ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಿಂದ ಕೊರೊನಾ ವೈರಸ್ ಭೀತಿಯಲ್ಲಿರುವ ಜನಸಾಮಾನ್ಯರಿಗೆ 17000 ಸಾವಿರ ಕೋಟಿ ವಿಶೇಷ ಪ್ಯಾಕೇಜ್ ಹಾಗೂ ಎಲ್ಲಾ ಬ್ಯಾಂಕ್ ಗಳ ಸಾಲದ ಇಎಂಐ ರಿಯಾಯಿತಿ ಮತ್ತು ರಿಪೋ ದರದಲ್ಲಿ ಕಡಿತ ಮಾಡಿರುವುದರಿಂದ ಜನಸಾಮಾನ್ಯರಿಗೆ ತುಂಬಾ ಅನುಕೂಲವಾಗಲಿದೆ ಎಂದು ಕಲಬುರಗಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರೂ ಆದ ಅಂಬಾರಾಯ ಅಷ್ಠಗಿ ಹೇಳಿದ್ದಾರೆ
ಕಿಸಾನ್ ಸಮ್ಮಾನ ಯೋಜನೆಯಡಿ 8.69 ಕೋಟಿ ರೈತರಿಗೆ 2000 ತಕ್ಷಣ ಖಾತೆಗೆ ಜಮೆ,ಸುಮಾರು 5 ಕೋಟಿ ವೃದ್ಧರು,ವಿಧವೆಯರು ಅಂಗವಿಕಲರಿಗೆ ಮುಂದಿನ 3 ತಿಂಗಳು 1000 ರೂ ಜಮೆ, ಎಲ್ಲಾ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಮುಂದಿನ 3 ತಿಂಗಳ ಉಚಿತವಾಗಿ ಗ್ಯಾಸ್ ವಿತರಣೆ,ಸ್ವಸಹಾಯ ಸಂಘಗಳಿಗೆ ನೆರವು. ತುರ್ತು ಸೇವೆದಾರರಿಗೆ 50 ಲಕ್ಷ ನೆರವು. ಬಡವರಿಗೆ ಉಚಿತ ಪಡಿತರ ವಿತರಣೆ. ವೈದ್ಯರು, ನರ್ಸ್, ಆಶಾ ಕಾರ್ಯಕರ್ತರಿಗೆ, ಪೌರ ಕಾರ್ಮಿಕರಿಗೆ ವಿಮೆ ಯೋಜನೆ. ಮನ್ರೆಗಾ ಕೂಲಿ ಕಾರ್ಮಿಕರಿಗೆ ಸಹಾಯಧನದ ಹೆಚ್ಚಳ.
ಅಲ್ಲದೆ ಕೊರೊನಾ ವೈರಸ್‌ನಿಂದ ಹದಗೆಡುತ್ತಿರುವ ಆರ್ಥಿಕತೆಯನ್ನು ಸರಿದಾರಿಗೆ ತರಲು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ಭಾರತೀಯ ರಿಸರ್ವ್ ಬ್ಯಾಂಕ್ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಆರ್.ಬಿ.ಐ ಮೂರು ತಿಂಗಳ ಇ.ಎಂ.ಐ, ರೆಪೋ, ರಿವರ್ಸ್ ರೆಪೋ ದರವನ್ನು ಕಡಿತಗೊಳಿಸುವ ಮೂಲಕ ಜನರ ಸಂಕಷ್ಟಕ್ಕೆ ಸ್ಪಂದಿಸುತ್ತಿದೆ ಎಂದು ಬಿಜೆಪಿ ಜಿಲ್ಲಾ ಜಿಲ್ಲಾ ಉಪಾಧ್ಯಕ್ಷ ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಅಂಬಾರಾಯ ಅಷ್ಠಗಿ ಸ್ವಾಗತಿಸಿದ್ದಾರೆ.
ಇಂತಹ ಸಂದರ್ಭದಲ್ಲಿ ಪ್ರತಿಯೊಬ್ಬರೂ ಮನೆಯಲ್ಲಿಯೇ ಉಳಿದು ಕೊರೊನಾ ವೈರಸ್ ನಿರ್ಮೂಲನೆಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಿಯಮಾವಳಿಗಳನ್ನು ಪಾಲಿಸಿ ಸಹಕರಿಸಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…