ಶಹಾಬಾದ: ಮಹಾಮಾರಿ ಕೊರೊನಾ ವೈರಸ್ ತಡೆಗಟ್ಟುವ ಉದ್ದೇಶದಿಂದ ಸರ್ಕಾರ ಅನೇಕ ಕ್ರಮಗಳನ್ನು ಕೈಗೊಂಡು ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಆದರೆ ತಾಲೂಕಿನ ಜನರು ಇದರ ಬಗ್ಗೆ ಹೆಚ್ಚಿನ ತಲೆಕೆಡಿಸಿಕೊಂಡಂತೆ ಕಾಣುತ್ತಿಲ್ಲ. ಇದರಿಂದ ತಾಲೂಕಾಡಳಿತ ಜನರ ವರ್ತನೆಗೆ ಅಸಮಾಧಾನ ವ್ಯಕ್ತಪಡಿಸಿ ಲಾಠಿ ರುಚಿ ತೋರಿಸುತ್ತಿದ್ದಾರೆ.
ಪ್ರಧಾನಿ ಬಾನುವಾರ ಕರೆ ನೀಡಿದ್ದ ಜನತಾ ಕಫ್ರ್ಯೂಗೆ ಸಾರ್ವಜನಿಕರು ಅಭೂತಪೂರ್ವ ಬೆಂಬಲ ವ್ಯಕ್ತಪಡಿಸಿದ್ದರು.ನಂತರ ಮಾರನೇ ದಿನ ಮತ್ತೆ ಜನ ರಸ್ತೆಗೆ ಇಳಿಯುವುದು ಕಂಡುಬಂದಿತು. ಮಂಗಳವಾರ ಪ್ರಧಾನಿ ನರೇಂದ್ರ ಮೋದಿಯವರು 21 ದಿನ ದೇಶದ ಜನರು ಮನೆಯಲ್ಲಿರಿ.ಇದರಿಂದ ವೈರಸ್ ಹರಡುವ ಸರಪಣಿಯನ್ನು ಮುರಿದರೇ ದೇಶ, ವ್ಯಕ್ತಿ ಹಾಗೂ ಕುಟುಂಬಗಳು ಗಡಾಂತರದಿಂದ ಉಳಿಯವಹುದೆಂದು ಹೇಳಿದರೂ ಜನರು ಮಾತ್ರ ನಿರ್ಲಕ್ಷ್ಯ ಭಾವನೆ ತೋರುತ್ತಿದ್ದಾರೆ. ತರಕಾರಿ ಮಾರುಕಟ್ಟೆ, ದಿನಸಿ ಅಂಗಡಿ ಹಾಗೂ ಹಣ್ಣಿನ ಅಂಗಡಿಗಳು ಒಂದೇ ಕಡೆ ಇರುವುದರಿಂದ ಎಲ್ಲೆಡೆ ಜನಜಂಗುಳಿ ನಿರ್ಮಾಣವಾಗಿತ್ತು.
ಸಾಮಾಜಿಕ ಅಂತರ ಕಾಪಾಡಿಕೊಳ್ಳುವಲ್ಲಿ ಜನರು ನಿರ್ಲಕ್ಷ್ಯ ತೋರುತ್ತಿರುವುದರಿಂದ ಹಾಗೂ ಮಾರುಕಟ್ಟೆಯಲ್ಲಿ ಇಕ್ಕಟ್ಟಾದ ಸ್ಥಳದಲ್ಲಿ ಜನರು ಸೇರುವುದರಿಂದ ಸಮಸ್ಯೆ ಉಂಟಾಗುತ್ತಿದ್ದು, ತರಕಾರಿ ಮಾರುಕಟ್ಟೆಯ ಬದಲಾಗಿ ನಾಳೆಯಿಂದ ಬೆಳಿಗ್ಗೆ 7ರಿಂದ 10 ಗಂಟೆಯವರೆಗೆ ತರಕಾರಿ ಹಾಗೂ ಹಣ್ಣಿ ವ್ಯಾಪಾರ ಮಾಡಲು ಆದೇಶಿಸಲಾಗಿದೆ. ಅಲ್ಲದೇ ಕಿರಾಣಿ ಅಂಗಡಿಗಳನ್ನು ಒಂದು ದಿನ ಬಿಟ್ಟು ಒಂದು ದಿನ ತೆರೆಯುವಂತೆ ತಿಳಿಸಲಾಗಿದೆ.ನಗರದ ಪರಿಸ್ಥಿತಿ ಅವಲೋಕಿಸಿ ಈ ನಿರ್ಧಾರ ತೆಗೆದುಕೊಂಡಿದ್ದೆವೆ. – ಸುರೇಶ ವರ್ಮಾ ತಹಸೀಲ್ದಾರ ಶಹಾಬಾದ.
ಬೆಳಿಗ್ಗೆ 7 ರಿಂದ 9ಗಂಟೆಗೆಯವರೆಗೆ ಮಾರಾಟ ಮಾಡಲು ಅವಕಾಶ ನೀಡಿದ್ದರಿಂದ ಬೆಳಿಗ್ಗೆಯೇ ಪ್ರತಿಯೊಂದು ಅಂಗಡಿಗಳಲ್ಲಿ ಖರೀದಿಗೆ ಜನರು ತುಂಬಿ ತುಳುಕುತ್ತಿತ್ತು. ನೂರಾರು ಜನರು ತರಕಾರಿ ಮಾರುಕಟ್ಟೆಯಲ್ಲಿ ಅಂತರ ಕಾಪಾಡಿಕೊಳ್ಳದೇ ವ್ಯಾಪಾರ ಮಾಡುತ್ತಿರುವ ದೃಶ್ಯ ಕಂಡು ಬಂತು. ಜಿಲ್ಲಾಧಿಕಾರಿಗು 144 ಸೆಕ್ಷನ್ ನಿಷೇದಾಜ್ಞೆ ಹೊರಡಿಸಿದ್ದರೂ ಯಾವುದೇ ಜನರು ಸಾಮನ್ಯ ಗಂಬೀರವಾಗಿ ತೆಗೆದುಕೊಂಡಿಲ್ಲ.ಈಗ ರಸ್ತೆ ಮೇಲೆ ಅನಾವಶ್ಯಕವಾಗಿ ಕಂಡು ಬಂದರೇ ಲಾಠಿ ರುಚಿ ತೋರಿಸುವುದಲ್ಲದೇ ಕ್ರಿಮಿನಲ್ ಕೇಸ್ ಹಾಕಲಾಗುವುದೆಂದು ಎಚ್ಚರಿಕೆ ನೀಡಿದರೂ ಯಾವುದಕ್ಕೂ ಲೆಕ್ಕಕ್ಕೆ ತೆಗೆದುಕೊಳ್ಳುತ್ತಿಲ್ಲ.ಆದ್ದರಿಂದ ತಾಲೂಕಾಢಳಿತ ಕೊರೊನಾ ತಡೆಗಟ್ಟಲು ಹೊಸ ನಿಯಮ ತಂದಿದ್ದಾರೆ.
ತರಕಾರಿ ಮಾರುಕಟ್ಟೆಯಲ್ಲಿ ಇಕ್ಕಟ್ಟಾದ ಸ್ಥಳ ಹಾಗೂ ಎಲ್ಲಾ ಅಂಗಡಿಗಳು ಒಂದೇ ಕಡೆ ಇರುವುದರಿಂದ ಜನಜಂಗುಳಿ ಉಂಟಾಗುತ್ತಿರುವುದರಿಂದ ತಾತ್ಕಾಲಿಕವಾಗಿ ಮುಚ್ಚಲಾಗಿದೆ. ತರಕಾರಿ ಹಾಗೂ ಹಣ್ಣು ಮಾರಾಟ ಮಾಡಲು ನಗರದ ಬಿವಿಎಮ್ ಆಟದ ಮೈದಾನದಲ್ಲಿ ಬೆಳಿಗ್ಗೆ 7ರಿಂದ 10 ಗಂಟೆಯವರೆಗೆÀ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ.ಅಲ್ಲದೇ ಮೈದಾನದಲ್ಲಿ ಚೌಕಾಕಾರದ ಚಿತ್ರ ರಚನೆ ಮಾಡಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ತಿಳಿಸಿ ಎಂದು ಆರೋಗ್ಯ ನಿರೀಕ್ಷಕರಿಗೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…