ಕಲಬುರಗಿ: ಕೊರೋನ ಸೋಂಕು ತಡೆಗೆ ನಗರ ಸ್ವಚ್ಛತೆಯಾಗಿಟ್ಟುಕೊಳ್ಳುವುದರ ಜೊತೆಗೆ ಸಾರ್ವಜನಿಕರು ಸರಕಾರ ವಿಧಿಸಿರುವ ನಿಬಂಧನೆಗಳನ್ನು ಪಾಲಿಸಬೇಕಿದೆ ಎಂದು ಶಾಸಕರಾದ ಪ್ರಿಯಾಂಕ್ ಖರ್ಗೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದು ಈ ವೇಳೆಯಲ್ಲಿ ವಿಧಾನ ಪರಿಷತ್ ಸದಸ್ಯ ತಿಮ್ಮಪ್ಪ ಕಮಕನೂರು ಸ್ವಚ್ಛತಾ ಕೆಮಿಕಲ್ ಹಸ್ತಾಂತರಿಸಿದರು.
ಮಹಾನಗರ ಪಾಲಿಕೆಗೆ ತಮ್ಮ ಹಾಗೂ ಜಿಲ್ಲಾ ಕಾಂಗ್ರೆಸ್ ವತಿಯಿಂದ 50 ಕ್ಯಾನ್ ನೆಲಹಾಸು ಸ್ವಚ್ಚಗೊಳಿಸುವ ಕೆಮಿಕಲ್( ಫ್ಲೋರ್ ಕ್ಲೀನಿಂಗ್ ), 1000 ಕೆಜಿ ಬ್ಲೀಚಿಂಗ್ ಪೌಡರ್ ಹಾಗೂ ಪೌರಕಾರ್ಮಿಕರ ಬಳಕೆಗಾಗಿ 5,000 ಕೈಗವಸುಗಳನ್ನು ನೀಡಿದ್ದಾರೆ.
ಸದರಿ ವಸ್ತುಗಳನ್ನು ಇಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಜಗದೇವ ಗುತ್ತೇದಾರ, ಎಂ ಎಲ್‌ಸಿ ತಿಪ್ಪಣ್ಣಪ್ಪ ಕಮಕನೂರು, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಡಾ ಕಿರಣ್ ದೇಶಮುಖ್ ಅವರು ಮಹಾನಗರ ಪಾಲಿಕೆಯ ಕಮೀಷನರ್ ರಾಹುಲ್ ಪಾಂಡ್ವೆ ಅವರಿಗೆ ಹಸ್ತಾಂತರಿಸಿದರು.
ರಾಜ್ಯಾದ್ಯಂತ ಕೊರೋನಾ ಸೋಂಕು ತನ್ನ ಕರಾಳ ಹಸ್ತ ಚಾಚುತ್ತಿದೆ. ಈ ಸೋಂಕಿಗೆ ತುತ್ತಾಗಿ ಕಲಬುರಗಿಯ ವ್ಯಕ್ತಿಯೊಬ್ಬರು ಮೃತ ಹೊಂದಿದ್ದಾರೆ. ಜೊತಗೆ ಕುಟುಂಬದ ಸದಸ್ಯರಿಗೆ ಹಾಗೂ ಮೊದಲಿಗೆ ಅವರಿಗೆ ಚಿಕಿತ್ಸೆ ನೀಡಿದ ವೈದ್ಯರೊಬ್ಬರಿಗೂ ಸೋಂಕು ತಗುಲಿದ್ದು ದುರದೃಷ್ಟಕರ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಹಲವಾರು ಕಟ್ಟುನಿಟ್ಟಿನ ಕ್ರಮ ಕೈಗೊಂಡು ಸೋಂಕು ಹರಡದಂತೆ ಇಂದಿಗೂ ಶ್ರಮವಹಿಸುತ್ತಿವೆ ಎಂದು ಅವರು ಪ್ರಶಂಸಿದರು.
ಸೋಂಕು ಹರಡದಂತೆ ತಡೆಯಲು ಎಲ್ಲರೂ ಮನೆಯಲ್ಲಿಯೇ ಇದ್ದು ಸಹಕರಿಸಬೇಕೆಂದು ಅವರು ಕೋರಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…