ಬಿಸಿ ಬಿಸಿ ಸುದ್ದಿ

ರಾಜ್ಯದಿಂದ ಹೊರಗೆ ಹೋಗಲು, ಹೊರಗಿನಿಂದ ರಾಜ್ಯಕ್ಕೆ ಬರುಲು ಇಂದು ರಾತ್ರಿ ಗಡುವು: ಸಿಎಂ

ಬೆಂಗಳೂರು: ಇಂದು ಮನೆಯಲ್ಲೇ ಇರಬೇಕು ಎಂದು ಹೇಳಿದರೂ ಬಹಳಷ್ಟು ಜನರು ಹೊರಗಡೆ ಓಡಾಡುತ್ತಿದ್ದಾರೆ. ಹೀಗಾಗಿ ಇಂದು ಬೆಂಗಳೂರಿನಿಂದ ಹೊರಗೆ ಹೋಗುವವರು ಹೋಗಬಹುದು. ಅದೇ ರೀತಿ ಬೆಂಗಳೂರಿಗೆ ಹೊರಗಿಂದ ಬರುವವರು ಬರಬಹುದು. ಇಂದು ರಾತ್ರಿಯೊಳಗೆ ಮಾತ್ರ ಬರೋರಿಗೆ ಹೋಗೋರಿಗೆ ಅವಕಾಶ ಎಂದು ಸಿಎಂ ಯಡಿಯೂರಪ್ಪ ಗಡುವು ಕೊಟ್ಟಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಯಡಿಯೂರಪ್ಪ, ದೇಶದಲ್ಲೇ ಮೊದಲ ಬಾರಿಗೆ 24*7 ವಾರ್ ರೂಂ ಮಾಡಿ, ಕೋವಿಡ್ ಸೋಂಕಿಂದ ನರಳುವವರ ಮಾಹಿತಿಯನ್ನು ಇಲ್ಲಿ ಪಡೆಯುತ್ತೀವಿ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ದಾಖಲಾಗಿರುವ, ಸೋಂಕು ಬರೋರ ಮೇಲೆ ಇಲ್ಲಿಂದಲೇ ನಿಗಾ ಇಡಬಹುದು. ಭಾರತ ಸರ್ಕಾರದ ನೀಡಿರುವ ಸಲಹೆಯಂತೆ ಕರ್ನಾಟಕ ರಾಜ್ಯಾದ್ಯಂತ ಅಂತರಾಷ್ಟ್ರೀಯ ಪ್ರಯಾಣಿಕರ ತಪಾಸಣೆಯನ್ನು ಕೈಗೊಳ್ಳಲಾಗಿದೆ. ಅಂದಿನಿಂದ ಇಂದಿನವರೆಗೆ 1,27,609 ಪ್ರಯಾಣಿಕರನ್ನು ಬೆಂಗಳೂರು ಮತ್ತು ಮಂಗಳೂರು ವಿಮಾನ ನಿಲ್ದಾಣ, ಮಂಗಳೂರು ಮತ್ತು ಕಾರವಾರ ಬಂದರಿನಲ್ಲಿ ತಪಾಸಣೆ ನಡೆಸಲಾಗಿದೆ ಎಂದು ತಿಳಿಸಿದರು.

ವಿದೇಶದಿಂದ ಬಂದ 12,029 ಪ್ರಯಾಣಿಕರನ್ನು ಕ್ವಾರಂಟೈನ್ ನಲ್ಲಿಡಲಾಗಿದೆ. 173 ಜನರನ್ನು ಪ್ರತ್ಯೇಕವಾಗಿ ಐಸೋಲೇಷನ್ ಆಸ್ಪತ್ರೆಯಲ್ಲಿ ಇರಿಸಲಾಗಿದೆ. 1770 ಪರೀಕ್ಷಾ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 1173 ನೆಗೆಟಿವ್ ಪ್ರಕರಣ ಬಂದಿದೆ. ಇಲ್ಲಿಯವರೆಗೆ 38 ಪಾಸಿಟಿವ್ ಪ್ರಕರಣ ಕಂಡು ಬಂದಿದೆ. ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನಿರ್ಬಂಧ ಹೇರಲಾಗಿದೆ. ಈ ಹಿಂದೆಯೇ ಎಲ್ಲ ಶೈಕ್ಷಣಿಕ ಕಚೇರಿಗಳನ್ನು ಮುಚ್ಚಲಾಗಿದ್ದು, ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಅಗತ್ಯ ಸೇವೆಗಳನ್ನು ಹೊರತು ಪಡಿಸಿ, ಉಳಿದ ಎಲ್ಲ ಸರ್ಕಾರಿ ಕಚೇರಿಗಳನ್ನ ಕಡಿತಗೊಳಿಸಲಾಗಿದೆ ಎಂದರು.

ತುರ್ತು ಪರಿಸ್ಥಿತಿ ಹೊರತು ಪಡಿಸಿ ರಾಜ್ಯ ಗಡಿಭಾಗಗಳನ್ನು ಮುಚ್ಚಲಾಗಿದೆ. ಆರೋಗ್ಯ ಸಚಿವರ ಅಧ್ಯಕ್ಷತೆಯಲ್ಲಿ ಉಪಮುಖ್ಯಮಂತ್ರಿ ಮತ್ತು ಇಬ್ಬರು ಸಚಿವರನ್ನು ಒಳಗೊಂಡ ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿದೆ. ವೈದ್ಯರು, ಖಾಸಗಿ ವೈದ್ಯರ ಜೊತೆ ಚರ್ಚೆ ನಡೆಸಿದ್ದೇನೆ. ಅವರಿಂದ ಪ್ರತಿದಿನ ಮಾಹಿತಿ ಪಡೆದುಕೊಳ್ಳುತ್ತಿದ್ದೇನೆ. ವಿದೇಶದಿಂದ ಬರುವವರನ್ನು ಮನೆಯಲ್ಲಿ ಪ್ರತ್ಯೇಕವಾಗಿ ಇರುವಂತೆ ಕ್ರಮ ತೆಗೆದುಕೊಳ್ಳುವುದು ನಮ್ಮ ಮೊದಲ ಆದ್ಯತೆ ಆಗಿದೆ. ಇದಕ್ಕಾಗಿ ಬೆಂಗಳೂರು ಸೇರಿದಂತೆ ಇತರೆ ಕಡೆ ತಂಡಗಳನ್ನು ರಚನೆ ಮಾಡಲಾಗಿದೆ ಎಂದು ಹೇಳಿದರು.

ನಾಳೆ ಯುಗಾದಿ ಹಬ್ಬ. ಈ ಹಬ್ಬವನ್ನು ಬಹಳ ಸರಳವಾಗಿ ಆಚರಿಸಬೇಕು. ಯಾರೂ ಸಹ ಹೊರಗೆ ಬರದೇ ಎಚ್ಚರ ವಹಿಸಬೇಕಿರುವುದು ಅತ್ಯಂತ ಅಗತ್ಯವಿದೆ. ಇಂದು ಕರ್ಫ್ಯೂ ಇರಬೇಕು ಎಂದು ಹೇಳಿದರೂ ಬಹಳಷ್ಟು ಜನರು ಮನೆಯಿಂದ ಹೊರಗಡೆ ಓಡಾಡುತ್ತಿದ್ದಾರೆ. ಹೀಗಾಗಿ ಇವತ್ತು ಬೆಂಗಳೂರಿನಿಂದ ಹೊರಗೆ ಹೋಗುವವರು ಹೋಗಬಹುದು. ಅದೇ ರೀತಿ ಬೆಂಗಳೂರಿಗೆ ಹೊರಗಿಂದ ಬರುವವರು ಬರಬಹುದು. ಇವತ್ತು ರಾತ್ರಿಯೊಳಗೆ ಮಾತ್ರ ಬರೋರಿಗೆ ಹೋಗೋರಿಗೆ ಅವಕಾಶ. ನಾಳೆಯಿಂದ ತುಂಬಾ ಬಿಗಿಯಾಗಿ ಕ್ರಮ ಕೈಗೊಳ್ಳಲಾಗುತ್ತಿದೆ. ಕಡ್ಡಾಯವಾಗಿ ಎಲ್ಲರೂ ಪಾಲನೆ ಮಾಡಲೇಬೇಕು ಎಂದು ಸಿಎಂ ಎಚ್ಚರಿಕೆ ಕೊಟ್ಟರು.

ಸರ್ಕಾರದಿಂದ ಏನೇನೂ ಮಾಡಬೇಕೋ ಎಲ್ಲವನ್ನು ಮಾಡುತ್ತೇವೆ. ಆದರೆ ವಾಸ್ತವಿಕತೆಯನ್ನು ಅರ್ಥ ಮಾಡಿಕೊಂಡು ಮಾರ್ಚ್ 31ರವೆಗೂ ಮನೆಯಲ್ಲಿ ಇದ್ದು, ಕೋವಿಡ್ ಹರಡದಂತೆ ನೋಡಿಕೊಳ್ಳಬೇಕು. ಜನರು ಸಹಕಾರ ಕೊಟ್ಟರೆ ಮಾತ್ರ ಇದನ್ನು ಹರಡದಂತೆ ನೋಡಿಕೊಳ್ಳಬಹುದು. ಇಡೀ ದೇಶದಲ್ಲಿ ನಾವು 3ನೇ ಹಂತದಲ್ಲಿ ಇದ್ದೇವೆ. ಹೀಗಾಗಿ ರಾಜ್ಯದ ಜನತೆಯ ಆರೋಗ್ಯದ ದೃಷ್ಟಿಯಿಂದ ಕಠಿಣ ಕ್ರಮ ತೆಗೆದುಕೊಳ್ಳುತ್ತಿದ್ದೇವೆ. ಇದಕ್ಕೆ ಜನರು ಸಹಕರಿಸಬೇಕು ಎಂದು ಸಿಎಂ ಯಡಿಯೂರಪ್ಪ ಮನವಿ ಮಾಡಿಕೊಂಡರು.

emedialine

Recent Posts

ಜಪಾನ್ ವಿ. ವಿಯಲ್ಲಿ ಪ್ರಬಂಧ ಮಂಡನೆ ಮಾಡಿದ ಡಾ. ಪಾಸೋಡಿ

ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…

52 mins ago

ಕಲಬುರಗಿ: ಡೆಂಗ್ಯೂ, ಮಲೇರಿಯಾ ರೋಗಗಳನ್ನು ನಿಯಂತ್ರಿಸಲು ಬಾಲರಾಜ್ ಗುತ್ತೇದಾರ ಆಗ್ರಹ

ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…

60 mins ago

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

3 hours ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

3 hours ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

3 hours ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

4 hours ago