ಸಾಮಾಜಿಕ ಅಂತರ ಕಾಯ್ದುಕೊಳ್ಳುದ ಜನತೆ: ಆತಂಕ

0
78

ಚಿತ್ತಾಪುರ: ಇಡೀ ಜಗತ್ತನ್ನು ಬೆಚ್ಚಿಬೀಳಿಸಿದ ಮಹಾಮಾರಿ ಕೊರೊನ್ ವೈರಾಣು ಹರಡುವಿಕೆಯನ್ನು ತಡೆಗಟ್ಟಲು ಸರ್ಕಾರ ವಿವಿಧ ರೀತಿಯಲ್ಲಿ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಆದರೆ ಇತ್ತ ಜನತೆ ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಯಾವುದನ್ನೂ ಲೆಕ್ಕಿಸದೇ ತಮ್ಮ ದಿನನಿತ್ಯದ ಚಟುವಟಿಕೆಗಳಲ್ಲಿ ತೊಡಗಿರುವುದು ಅತ್ಯಂತ ದುರಂತದ ಸಂಗತಿ.

ಇದಕ್ಕೆ ಸಾಕ್ಷಿಯೆಂಬಂತೆ ಚಿತ್ತಾಪುರ ಪಟ್ಟಣದಲ್ಲಿ ಮೆಡಿಕಲ್ ಅಂಗಡಿಗಳಲ್ಲಿ ಜನರು ಗುಂಪಾಗಿ ಮಾತ್ರೆ ಔಷಧಿಗಳನ್ನು ತೆಗೆದುಕೊಳ್ಳುತ್ತಿರುವ ದೃಶ್ಯ ಇಂದು ಬೆಳಗ್ಗೆ ಸಾಮಾನ್ಯವಾಗಿ ಕಂಡು ಬಂದಿತ್ತು.

Contact Your\'s Advertisement; 9902492681

ಈ ಪರಿಸ್ಥಿತಿಯಲ್ಲಿ ಯಾವುದೇ ಅಗತ್ಯ ವಸ್ತುಗಳನ್ನು ಕರೆದು ಮಾಡುವ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅತ್ಯವಶ್ಯಕ ಆದ್ದರಿಂದ ಜಿಲ್ಲಾ ಆಡಳಿತದ ಮೇರೆಗೆ ಚಿತ್ತಾಪುರ ಪುರಸಭೆ ಅಧಿಕಾರಿಗಳು ಸಾಮಾಜಿಕ ಅಂತರ ಕಾಯ್ದುಕೊಳ್ಳಲು 1ಮೀಟರ್ ಚೌಕಾಕಾರದ ಚಿತ್ರ ಬಿಡಿಸುವ ಮೂಲಕ ಜಾಗೃತಿ ಮೂಡಿಸಿ, ಈ ಚೌಕಾಕಾರದಲ್ಲಿ ಸರದಿ ಸಾಲಿನಲ್ಲಿ ಜನರು ನಿಂತು ಅಗತ್ಯ ವಸ್ತುಗಳನ್ನು ಖರೀದಿಸುವಂತೆ ಸೂಚಿಸಲಾಗಿತ್ತು.

ಆದರೆ ಸಾರ್ವಜನಿಕರು ದಿಕ್ಕರಿಸುವುದು ಅತ್ಯಂತ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಮುಂದಾಗುತ್ತಿಲ್ಲ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ಸೂಕ್ತ ಕ್ರಮಗಳನ್ನು ಜರುಗಿಸುವುದು ಅತ್ಯವಶ್ಯಕವಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here