ಕಲಬುರಗಿ: ಕಲಬುರಗಿ ಜಿಲ್ಲೆಯಿಂದ ಇದೂವರೆಗೆ ಕೋವಿಡ್-19 ಪರೀಕ್ಷೆಗೆ ಮೃತ ವಯೋವೃದ್ಧ ವ್ಯಕ್ತಿ ಸೇರಿದಂತೆ ಒಟ್ಟಾರೆ 26 ಸ್ಯಾಂಪಲ್ಸ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಇದರಲ್ಲಿ ಮಾರ್ಚ್ 21ರ ಮಧ್ಯಾಹ್ನ 2 ಗಂಟೆ ವರೆಗೆ 16 ಪ್ರಕರಣಗಳಲ್ಲಿ ನೆಗೆಟಿವ್ ವರದಿ ಬಂದಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶನಿವಾರ ಹೊರಡಿಸಿರುವ ಪತ್ರಿಕಾ ಪ್ರಕಟಣೆಯಲ್ಲಿ 26 ಪ್ರಕರಣಗಳ ಪೈಕಿ 3ರಲ್ಲಿ ಪಾಸಿಟಿವ್ ಬಂದಿದೆ. ಮೂರು ಪ್ರಕರಣಗಳಲ್ಲಿ ತಾಂತ್ರಿಕ ಕಾರಣದಿಂದ ಪರೀಕ್ಷೆಯಾಗಿರುವುದಿಲ್ಲ. ಇನ್ನೂ 4 ಪ್ರಕರಣಗಳಲ್ಲಿ ವೈದ್ಯಕೀಯ ಪರೀಕ್ಷೆಯ ವರದಿ ಬರಬೇಕಿದೆ ಎಂದು ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ಹೊಂದಿದ ವ್ಯಕ್ತಿಗಳೊಂದಿಗೆ ನೇರ ಸಂಪರ್ಕ ಹೊಂದಿರುವ 98 ಜನ ಹಾಗೂ ಎರಡನೇ ಸಂಪರ್ಕ ಹೊಂದಿರುವ 389 ಜನರನ್ನು ಗುರುತಿಸಲಾಗಿದೆ. ಇದಲ್ಲದೆ ವಿದೇಶದಿಂದ ಆಗಮಿಸಿದ 337 ಜನರನ್ನು ಸಹ ಪತ್ತೆ ಹಚ್ಚಲಾಗಿ ಒಟ್ಟಾರೆ ಇದೂವರೆಗೆ 811 ಜನರನ್ನು ಹೋಂ ಕ್ವಾರಂಟೈನ್‍ನಲ್ಲಿಟ್ಟು ಎಲ್ಲರ ಆರೋಗ್ಯದ ಮೇಲೆ ನಿಗಾ ವಹಿಸಿದೆ. ಇನ್ನೂ 7 ಜನರನ್ನು ಐಸೋಲೇಟೆಡ್ ವಾರ್ಡ್‍ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಂಕಿ-ಸಂಖ್ಯೆಯೊಂದಿಗೆ ವಿವರ ನೀಡಲಾಗಿದೆ.
6018 ಮನೆ ಸರ್ವೇ, ಸ್ಕ್ರೀನಿಂಗ್:- ಜಿಲ್ಲೆಯಲ್ಲಿ ಇದೂವರೆಗೆ ಕೊರೋನಾ ಪಾಸಿಟಿವ್ (ಮೃತ ವ್ಯಕ್ತಿ ಸೇರಿದಂತೆ) ದೃಢವಾದ ಹಿನ್ನೆಲೆಯಲ್ಲಿ ಕಲಬುರಗಿ ನಗರದ ವಾರ್ಡ್ ಸಂಖ್ಯೆ 30 ಮತ್ತು 14 ಎರಡು ಕಂಟೇನ್‍ಮೆಂಟ್ ಝೋನ್ ಎಂದು ಗುರುತಿಸಿ ಪಾಸಿಟಿವ್ ಪ್ರಕರಣದ ರೋಗಿಗಳ ಮನೆ ಸುತ್ತಮುತ್ತ ಒಟ್ಟಾರೆ 6018 ಮನೆಗಳನ್ನು ಸರ್ವೆ ಮಾಡಿ ಅಲ್ಲಿ ಮುಂಜಾಗೃತ ಕ್ರಮವಾಗಿ ಸ್ಕ್ರೀನಿಂಗ್, ಸ್ಯಾನಿಟೈಜೇಷನ್ ಮತ್ತು ಅರಿವು ಮೂಡಿಸುವ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಡಿ.ಸಿ. ಶರತ್ ಬಿ. ತಿಳಿಸಿದ್ದಾರೆ.
ಕೊರೋನಾ ಸಹಾಯವಾಣಿ ಸಂಖ್ಯೆ: ಡಿ.ಎಸ್.ಯು ಹೆಲ್ಪ್‍ಲೈನ್ ಸಂಖ್ಯೆ: 08472-268648. ಕಂಟ್ರೋಲ್ ರೂಂ ಸಂಖ್ಯೆ: 08472-278648/ 278698 / 278604/ 278677 ಇರುತ್ತದೆ.
ಹೊರದೇಶದಿಂದ ಬಂದವರು 14 ದಿನ ಮನೆಯಲ್ಲಿರಿ: ಇತ್ತೀಚೆಗೆ ಕೋವಿಡ್-19 ಬಾಧಿತ ದೇಶಗಳಿಂದ ಜಿಲ್ಲೆಗೆ ಹಿಂದಿರುಗಿದವರು ಯಾವುದೇ ರೋಗದ ಲಕ್ಷಣ ಕಾಣದಿದ್ದರು ಕಡ್ಡಾಯವಾಗಿ 14 ದಿನ ಹೋಂ ಕ್ವಾರಂಟೈನ್‍ನಲ್ಲಿರಬೇಕು ಮತ್ತು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಬೇಕು. ರೋಗದ ಲಕ್ಷಣ ಕಂಡುಬಂದಲ್ಲಿ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಬೇಕು ಅಥವಾ ಹೆಲ್ಪ್‍ಲೈನ್ ಸಂಖ್ಯೆ: 104 ಕರೆ ಮಾಡಿ ಸಹಾಯ ಪಡೆಯಬಹುದು.
ಯಾವುದೇ ವ್ಯಕ್ತಿ ಕೆಮ್ಮುವಾಗ, ಸೀನುವಾಗ ಕಡ್ಡಾಯವಾಗಿ ಕರವಸ್ತ್ರ ಉಪಯೋಗಿಸಬೇಕು. ಪರಸ್ಪರ ಮಾತಾಡುವಾಗ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಆಗಾಗ ಸಾಬೂನಿನಿಂದ ಕೈಗಳನ್ನು ಸ್ವಚ್ಛವಾಗಿ ತೊಳೆದುಕೊಳ್ಳಬೇಕು ಮತ್ತು ಹೆಚ್ಚಿನ ಜನಸಂದಣಿಯಲ್ಲಿ ಭಾಗವಹಿಸದಂತೆ ಎಚ್ಚರಿಕೆ ವಹಿಸಿದಲ್ಲಿ ಕೊರೋನಾ ಸೊಂಕು ತಡೆಗಟ್ಟಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…