ಬಿಸಿ ಬಿಸಿ ಸುದ್ದಿ

ಮಹಿಳೆಯರಿಗೆ ಧ್ವನಿ ಕೊಟ್ಟವರು ಬಸವಣ್ಣನವರು: ಐ.ಆರ್. ಮಠಪತಿ

ಕಲಬುರಗಿ: 12 ನೇ ಶತಮಾನಕ್ಕೂ ಪೂರ್ವದಲ್ಲಿ ಮಹಿಳೆಯರ ಸ್ಥಿತಿ ಚಿಂತಾಜನಕವಾಗಿತ್ತು. ಪುರುಷ ಪ್ರಧಾನ ಸಮಾಜ ಅದಾಗಿತ್ತು. ಮಹಿಳೆಯರಿಗೆ ಧ್ವನಿ ಕೊಟ್ಟವರೆ ಅಪ್ಪ ಬಸವಣ್ಣನವರು ಎಂದು ಐ.ಆರ್. ಮಠಪತಿ ಅಭಿಪ್ರಾಯಪಟ್ಟರು.

ಆತ್ಮಕ್ಕೆ ಯಾವ ಬಣ್ಣ ಇಲ್ಲ ಎಂದು ಬಗೆದ ಶರಣರು ಮಹಿಳೆಯರಿಗೆ ಮುಕ್ತ ಸ್ವಾತಂತ್ರ್ಯ ಮಾತ್ರವಲ್ಲ ಪೂಜ್ಯ ಸ್ಥಾನವನ್ನು ನೀಡಿದ್ದರು. ಮಹಿಳೆಯರು ತಮ್ಮ ಅನಿಸಿಕೆಗಳನ್ನು ಮುಕ್ತವಾಗಿ ಹಂಚಿಕೊಂಡರು ಎಂದು ತಿಳಿಸಿದರು. ಜಾಗತಿಕ ಲಿಂಗಾಯತ ಮಹಾಸಭಾ ಹಾಗೂ ವಿವಿಧ ಬಸವಪರ ಸಂಘಟನೆಗಳ ಆಶ್ರಯ ದಲ್ಲಿ ನಡೆದ ಬಸವ ಜಯಂತಿ ಉತ್ಸವದ ನಾಲ್ಕನೇ ದಿನದ ಕಾರ್ಯಕ್ರಮದಲ್ಲಿ ಶರಣರು ಮತ್ತು ಮಹಿಳಾ ಸಂವೇದನೆ ವಿಷಯ ಕುರಿತು ಮಾತನಾಡಿದರು.

ಮನೆಗಳನ್ನು ಮಹಾಮನೆಗಳನ್ನಾಗಿ ಮಾಡುವ ಶಕ್ತಿ ಶರಣರು ತುಂಬಿದರು.ಹೆಣ್ಣು ಸಾಕ್ಷಾತ್ ಕಪಿಲ ಸಿದ್ಧ ಮಲ್ಲಿಕಾರ್ಜುನ ಎಂದು ಅವರು ಕರೆದರು. ಅಕ್ಕ, ನೀಲಾಂಬಿಕೆ, ದುಗ್ಗಳೆ, ಅಕ್ಕನಾಗಮ್ಮ, ಗಜೇಶ ಮಸಣಯ್ಯಗಳ ಪುಣ್ಯಸ್ತ್ರೀ, ಕಾಳವ್ವೆ ಸೇರಿದಂತೆ 33 ಜನರು ಅನುಭವ ಮಂಟಪ ಎಂಬ ವೇದಿಕೆಯಲ್ಲಿ ತಮ್ಮ ಸಂವೇದನೆ ವ್ಯಕ್ತ ಪಡಿಸಿದರು.

ಮಹಿಳೆಯರ ಸೂತಕ ಮಾತ್ರವಲ್ಲ, ಮನದ ಸೂತಕವನ್ನು ಸಹ ಕಳೆದ ಶರಣರು ಮಹಿಳೆಯರಿಗೆ ಉನ್ನತ ಸ್ಥಾನ ನೀಡಿದರು ಎಂದರು. ಕೂಡಲ ಸಂಗಮ ಪಂಚಮಸಾಲಿ ಪೀಠದ ಜಯಬಸವ ಮೃತ್ಯುಂಜಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಪ್ರಭುಲಿಂಗ ಮಹಾಗಾಂವಕರ ಅಧ್ಯಕ್ಷತೆ ವಹಿಸಿದ್ದರು.
ವಿಧಾನಬಪರಿಷತ್ ಮಾಜಿ ಸದಸ್ಯ ಶಶೀಲ ನಮೋಶಿ, ಮಾಜಿ ಮೇಯರ್ ಶರಣು ಮೋದಿ, ಬಿ.ಎಂ. ರಾಂಪುರೆ, ಗುರುಬಸಪ್ಪ ಪಾಟೀಲ, ಸಚಿನ್ ಫರಹತಾಬಾದ್, ಧನರಾಜ ಜೀರಗೆ, ಶಂಕರ ಹೂಗಾರ, ಮಸ್ತಾನ ಬಿರಾದಾರ, ಅರ್ಜುನ ಭದ್ರೆ, ಆರ್.ಜಿ. ಶೆಟಗಾರ, ರವೀಂದ್ರ ಶಾಬಾದಿ, ಬಸವರಾಜ ಮೊರಬದ, ತಿಪ್ಪಣ್ಣಪ್ಪ ಕಮಕನೂರ ಇತರರು ವೇದಿಕೆಯಲ್ಲಿದ್ದರು.

ಇದೇ ವೇಳೆಯಲ್ಲಿ ವಿವಿಧ ಕ್ಷೇತ್ರದಲ್ಲಿನ ಸಾಧಕರಾದ ಮಾಜಿ ಸಚಿವ ಎಸ್.ಕೆ. ಕಾಂತಾ, ಎಂ.ಕೆ. ಆರ್ಟ್ ನ ಮಲ್ಲಿಕಾರ್ಜುನ ಜನವಾಡ, ಎಲ್.ಬಿ.ಕೆ. ಆಲ್ದಾಳ, ಸಂಬಣ್ಣ ಹೊಳಕುಂದಿ ಕಾಯಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಗುಂಡಣ್ಣ ಡಿಗ್ಗಿ, ಸಾಯಬಣ್ಣ ಹೋಳ್ಕರ್, ಬಿ.ಎಚ್. ಭಜಂತ್ರಿ ಅವರಿಗೆ ವಿಶೇಷ ಸನ್ಮಾನ ಮಾಡಲಾಯಿತು. ಜಯಶ್ರೀ ಚಟ್ನಾಳ ಪ್ರಾಸ್ತಾವಿಕ ಮಾತನಾಡಿದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

9 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

11 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

18 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

18 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

18 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago