ಬಿಸಿ ಬಿಸಿ ಸುದ್ದಿ

ಜಿಲ್ಲಾದ್ಯಂತ ಪೆಟ್ರೋಲ್ ಬಂಕ್‌ ಬಂದ್ ಇಲ್ಲ, ಆದೇಶದಲ್ಲಿ ಬದಲಾವಣೆ

ಕಲಬುರಗಿ: ಪೆಟ್ರೋಲ್ ಬಂಕ್ ನಲ್ಲಿ ಆರೋಗ್ಯ ಸಿಬ್ಬಂದಿಗಳಿಗೆ ಮೊದಲ ಅದ್ಯತೆ ನೀಡಬೇಕು. ತದನಂತರ ಅಗತ್ಯ ಸೇವೆಗಳ ಪೂರೈಸುವವರಿಗೆ. ಕೊನೆಯದಾಗಿ ಇಂಧನ ಲಭ್ಯತೆ ಆಧಾರದ ಮೇಲೆ ಸಾರ್ವಜನಿಕರಿಗೆ ಇಂಧನ ಪೂರೈಸುವಂತೆ ಬಂಕ್ ಮಾಲೀಕರಿಗೆ ನಿರ್ದೇಶನ ನೀಡಲಾಗಿದ್ದು, ಪೆಟ್ರೋಲ್ ಬಂಕ್ ಬಂದ್ ಇರುವುದಿಲ್ಲ ಎಂದು ಡಿಸಿ ತಿಳಿದಿದ್ದಾರೆ.

ಕಲಬುರಗಿ ಜಿಲ್ಲೆಯ ಜನತೆಯನ್ನು ಉದ್ದೇಶಿಸಿ ಶುಕ್ರವಾರ ರಾತ್ರಿ ಜಿಲ್ಲಾಧಿಕಾರಿ ಶರತ್ ಬಿ. ವಿಡಿಯೋ ಜಾರಿ  ಮಾಡಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಅಗತ್ಯ ವಸ್ತುಗಳ ಕೊರತೆ ಇಲ್ಲ. ಅನಾವಶ್ಯಕ ಗೊಂದಲಕ್ಕೆ ಒಳಗಾಗಿ ವಸ್ತುಗಳು ಶೇಖರಿಸಬಾರದು. ಅಲ್ಲದೇ ಹೆಚ್ಚಿನ ದರಲ್ಲಿ ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿದೆ ಎಂದು ತಿಳಿಸಿದರು.

ನಗರದ ಕಣ್ಣಿ ತರಕಾರಿ ಮಾರ್ಕೆಟ್ ಅಟಲ್ ಬಿಹಾರಿ ವಾಜಪೇಯಿ ಆಶ್ರಯ ಬಡಾವಣೆಗೆ ತಾತ್ಕಾಲಿಕ ಸ್ಥಳಾಂತರ ಮಾಡಲಾಗಿದ್ದು, ಅಲ್ಲಿಂದ ಖರೀದಿಸಬಹುದಾಗಿದೆ. ಪ್ರತಿ ವಾರ್ಡಗಳಿಗೂ ಅಗತ್ಯ ವಸ್ತುಗಳ ಪೂರೈಕೆಗೆ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ. ಅಗತ್ಯಗೆ ತಕ್ಕಂತೆ ಮನೆಯಿಂದ ಒಬ್ಬರು ಹೊರಗಡೆ ಬಂದು ಖರೀದಿಸಬಹುದಾಗಿದೆ ಎಂದು ತಿಳಿಸಿದರು.

ದೇಶದಲ್ಲಿ ಲಾಕ್ ಡೌನ್ ಘೋಷಿದ್ದು, ಜಿಲ್ಲಾದ್ಯಂತ ಕಲಂ 144 ಜಾರಿ ಇದ್ದರೂ ಸಹ ಜನರು ಸಾಮಾನ್ಯವಾಗಿ ಹೊರಗಡೆ ಓಡಾಡುತಿದ್ದು, ಕಾನೂನು ಉಲ್ಲಂಘನೆ ಮಾಡುತ್ತಿರುವ ಬಗ್ಗೆ ವರದಿಯಾಗುತಿದೆ. ಅನಾವಶ್ಯಕ ಹೊರಗಡೆ ಬಂದರೆ ಕಠಿಣ ಕ್ರಮ ಕೈಗೊಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಹೋಂ ಐಸೋಲೇಷನ್ ನಲ್ಲಿ ಇದ್ದವರು ಹೊರಗಡೆ ಓಡಾಡುತ್ತಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದ್ದು ತಕ್ಷಣ ಅಂತಹವರ ವಿರುದ್ದ ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿ, ಪ್ರತಿಯೊಬ್ಬರು ಸಹ ಸಾಮಾಜಿಕ ಅಂತರ ಕಾಯ್ದುಕೊಳಬೇಕೆಂದು ತಿಳಿಸಿದ್ದಾರೆ.

ಅದೇ ರೀತಿ ಬಾಡಿಗೆ ಮನೆಯಲ್ಕಿರುವ ವೈದ್ಯರು ಮತ್ತು ಸರಕಾರಿ ಆಸ್ಪತ್ರೆಯಕ್ಲಿಯ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಮನೆ ಖಾಲಿ ಮಾಡಲು ಒತ್ತಡ ಹೇರಲಾಗುತ್ತಿದೆ ಎಂದು ತಿಳಿದುಬಂದಿದೆ. ಅಂಥಹ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಮನೆ ಮಾಲೀಕರನ್ನು ಸಮಸ್ಯೆ ಮುಗಿಯುವ ವರೆಗೆ ಬೆರೆಡೆಗೆ ಸ್ಥಾಳಾಂತರಿಸಿ ಇರಿಸಲಾಗುವುದೆಂದು ತಿಳಿಸಿದರು.

ಸಾಲಪಡೆದವರಿಗೆ ಈ ವೇಳೆಯಲ್ಲಿ ಸಾಲ ವಸೂಲಾತಿ ಯಾವುದೇ ರೀತಿಯ ಹಿಂಸೆ ಮತ್ತು ನೋಟಿಸ್ ನೀಡಬಾರದು, ವಿಶೇಷವಾಗಿ ಫೈನಾನ್ಸ್ ಸಂಸ್ಥೆಗಳು ಸಮಸ್ಯೆ ಮುಗಿಯುವ ವರೆಗೆ ಯಾವುದೇ ರೀತಿಯ ಸಾಲವನ್ನು ಪಾವತಿ ಮಾಡಬಾರದೆಂದು ಜಿಲ್ಲಾಧಿಕಾರಿ ಶರತ್ ಬಿ ಈ ವೇಳೆಯಲ್ಲಿ ಮಾತನಾಡಿ ಆದೇಶಿದ್ದಾರೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

10 mins ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

10 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

10 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

10 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago