COVID-19 ನಿಭಾಯಿಸಲು : ಸಿಎಂ ಪರಿಹಾರ ನಿಧಿಗೆ 25 ಲಕ್ಷ ದೇಣಿಗೆ

0
79

ಕಲಬುರಗಿ: ಶರಣಬಸವೇಶ್ವರ ಸಂಸ್ಥಾನದ ೮ನೇ ಪೀಠಾಧಿಪತಿಯಾದ ಪರಮ ಪೂಜ್ಯ ಡಾ. ಶರಣಬಸವಪ್ಪ ಅಪ್ಪ ಅವರು ಮಾರಕವಾಗಿ ಕಾಡುತ್ತಿರುವ covid-೧೯ ನಿಭಾಯಿಸಲು, ಶರಣಬಸವ ವಿಶ್ವವಿದ್ಯಾಲಯ ಮತ್ತು ಶರಣಬಸವೇಶ್ವರ ವಿದ್ಯಾವರ್ಧಕ ಸಂಘವು ರಾಜ್ಯದ ಮುಖ್ಯಮಂತ್ರಿ (ಸಿಎಂ) ಪರಿಹಾರ ನಿಧಿಗೆ ೨೫ ಲಕ್ಷ ದೇಣಿಗೆ ನೀಡಲು ನಿರ್ಧರಿಸಿದೆ ಎಂದು ಶುಕ್ರವಾರ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿ ಹಾಗೂ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಪೂಜ್ಯ ಡಾ. ಶರಣಬಸವಪ್ಪ ಅಪ್ಪ ಅವರು ವಿಶ್ವವಿದ್ಯಾಲಯ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳ ಒಂದು ದಿನದ ಸಂಬಳವನ್ನು ವಿದ್ಯಾವರ್ಧಕ ಸಂಘ ಪರಿಹಾರ ನಿಧಿಗೆ ನೀಡಲಿದೆ ಎಂದು ತಿಳಿಸಿದ್ದಾರೆ.

Contact Your\'s Advertisement; 9902492681

ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರಪರ್ಸನರಾದ ಮಾತೋಶ್ರೀ ದಾಕ್ಷಾಯಿಣಿ ಅವ್ವನವರು ಶ್ರೀಮಂತ ಸಂಪ್ರದಾಯವನ್ನು ಅನುಸರಿಸುತ್ತಿರುವ ವಿಶ್ವವಿದ್ಯಾಲಯದ ಬೋಧನಾ ಮತ್ತು ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾವರ್ಧಕ ಸಂಘ ಈ ಹಿಂದೆ ನೈಸರ್ಗಿಕ ವಿಪತ್ತು ನಿಭಾಯಿಸಲು ಸರ್ಕಾರಕ್ಕೆ ಸಹಾಯ ಧನವನ್ನು ನೀಡಲಾಗಿತ್ತು. ಈಗಲೂ covid-೧೯ ನಿಭಾಯಿಸಲು ಸಿಎಂ ಪರಿಹಾರ ನಿಧಿಗೆ ಉದಾರವಾಗಿ ದೇಣಿಗೆ ನೀಡಲು ವಿಶ್ವವಿದ್ಯಾಲಯ ಮತ್ತು ವಿದ್ಯಾವರ್ಧಕ ಸಂಘ ಮುಂದೆ ಬಂದಿದೆ. ೨೫ ಲಕ್ಷದ ಚೆಕ್ ಅನ್ನು ಕಲಬುರಗಿ ಜಿಲ್ಲಾಧಿಕಾರಿ ಬಿ ಶರತ್ ಅವರಿಗೆ ಹಸ್ತಾಂತರಿಸಲಾಗುವುದು ಎಂದು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here