ಕೊರೋನಾದಿಂದ ತಪ್ಪಿಸಿಕೊಳ್ಳಲು ಮನೆಯಲ್ಲಿರುವುದೊಂದೇ ಮಾರ್ಗ: ಅಲ್ಲಮಪ್ರಭು ಪಾಟೀಲ

0
109

ಕಲಬುರಗಿ: ಇಡೀ ಜಗತ್ತೇ ತಲ್ಲಣಗೊಳಿಸಿರುವ ಕೊರೊನಾ ವೈರಸ್‌ನಿಂದ ಜನರು ತಪ್ಪಿಸಿಕೊಳ್ಳಲು ಮನೆಯಲ್ಲಿರುವುದೊಂದೇ ಮಾರ್ಗ. ಆ ಮಾರ್ಗವನ್ನು ನಾವೆಲ್ಲರೂ ಅನುಸರಿಸಿದರೆ ಅದನ್ನು ತಡೆಗಟ್ಟಲಿಕ್ಕೆ ಸಹಕಾರ ಕೊಟ್ಟಂತಾಗುತ್ತದೆ ಎಂದು ವಿಧಾನ ಪರಿಷತ್ತಿನ ಮಾಜಿ ಸದಸ್ಯ ಅಲ್ಲಮಪ್ರಭು ಪಾಟೀಲ ನೆಲೋಗಿ ಅಭಿಪ್ರಾಯಪಟ್ಟಿದ್ದಾರೆ.

ಈ ಕುರಿತು ಪತ್ರಿಕೆ ಪ್ರಕಟಣೆಯೊಂದನ್ನು ಹೊರಡಿಸಿರುವ ಅವರು, ಕೊರೊನಾ ವೈರಸ್ ಹರಡದಂತೆ ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳನ್ನು ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲಿಸಬೇಕು. ಇಲ್ಲದಿದ್ರೆ ಭವಿಷತ್ತಿನ ಅನಾಹುತಕ್ಕೆ ತುತ್ತಾಗಬೇಕಾಗುತ್ತದೆ.

Contact Your\'s Advertisement; 9902492681

ಇಡೀ ಜಗತ್ತನ್ನು ಆವರಿಸಿರುವ ಭಯಾನಕ ವೈರಾಣು ಕೊರೊನಾ ವೈರಸ್ ವಿರುದ್ಧ ಎಲ್ಲರೂ ಹೋರಾಡುವುದು ಅಗತ್ಯವಾಗಿದೆ. ಹಾಗಾಗಿ, ಜಿಲ್ಲಾಡಳಿತ ಕೈಗೊಂಡಿರುವ ಮುನ್ನಚರಿಕೆಯ ಕ್ರಮಗಳನ್ನು ಅನುಸರಿಸಬೇಕು. ಜತೆಗೆ ವೈದ್ಯಕೀಯ ಲೋಕವು ಸಹ ತವಸ್ಮು ಜೀವದ ಹಂಗನ್ನು ತೊರೆದು ಇದರ ತಡೆಗಾಗಿ ಹಗಲಿರುಳು ಶ್ರಮಿಸುತಿದ್ದಾರೆ, ಅವರಿಗೆ ಸಹಕರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ.

ಆದರೂ ಕೂಡ ನಾವು ನಮ್ಮ ಸುರಕ್ಷತೆ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಕೆಲವು ನಿಯಮಗಳನ್ನು ಸ್ವಯಂ ಪ್ರೇರಿತವಾಗಿ ಅಳವಡಿಸಿಕೊಳ್ಳುವುದರಿಂದ ಈ ವೈರಸ್‌ನಿಂದ ಮುಕ್ತಿ ಪಡೆಯಬಹುದಾಗಿದೆ ಎಂದು ಅವರು ವಿವರಿಸಿದ್ದಾರೆ.

ಹಳ್ಳಿಗಳಲ್ಲಿ ಹೆಚ್ಚಿಗೆ ಜಾಗೃತಿ ಮೂಡಿಸಿ: ಜಗತ್ತಿನ ಜನರ ನೆಮ್ಮದಿಗೆ ಭಂಗ ತಂದಿರುವ ಕೊರೊನಾ ವೈರಸ್‌ನಿಂದ ಪಾರಾಗಲು ಈಗಾಗಲೇ ಮುಂಜಾಗ್ರತಾ ಕ್ರಮಗಳನ್ನು ಜಾರಿಗೆ ತಂದಿದ್ದು, ಜತೆಗೆ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ರೀತಿಯಲ್ಲಿ ಇದರ ಬಗ್ಗೆ ಜಾಗೃತಿ ಮೂಡಿಸುವುದುಮ ತುರ್ತು ಅಗತ್ಯವಿದೆ. ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ವೈರಸ್ ಕುರಿತು ಇನ್ನೂ ಸರಿಯಾಗಿ ಜಾಗೃತಿ ಮೂಡುತ್ತಿಲ್ಲ. ಒಬ್ಬರಿಂದ ಒಬ್ಬರಿಗೆ ಹರಡುವ ಈ ಮಹಾಮಾರಿ ವೈರಸ್‌ನ್ನು ನಾವೆಲ್ಲರೂ ಜಾಗೃತರಾಗುವ ಮೂಲಕ ಅದನ್ನು ಓಡಿಸಬೇಕು. ಈ ನಿಟ್ಟಿನಲ್ಲಿ ಪ್ರತಿಯೊಂದು ಹಳ್ಳಿಯಲ್ಲೂ ಗ್ರಾ.ಪಂ.ಗಳಿಂದ ಜಾಗೃತಿ ಮೂಡಿಸುವ ಕಾರ್ಯವಾಗಬೇಕಿದೆ ಎಂದು ಅವರು ಸಲಹೆ ನೀಡಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here