ಕಲಬುರಗಿ: ಕಾಂಗ್ರೇಸ್ ನವರು ದೇಶಕ್ಕಾಗಿ ಜೈಲಿಗೆ ಹೋಗಿದ್ದಾರೆ. ಆದರೆ ಬಿಜೆಪಿಯವರು ಏನಾದರೂ ಹೋಗಿದ್ದರೆ ಅದು ಭಷ್ಟಾಚಾರ ಮಾಡಿ ಜೈಲಿಗೆ ಹೋಗಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತೀಕ್ಷ್ಣವಾಗಿ ಟೀಕಿಸಿದರು.
ಚಿಂಚೋಳಿ ಮತ ಕ್ಷೇತ್ರದ ಕೊಡದೂರು ಗ್ರಾಮದಲ್ಲಿ ನಡೆದ ಉಪ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿ, ಆಹಾರ ಭದ್ರತೆ ಕಾಯಿದೆ, ಶೈಕ್ಷಣಿಕ ಹಕ್ಕು ಕಾಯಿದೆ, ಮಾಹಿತಿ ಹಕ್ಕು ಕಾಯಿದೆ ಹಾಗೂ ನರೇಗಾ ಜಾರಿಗೆ ತಂದಿದ್ದು ಮಾಜಿಪಿಎಂ ಮನಮೋಹನಸಿಂಗ್ ಅಂತ ಒಂದಾದರೂ ಇಂತ ಯೋಜನೆ ತಂದಿದ್ದರೇ ಹೇಳಲಿ ಎಂದು ಸಿದ್ದರಾಮಯ್ಯ ಹೇಳಿದರು.
ಬಿಜೆಪಿಯವರು ಲೂಟಿಕೋರರು ಎಂದು ಜರಿದ್ದ ಮಾಜಿ ಸಿಎಂ ಯಡಿಯೂರಪ್ಪ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಹಾಲಪ್ಪ, ಜನಾರ್ಧನರೆಡ್ಡಿ ಅಮಿತ್ ಶಾ ಜೈಲಿಗೆ ಹೋಗಿ ಬಂದವರು. ಜೈಲಿಗೆ ಹೋಗಿದ್ದು ಯಾಕೆ? ಬೀಗತನ ಮಾಡಕ್ಕೋಗಿದ್ರಾ? ಎಂದು ಪ್ರಶ್ನಿಸಿದರು.
ಜಾಧನ್ ಅವರನ್ನು ಏಕವಚನದಲ್ಲಿ ಝಾಡಿಸಿದ ಸಿದ್ದರಾಮಯ್ಯ, ಎರಡು ಸಲ ನೀವು ಆರಿಸಿ ಕಳಿಸಿದ ಜಾಧವ್ ಬಿಜೆಪಿಗೆ ಹೋಗಿದ್ದು ಮತದಾರರಿಗೆ ಅಗೌವರ ತೋರಿಸಿದ್ದಾನೆ. ಅವನಿಗೆ ಮರ್ಯಾದೆ ಇದೆಯೇನ್ರೀ ಎಂದು ಟೀಕಿಸಿದರು.
ಎಮ್ಮೆಗಳು ಮಾರಾಟವಾಗಿದ್ದನ್ನು ನೋಡಿದ್ದೆವು ಜಾಧವ್ ಬಿಜೆಪಿಗೆ ಮಾರಾಟವಾಗಿ ಎಮ್ಮೆಲ್ಲೆ ರಾಟವಾಗಿರುವುದನ್ನು ನೋಡುವಂತಾಯ್ತು ಎಂದು ಮಾರ್ಮಿಕವಾಗಿ ಹೇಳಿದರು. ನಿಮ್ಮ ನಂಬಿಕೆಗೆ ದ್ರೋಹ ಮಾಡಿದ ಜಾಧವ್ ತನ್ನ ಮಗನನ್ನು ನಿಲ್ಲುಸಿದ್ದಾನೆ ಅವನನ್ನು ಸೋಲಿಸಿ ಎಂದು ಕರೆ ನೀಡಿದರು. ಜಾಧವ್ ಹಾಗೂ ಅವನ ಮಗ ಇಬ್ಬರು ಸೋತು ಖರ್ಗೆ ಹಾಗೂ ರಾಠೋಡ್ ಗೆಲ್ಲಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ವೇದಿಕೆಯ ಮೇಲೆ ಸಂಸದರಾದ ಹಾಗೂ ಕಾಂಗ್ರೇಸ್ ನಾಯಕರಾದ ಎಂ ಮಲ್ಲಿಕಾರ್ಜುನ ಖರ್ಗೆ, ಎಂಎಲ್ ಸಿಗಳಾದ ಸಿಎಂ ಇಬ್ರಾಹಿಂ, ಶರಣಪ್ಪ ಮಟ್ಟೂರು, ಶಾಸಕರಾದ ಅಮರೇಗೌಡ ಭಯ್ಯಾಪುರ, ನಾರಾಯಣರಾವ್, ಜಗದೇವ್ ಗುತ್ತೇದಾರ, ತಿಪ್ಪಣ್ಣಪ್ಪ ಕಮಕನೂರು, ಭೀಮಣ್ಣ ಸಾಲಿ, ರಾಜೇಶ್ ಗುತ್ತೇದಾರ ಸೇರಿದಂತೆ ಮತ್ತಿತರರು ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…