ಕಲಬುರಗಿ, ಚಿತ್ತಾಪುರ: ಕೊರೋನಾ ವೈರಸ್ ಇಡೀ ವಿಶ್ವವನ್ನೇ ಕಾಡುತ್ತಿರುವ ಕೋವಿಡ್-19 ಸೋಂಕು ತಡೆಗೆ ಕೇಂದ್ರ, ರಾಜ್ಯ ಸರಕಾರ 21 ದಿನ ಲಾಕ್ ಡೌನ್ ಘೋಷಣೆ ಮಾಡಿದ್ದು, ಜಿಲ್ಲಾಡಳಿತದಿಂದ ಜನರು ಯಾರು ಹೊರಗಡೆ ಬರದಂತೆ ನಿಷೇದಾಜ್ಞೆ ಜಾರಿ ಇರುವ ಹಿನ್ನೆಲೆ ತಾಲೂಕಿನಿಂದ 23 ಕಿಲೋ ಮೀಟರ್ ದೂರದ ಸಂಕನೂರು ಗ್ರಾಮದ ಗ್ರಾಮಸ್ಥರು ಗ್ರಾಮದ ಮುಖ್ಯರಸ್ತೆ ಸ್ವಇಚ್ಛೆಯಿಂದ ಬಂದ್ ಮಾಡಿರುವುದ ಬೆಳಕಿಗೆ ಬಂದಿದೆ.
ಎಲ್ಲರೂ ಆರೋಗ್ಯವಾಗಿ ಇರಲು ಮುನ್ನೆಚ್ಚರಿಕೆ ಕ್ರಮ ವಹಿಸಿಕೊಳ್ಳಬೇಕಾಗಿದ್ದು ಹೀಗಾಗಿ ಗ್ರಾಮದವರು ಬೇರೆ ಊರಿಗೆ ಹೋಗಬಾರದು, ಬೇರೆ ಊರಿನವರು ಗ್ರಾಮಕ್ಕೆ ಬರಬಾರದು ಎಂದು ಮುಖ್ಯರಸ್ತೆಯ ನಡುವೆ ಜೆಸಿಪಿಯಿಂದ ಕಲ್ಲಿನ ಬಂಡೆಗಳು ಮತ್ತು ಮಣ್ಣು ಹಾಕಿ ಬಂದ್ ಮಾಡಲಾಗಿದೆ. ಪ್ರತಿಯೊಬ್ಬರು ಸರ್ಕಾರದ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಬೇಕೆಂಬುದು ಗ್ರಾಮಸ್ಥರ ಮಾತಾಗಿದೆ.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಸಾಬಣ್ಣ, ದೇವಪ್ಪ ಅಲ್ಲೂರ್ ಗ್ರಾಮ ಪಂಚಾಯತ್ ಸದಸ್ಯರು, ಬಸವರಾಜ್, ಲಕ್ಕಪ್ಪ, ಹನುಮಂತ ಆರ್ ಡಿ, ಶರಣಪ್ಪ, ಅಯ್ಯಪ್ಪ, ನಿರಂಜನಪ್ಪ, ನಾಗಪ್ಪ ಅಲ್ಲೂರು, ಸೇರಿದಂತೆ ಮುಂತಾದವರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…