ಕಲಬುರಗಿ: ಕೊರೋನಾ ವೈರಸನಿಂದ ತೀವ್ರ ಆರ್ಥಿಕ ಹೊಡೆತ ಅನುಭವಿಸುತ್ತಿರುವ ಭಾರತದ ಮಧ್ಯಮ ವರ್ಗದ ಜನತೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೀಡಿರುವ ವಿಶೇಷ ಪ್ಯಾಕೇಜನ್ನು ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ ಸ್ವಾಗತಿಸಿದ್ದಾರೆ.
ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ದೇಶವು ೨೧ ದಿನಗಳ ಲಾಕಡೌನನ ೨ನೇ ದಿನ ಆಗುತ್ತಿದ್ದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿಶೇಷ ಆರ್ಥಿಕ ಪ್ಯಾಕೇಜ್‌ನ್ನು ಘೋಷಿಸಿದ್ದಾರೆ ಇದರಿಂದ ದೇಶದ ಬಡ ಜನತೆಗೆ ಮತ್ತು ಮಧ್ಯಮ ವರ್ಗದ ಜನತೆಗೆ ಲಾಭವಾಗಲಿದೆ ಎಂದು ತಿಳಿಸಿದ್ದಾರೆ.
ಗರೀಬ್ ಕಲ್ಯಾಣ ಯೋಜನೆಯಲ್ಲಿ ಮೀಸಲಿಟ್ಟಿರುವ ೧.೭೦ ಸಾವಿರ ಕೋಟಿಯನ್ನು ಈ ಸಂದರ್ಭದಲ್ಲಿ ಬಳಸಲಾಗುವುದು. ವೈರಸ್ ವಿರುದ್ಧ ಹೋರಾಡುತ್ತಿರುವವರಿಗೆ ೫೦ ಲಕ್ಷ ವಿಮೆ ಜಾರಿ, ಪ್ರತಿಯೊಬ್ಬರಿಗೆ ಮುಂದಿನ ಮೂರು ತಿಂಗಳು ೫ ಕೆಜಿ ಅಕ್ಕಿ ಅಥವಾ ಗೋಧಿ ಇದರೊಂದಿಗೆ ಉಚಿತವಾಗಿ ಬೆಳೆ ನೀಡುವುದು ಈ ಯೋಜನೆಯಿಂದ ದೇಶದ ೮೦ ಕೋಟಿ ಜನತೆಗೆ ಲಾಭವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.
೩ ಕೋಟಿ ಬಡ ಹಿರಿಯ ನಾಗರಿಕ, ವಿಧವೆಯರು ಮತ್ತು ಅಂಗವಿಕಲರಿಗೆ ೧೦೦೦ ಸಾವಿರ ರೂ. ಪಿಂಚಣಿ, ಉಜ್ವಲಾ ಯೋಜನೆಯಡಿ ಮಹಿಳೆಯರಿಗೆ ೩ ತಿಂಗಳು ಉಚಿತ ಸಿಲಿಂಡರ್, ರೈತರಿಗೆ ನೇರ ನಗದು ವರ್ಗಾವಣೆ ಮೂಲಕ ೨೦೦೦ ಸೇರಿದಂತೆ ಅನೇಕ ಜನೋಪಯೋಗಿ ಕ್ರಮಗಳನ್ನು ಕೇಂದ್ರ ಸರ್ಕಾರ ಕೈಗೊಂಡಿದೆ ಅದಕ್ಕಾಗಿ ಕೇಂದ್ರ ಸರ್ಕಾರವನ್ನು, ಪ್ರಧಾನಮಂತ್ರಿಗಳನ್ನು ಹಾಗೂ ಹಣಕಾಸು ಸಚಿವರನ್ನು ಅಭಿನಂದಿಸುವುದಾಗಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…