ಬಿಸಿ ಬಿಸಿ ಸುದ್ದಿ

“ಕೊರೋನಾ ವೈರಸ್” ಜಾಗೃತಿಗೆ: ಸೇಡಂ ಪೊಲೀಸರಿಂದ ವಿನೂತನ ಪ್ರಯೋಗ

ಕಲಬುರಗಿ: ಮಹಾಮಾರಿ ಕೊರೋನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ, ಸ್ವಯಂ ಸೇವಾ ಸಂಸ್ಥೆಗಳು ಜನರಲ್ಲಿ ಜಾಗೃತಿ ಮೂಡಿಸಲು ಅನೇಕ ಪ್ರಯತ್ನಗಳು ನಡೆಸುತ್ತಿವೆ. ಜಿಲ್ಲೆಯ ಸೇಡಂ ಪಟ್ಟಣದಲ್ಲಿ ಪೊಲೀಸ್ ಇಲಾಖೆಯು ಸಹ ಶ್ರೀ ಕೊತ್ತಲ ಬಸವೇಶ್ವರ ದೇವಸ್ಥಾನದ ಪೂಜ್ಯರಾದ ಶ್ರೀ ಸದಾಶಿವ ಸ್ವಾಮಿಗಳ ನೇತೃತ್ವದಲ್ಲಿ ಅಭಿಯಾನ ಕೈಗೊಳ್ಳುವ ಮೂಲಕ ವಿನೂತನ ಪ್ರಯೋಗಕ್ಕೆ ಮುಂದಾಗಿದೆ.

ಗುರುವಾರ ಬೆಳಿಗ್ಗೆ ಹಳೇ ಸೇಡಂ ಪಟ್ಟಣದ ವಿವಿಧ ಬಡವಾಣೆ ಮತ್ತು ಬೀದಿಗಳಲ್ಲಿ ಟಂಟಂ ವಾಹನದಲ್ಲಿ ಸಂಚರಿಸಿದ ಸೇಡಂನ ಕೊತ್ತಲ ಬಸವೇಶ್ವರ ದೇವಸ್ಥಾನದ ಪೂಜ್ಯರಾದ ಶ್ರೀ ಸದಾಶಿವ ಸ್ವಾಮೀಜಿಗಳು ಧ್ವನಿವರ್ಧಕ ಮೂಲಕ ಕೊರೋನಾ ವೈರಸ್ ಹರಡದಂತೆ ಸಾರ್ವಜನಿಕರು ವಹಿಸಬೇಕಾದ ಎಚ್ಚರಿಕೆ ಕ್ರಮಗಳ ಬಗ್ಗೆ ಅರಿವು ಮೂಡಿಸಿದರು. ಮಹಾಮಾರಿ ಕೊರೋನಾ ಸೋಂಕಿನಿಂದ ಕಲಬುರಗಿಯಲ್ಲಿ ಮೊದಲ ವ್ಯಕ್ತಿ ಮೃತಪಟ್ಟಿರುವುದು ತಮಗೆಲ್ಲ ತಿಳಿದ ಸಂಗತಿಯಾಗಿದೆ. ಸೋಂಕು ತಡೆಗಟ್ಟಲು ಸಾಮಾಜಿಕ ಅಂತರ ಕಾಪಾಡುವುದು ಮುಖ್ಯವಾಗಿದೆ. ಕೊರೋನಾ ಸೊಂಕಿನ ಚೈನ್ ಮುರಿಯಬೇಕಾದರೆ ಸಾರ್ವಜನಿಕರು ಮನೆಯಲ್ಲಿರುವುದು ತುಂಬಾ ಅವಶ್ಯಕವಾಗಿದೆ. ಅನಗತ್ಯ ಮನೆಯಿಂದ ಹೊರಬರಬೇಡಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಜಿಲ್ಲೆಯಲ್ಲಿ ಕರ್ಪ್ಯೂ ಮಾದರಿಯ ವಾತಾವರಣವಿದ್ದರೂ, ಆಹಾರ ಪದಾರ್ಥಗಳು ಸೇರಿದಂತೆ ಅಗತ್ಯ ಸೇವೆ ಮತ್ತು ವಸ್ತುಗಳಿಗೆ ತೊಂದರೆಯಿಲ್ಲ. ಮನೆ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆ ಕಾಪಾಡುವುದು ಮತ್ತು ಆಗಾಗ ಕೈಗಳನ್ನು ಸ್ವಚ್ಛಗೊಳಿಸಿಕೊಳ್ಳಬೇಕು. ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಜಿಲ್ಲಾಡಳಿತ ಮತ್ತು ಸರ್ಕಾರ ನೀಡುವ ಸೂಚನೆಗಳನ್ನು ತಪ್ಪದೆ ಪಾಲಿಸುವ ಮೂಲಕ ಮಾನವ ಸಮಾಜಕ್ಕೆ ಕಂಟಕವಾಗಿರುವ ಕೊರೋನಾ ಸೋಂಕನ್ನು ತೊಲಗಿಸೋಣ ಎಂದು ಸ್ವಾಮೀಜಿಗಳು ಕರೆ ನೀಡಿದರು. ಸ್ವಾಮೀಜಿಯನ್ನು ಕಂಡ ಬಡಾವಣೆಯಲ್ಲಿನ ಜನ ಪೂಜ್ಯರ ಹತ್ತಿರ ಬರಲು ಪ್ರಯತ್ನಿಸಿದರು. ಆದರೆ ಪೂಜ್ಯರು, ಮನೆಯಿಂದ ಯಾರೂ ಹೊರಗೆ ಬರಬೇಡಿ ಎಂದು ವಿನಂತಿಸಿ ಎಲ್ಲರು ನಿಮ್ಮ ಮನೆ-ಕಿಂಡಿಗಳಿಂದಲೇ ನಿಂತು ಕೊರೋನಾ ಸೊಂಕಿನ ಈ ಜನಜಾಗೃತಿ ಅಭಿಯಾನದ ಮಾಹಿತಿಯನ್ನು ಕೇಳಬೇಕು ಎಂದು ಹೇಳುವ ಮೂಲಕ ಸ್ವಯಂ ಸಾಮಾಜಿಕ ಅಂತರ ಕಾಪಾಡಿಕೊಂಡರು.

ಜಾಗೃತಿ ಅಭಿಯಾನದ ಉಸ್ತುವಾರಿ ವಹಿಸಿಕೊಂಡಿರುವ ಸೇಡಂ ಪೊಲೀಸ್ ಠಾಣೆಯ ಸಿಪಿಐ ರಾಜಶೇಖರ ಹಳಿಗೋದಿ ಮಾತನಾಡಿ ಕೊರೋನಾ ಸೋಂಕಿನ ಬಗ್ಗೆ ಜಾಗೃತಿ ಮೂಡಿಸಲು ಪೂಜ್ಯರನ್ನು ಕೇಳಿಕೊಂಡಿದ್ದೇವು. ಅದರಂತೆ ಗುರುವಾರ ಬೆಳಿಗ್ಗೆ ಶ್ರೀ ಸದಾಶಿವ ಸ್ವಾಮೀಜಿಗಳ ನೇತೃತ್ವದಲ್ಲಿ ತುಂಬಾ ಇಕ್ಕಟ್ಟಾದ ಬಡಾವಣೆಯಿರುವ ಸೇಡಂ ಹಳೇ ಪಟ್ಟಣದ ಶೇ.೭೦ರಷ್ಟು ಬಡಾವಣೆಯಲ್ಲಿ ಟಂಟಂ ವಾಹನದ ಮೂಲಕ ಸಂಚರಿಸಿ ಕೊರೋನಾ ಸೋಂಕು ಹರಡುವಿಕೆ ಮತ್ತು ತಡೆಗಟ್ಟುವಿಕೆ ಕ್ರಮಗಳ ಕುರಿತು ಮಾಹಿತಿ ನೀಡಲಾಯಿತು. ಸಾಯಂಕಾಲ ಮೌಲ್ವಿಯವರ ಸಹಾಯ ಪಡೆದು ಅಲ್ಪಸಂಖ್ಯಾತ ಜನರು ವಾಸಿಸುವ ಬಡಾವಣೆಗಳಲ್ಲಿ ಜಾಗೃತಿ ಮೂಡಿಸಲಾಗುವುದು ಎಂದರು. ಇದಲ್ಲದೆ ಮುಂದಿನ ದಿನದಲ್ಲಿ ಆಯಾ ಧರ್ಮಗಳ ಪೂಜ್ಯರನ್ನು ಮತ್ತು ಗ್ರಾಮದ ಹಿರಿಯ ಮುಖಂಡರಿಂದ ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಜನಜಾಗೃತಿ ಮೂಡಿಸಲು ಯೋಜನೆ ಹಾಕಿಕೊಳ್ಳಲಾಗಿದೆ. ಪಟ್ಟಣದ ಔಷಧಿ, ತರಕಾರಿ ಮತ್ತು ಕಿರಾಣಿ ಅಂಗಡಿಗಳ ಮುಂದೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಚೌಕಾಕಾರದ ಬಾಕ್ಸ್ ಹಾಕಲಾಗಿದ್ದು, ಇದು ಎಲ್ಲರ ಮೆಚ್ಚುಗೆಗೆ ಕಾರಣವಾಗಿದೆ. ಪೊಲೀಸ್ ಇಲಾಖೆಯಿಂದ ಈ ಕುರಿತು ನಿರಂತರ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಪಟ್ಟಣದ ಭದ್ರತೆ ಜೊತೆಗೆ ಜನರಲ್ಲಿ ಜಾಗೃತಿ ಮೂಡಿಸುವ ಈ ಕಾರ್ಯಕ್ಕೆ ಪಿ.ಎಸ್.ಐ.ಗಳಾದ ಸುಶೀಲ್ ಕುಮಾರ್, ಅಯ್ಯಪ್ಪ ಸೇರಿದಂತೆ ಪೊಲೀಸ್ ಇಲಾಖೆಯ ಸಿಬ್ಬಂದಿಗಳ ಅವಿರತ ಶ್ರಮ ಅಡಗಿದೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

17 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago