ಕಲಬುರಗಿ, ಚಿತ್ತಾಪುರ: ಜಿಲ್ಲೆಯಲ್ಲಿ ಕೊರೊನ್ ವೈರಸ್ ಸೋಂಕಿಗೀಡಾಗಿದ್ದ ವೃದ್ಧರೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಜರುಗಿಸುವ ನಿಟ್ಟಿನಲ್ಲಿ, ಕಲಬುರ್ಗಿ ಜಿಲ್ಲೆಯಾದ್ಯಂತ ಮುಂದಿನ ಆದೇಶದವರೆಗೆ ಪೆಟ್ರೋಲ್ ಡೀಸೆಲ್ ಬಂಕ್ ಮುಚ್ಚುವುದು ಅತ್ಯಾವಶ್ಯಕವಾಗಿ ಇರುತ್ತದೆ ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಈ ಹಿನ್ನೆಲೆ ಇಂದು ಚಿತ್ತಾಪುರ ಪಟ್ಟಣ ಸೇರಿ ಹಳ್ಳಿಗಳ ಜನರು ಪೆಟ್ರೋಲ್ ಡೀಸೆಲ್ ಭರಿಸಲು ಮತ್ತು ಕೆಲವು ದಿನಗಳಿಗಾಗಿ ಹೆಚ್ಚು ಪೆಟ್ರೋಲ್ ಪಡಿಬೇಕೆಂದು ಇಂದು ಸಂಜೆ ಸುಮಾರು 8 ಗಂಟೆಯಿಂದ ಜನರು ಪೆಟ್ರೋಲ್ ಬಂಕಿಗೆ ಮುಗಿಬಿದ್ದಿದ್ದಾರೆ.
ಈ ಸಮಯಕ್ಕೆ ಪಿಎಸ್ಐ ಶ್ರೀಶೈಲ ಅಂಬಾಟಿ ಸ್ಥಳಕ್ಕೆ ಆಗಮಿಸಿ ಪೆಟ್ರೋಲ್ ಬಂಕಿನ ಮಾಲೀಕರಿಗೆ ನಾಳೆಯಿಂದ ಪೆಟ್ರೋಲ್ ಡೀಸೆಲ್ ಸಾಮಾನ್ಯ ಸಾರ್ವಜನಿಕರಿಗೆ ಹಾಕಕೂಡದು ಎಂದು ಸೂಚನೆ ನೀಡಿದ್ದಾರೆ.
ಈ ವೇಳೆಯಲ್ಲಿ ಪೆಟ್ರೋಲ್ ಡೀಸೆಲ್ ಗಾಗಿ ಮುಗಿಬಿದ್ದ ಜನರನ್ನು ದೂರ ದೂರ ನಿಂತು ಬೇಗ ಬೇಗನೆ ಪೆಟ್ರೋಲ್-ಡೀಸೆಲ್ ತೆಗೆದುಕೊಂಡು ಹೋಗಿ ಎಂದು ಪೆಟ್ರೋಲ್ ಪಡೆಯಲು ಪರದಾಡುತ್ತಿರುವ ಜನರಿಗೆ ಸಾಮಾಜಿಕ ಅಂತರ ಕಾಯ್ದುಕೊಳಬೇಕೆಂದು ತಾಕೀತು ಮಾಡಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…