ಬಿಸಿ ಬಿಸಿ ಸುದ್ದಿ

ಕೊರೊನಾ ಎಫೆಕ್ಟ್‌ಗೆ ತರಕಾರಿ ಮಾರುಕಟ್ಟೆ ಶಿಫ್ಟ್

ಶಹಾಬಾದ: ನಗರದ ಭೆಂಡಿ ಬಜಾರ ಪ್ರದೇಶದಲ್ಲಿ ಕಳೆದ ಹಲವಾರು ವರ್ಷಗಳಿಂದ ನಡೆಯುತ್ತಿದ್ದ ತರಕಾರಿ ವ್ಯಾಪಾರಕ್ಕೆ ಶುಕ್ರವಾರ ಬ್ರೇಕ್ ಬಿದ್ದಿದ್ದು, ಸಂಪೂರ್ಣ ತರಕಾರಿ ಮಾರುಕಟ್ಟೆಯನ್ನು ಸರಕಾರಿ ಪ್ರೌಢ ಶಾಲೆಯ ಆವರಣಕ್ಕೆ ಶುಕ್ರವಾರ ಸ್ಥಳಾಂತರಿಸಲಾಗಿದೆ.

ರಾಜ್ಯದಲ್ಲಿ ಕರೋನಾ ವೈರಸ್ ಕೈಮೀರುತ್ತಿದ್ದು, ತಾಲೂಕ ಆಡಳಿತ, ನಗರ ಸಭೆ, ಪೊಲೀಸ್ ಇಲಾಖೆ ಹಾಗೂ ಶಾಸಕ ಬಸವರಾಜ ಮತ್ತಿಮಡು ಅವರೊಂದಿಗೆ ನಡೆಸಿದ ಸಭೆಯಲ್ಲಿ ಭೆಂಡಿ ಬಜಾರದಲ್ಲಿರುವ ತರಕಾರಿ ಮಾರುಕಟ್ಟೆ ಕಿರಿದಾಗಿದ್ದು, ಜನಸಂದಣಿ ಅಧಿಕವಾಗುತ್ತಿದ್ದುದರಿಂದ ಮುಂಜಾಗೃತ ಕ್ರಮವಾಗಿ ಪ್ರೌಢಶಾಲೆ ಆವಣರಕ್ಕೆ ತಾತ್ಕಾಲಿವಾಗಿ ಸ್ಥಳಾಂತರಿಸಲು ನಿರ್ಧರಿಸಲಾಗಿತ್ತು. ವ್ಯಾಪಾರಸ್ಥರು ಅಲ್ಲಿಗೆ ಹೋಗಲು ಒಪ್ಪದೆ ಇದ್ದಾಗ, ತಾಲೂಕ ಆಡಳಿತ ಕಡಕ್ ಎಚ್ಚರಿಕೆ ನೀಡಿದ್ದರಿಂದ ಅನಿವಾರ್ಯವಾಗಿ ಪ್ರೌಢಶಾಲೆಯ ಆವರಣದಲ್ಲಿ ಸ್ಥಳಾಂತರವಾಗಿದೆ.ನಗರ ಸಭೆಯಿಂದ ಹಾಕಿದ ಮಾರ್ಕೌಟ ಮಾಡಿದ ನಿಗದಿತ ಸ್ಥಳದಲ್ಲಿ ತರಕಾರಿ, ಹಣ್ಣುಗಳ ವ್ಯಾಪಾರ ನಡೆಸಿದರು. ಸಾರ್ವಜನಿಕರೂ ಹೆಚ್ಚಿನ ಜನರೂ ಬಂದರೂ ಅಂತರ ಕಾಯ್ದುಕೊಳ್ಳುವಷ್ಟು ಸ್ಥಳ ಇರುವದರಿಂದ ಯಾವುದೇ ತೊಂದರೆಯಾಗಲಿಲ್ಲ.

ಪಿಐ. ಅಮರೇಶ.ಬಿ, ಪಿಎಸ್‌ಐ ಮಹಾಂತೇಶ ಪಾಟೀಲ, ಪಿಎಸ್‌ಐ ಯಲ್ಲಮ್ಮಾ ಅವರ ನೇತೃತ್ವದಲ್ಲಿ ಶಾಲೆ ಆವರಣದಲ್ಲಿ ತರಕಾರಿ ಹೊತ್ತು ತಂದ ವಾಹನ ಹೊರತಾಗಿ ಯಾವುದೆ ವಾಹನ ಒಳಗೆ ಬಿಡದೆ, ರಸ್ತೆ ಪಕ್ಕದಲ್ಲಿ ವಾಹನ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಿದ್ದರಿಂದ ಜನಸಂದಣಿ ಇಲ್ಲದೆ ಸುಸೂತ್ರವಾಗಿ ತರಕಾರಿ ವ್ಯಾಪಾರ ನಡೆಯಿತು. ಬೆಳಗ್ಗೆ ೭ ಗಂಟೆಯಿಂದ ೧೧ ಗಂಟೆ ವರೆಗೆ ತರಕಾರಿ, ಹಣ್ಣು, ದಿನಸಿ ವ್ಯಾಪಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

13 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

15 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

22 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

22 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

23 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago