ದ್ವೀತಿಯ ಪಿ.ಯು.ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಸ್ಯಾನಿಟೈಸರ್ ನೀಡುವುದರೊಂದಿಗೆ ಜನತಾ ಕರ್ಫ್ಯೂದಲ್ಲಿ ಪಾಲ್ಗೋಂಡು ತಮ್ಮನ್ನು ತಾವುಗಳು ರಕ್ಷಿಸಿಕೊಳ್ಳವುದರೊಂದಿಗೆ ಇತರರನ್ನು ರಕ್ಷಿಸಿ ದೇಶದಲ್ಲಿ ಸಾಂಕ್ರಾಮಿಕ ಕೋರೊನಾ ವೈರಾಣು ಹರಡದಂತೆ ನೋಡಿಕೊಳ್ಳಬೇಕೆಂದು ಸಲಹೆ ನೀಡಲಾಯಿತು.
ಈ ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಪ್ರಾಧ್ಯಾಪಕರಾದ ಪ್ರಾಚಾರ್ಯರಾದ ಡಾ. ರಾಜೇಂದ್ರ ಕೊಂಡಾ, ರಾಷ್ಟ್ರೀಯ ಸೇವಾ ಯೋಜನೆ ಘಟಕ ‘ಎ’ ಮತ್ತು ‘ಬಿ’ ಗಳ ಕಾರ್ಯಕ್ರಮಾಧಿಕಾರಿಗಳಾದ ಡಾ. ಪರವಿನ್ ರಾಜೇಸಾಬ ಮತ್ತು ಡಾ. ಮೋಹನರಾಜ ಪತ್ತಾರ, ರಾಷ್ಟ್ರೀಯ ಸೇವಾ ಯೋಜನೆ ಸಲಹಾ ಮಂಡಳಿಯ ಸದಸ್ಯರಾದ ಡಾ. ನೀಲಕಂಠ ವಾಲಿ, ಡಾ. ಮಹೇಶಕುಮಾರ ಗಂವ್ಹಾರ, ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಚಂದ್ರಕಲಾ ಪಾಟೀಲ, ಉಪನ್ಯಾಸಕರಾದ ಗೋಣಿ ಬಸವರಾಜ, ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘದ ಸಲಹೆಗಾರರಾದ, ಉಮಾ ಮಿಣಜಗಿ, ಮಹಾವಿದ್ಯಾಲಯದ ಬೋಧಕೇತರ ಸಿಬ್ಬಂದಿಗಳಾದ, ಸಿದ್ದು ಮಠ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕ ‘ಎ’ ಮತ್ತು ‘ಬಿ’ ಘಟಕಗಳ ಕೆಲವು ಸ್ವಯಂ ಸೇವಕಿಯರು ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕ ‘ಬಿ’ ಡಾ. ಮೋಹನರಾಜ ಪತ್ತಾರ ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…