ಕಲಬುರಗಿಯಲ್ಲಿ ಕಲಂ 144 ಮಾ. 31ರ ವರೆಗೆ ನಿಷೇಧಾಜ್ಞೆ ವಿಸ್ತರಣೆ: ಜಿಲ್ಲಾಧಿಕಾರಿ

0
57

ಕಲಬುರಗಿ: ಕೊರೋನಾ ವೈರಸ್ ತಡೆಗಟ್ಟುವ ಮತ್ತು ಜನಸಂದಣಿ ನಿಯಂತ್ರಣದಲ್ಲಿಡಲು ಈಗಾಗಲೆ ಕಲಬುರಗಿ ಜಿಲ್ಲೆಯಾದ್ಯಂತ ಜಾರಿಯಲ್ಲಿರುವ ಸಿ.ಆರ್.ಪಿ.ಸಿ. ಕಾಯ್ದೆ-1973ರ ಕಲಂ 144 ನಿಷೇಧಾಜ್ಞೆಯನ್ನು ಮಾರ್ಚ್ 31ರ ರಾತ್ರಿ 8 ಗಂಟೆ ವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಶರತ್ ಬಿ. ಅವರು ಮಂಗಳವಾರ ಆದೇಶ ಹೊರಡಿಸಿದ್ದಾರೆ.

ಕೊರೋನಾ ಸೊಂಕಿನಿಂದ ಜಿಲ್ಲೆಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟ ಹಿನ್ನೆಲೆಯಲ್ಲಿ ಸಾರ್ವಜನಿಕರ ಆರೋಗ್ಯ ಹಿತದೃಷ್ಠಿಯಿಂದ ಕಲಬುರಗಿ ಜಿಲ್ಲೆಯಾದ್ಯಂತ ಮಾರ್ಚ್ 19 ರ ರಾತ್ರಿ 8 ಗಂಟೆಯಿಂದ 25ರ ರಾತ್ರಿ 8 ಗಂಟೆ ವರೆಗೆ ಈ ಹಿಂದೆ ನಿಷೇಧಾಜ್ಞೆ ಜಾರಿಗೊಳಿಸಿ ಡಿ.ಸಿ. ಅದೇಶ ಹೊರಡಿಸಿದ್ದರು. ಇದೀಗ ಪರಿಸ್ಥಿತಿಯ ಅಗತ್ಯತೆಯನ್ನು ಮನಗಂಡು ಜಿಲ್ಲಾಧಿಕಾರಿಗಳು ಮಾರ್ಚ್ 31ರ ವರೆಗೆ ನಿಷೇಧಾಜ್ಞೆಯನ್ನು ವಿಸ್ತರಿಸಿದ್ದಾರೆ.

Contact Your\'s Advertisement; 9902492681

ನಿಷೇಧಾಜ್ಞೆಯ ಈ ಸಂದರ್ಭದಲ್ಲಿ ಸಾಮೂಹಿಕವಾಗಿ ಧಾರ್ಮಿಕ ಮತ್ತು ವೈಯಕ್ತಿಕ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ. ಗುಂಪು-ಗುಂಪಾಗಿ ಚಲಿಸುವುದು ಮತ್ತು ಅನಾವಶ್ಯಕವಾಗಿ ಸಂಚರಿಸುವಂತಿಲ್ಲ ಮತ್ತು ಈ ಆದೇಶದಿಂದ ಭಯಪಟ್ಟು ಅಗತ್ಯಕ್ಕಿಂತ ಹೆಚ್ಚು ಅವಶ್ಯ ದಾಸ್ತಾನುಗಳನ್ನು ಸಹ ಖರೀದಿಸುವ ಅಗತ್ಯವಿಲ್ಲ ಎಂದು ಅವರು ಆದೇಶದಲ್ಲಿ ತಿಳಿಸಿದ್ದು, ಅಗತ್ಯ ಸೇವೆಗಳಿಗೆ ಈ ಆದೇಶ ಅನ್ವಯವಾಗುವುದಿಲ್ಲ ಎಂದು ಡಿ.ಸಿ. ಶರತ್ ಬಿ. ಅವರು ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here