ಕಲಬುರಗಿ: ಮಹಾಮಾರಿ ಕೊರೋನಾ ವಿರುದ್ಧ ನಿರ್ಣಾಯಕ ಯುದ್ಧ ಸಾರಿರುವ ಸರ್ಕಾರದ ನೆರವಿಗೆ ಧಾವಿಸುವ ನಿಟ್ಟಿನಲ್ಲಿ ಕಲಬುರಗಿಯ ನಿವೃತ್ತ ಕನ್ನಡ ಪ್ರಾಧ್ಯಾಪಕಿಯೊಬ್ಬರು ತಮ್ಮ ಒಂದು ತಿಂಗಳ ನಿವೃತ್ತಿ ವೇತನವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆಯಾಗಿ ನೀಡಿದ್ದಾರೆ.
ಕಲಬುರ್ಗಿಯ ನಿವೃತ್ತ ಕನ್ನಡ ಪ್ರಾಧ್ಯಾಪಕಿ ಪ್ರೊ. ಮಹಾನಂದಾ ಎಸ್ ಡಿಗ್ಗಾಂವಕರ್ ಅವರು ತಮ್ಮ ಒಂದು ತಿಂಗಳ ಮಾಸಿಕ ನಿವೃತ್ತಿ ವೇತನ ೪೫,೪೭೬ರೂ. ಗಳನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆಯಾಗಿ ನೀಡಿದ್ದಾರೆ. ಹಾಗೆಯೇ ಸಂಘಟಿತ ಸಂಪನ್ಮೂಲಗಳ ಮುಖಾಂತರ ನಿಶ್ಚಿತ ವರಮಾನ ಹೊಂದಿರುವ ಎಲ್ಲಾ ನಾಗರಿಕರು ಕೋವಿಡ್ ೧೯ ಆರೋಗ್ಯ ತುರ್ತುಪರಿಸ್ಥಿತಿಯ ಸಂದರ್ಭವನ್ನು ಗಮನದಲ್ಲಿಟ್ಟುಕೊಂಡು ತಮ್ಮ ಶಕ್ತ್ಯಾನುಸಾರ ಸ್ವಯಂ ಪ್ರೇರಿತರಾಗಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆ ನೀಡಬೇಕೆಂದು ಕೋರಿದ್ದಾರೆ.
ಸಮಸ್ತ ವಿಶ್ವಕುಲವನ್ನೇ ತಲ್ಲಣಗೊಳಿಸಿರುವ ಮಹಾಮಾರಿ ಕೋವಿಡ್ ೧೯ನ್ನು ತಡೆಗಟ್ಟುವಲ್ಲಿ ಭಾರತ ಸರಕಾರ, ಜನಸ್ನೇಹಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಅಪಾರವಾಗಿ ಶ್ರಮಿಸುತ್ತಿದೆ. ಭರತವರ್ಷದ ಈ ಪುಣ್ಯಭೂಮಿಯಲ್ಲಿ ಜನಿಸಿರುವ ನಾವು ಈಗ ಕೇವಲ ನಮ್ಮ ಮನೆ ಮನೆಯಲ್ಲಿ ಪ್ರತ್ಯೇಕವಾಗಿ ವಿಶ್ರಮಿಸಿಕೊಂಡು ಒಂದು ಆರೋಗ್ಯಕರ ಸಾಮಾಜಿಕ ಅಂತರವನ್ನು ಕಾಯ್ದುಕೊಂಡರೆ ಸಾಲದು, ಕೋವಿಡ್ ೧೯ ನಮ್ಮ ದೇಶದ ಆರೋಗ್ಯ, ಆರ್ಥಿಕ, ಸಾಮಾಜಿಕ ಬದುಕಿಗೆ ಭರಿಸಲಾಗದ ಅಪಾಯವನ್ನು ತಂದೊಡ್ಡಿದೆ ಇಂತಹ ಕಠಿಣ ಸಂದರ್ಭದಲ್ಲಿ ಜವಾಬ್ದಾರಿಯುತ ನಾಗರಿಕರಾದ ನಾವು ತನು-ಮನ-ಧನದೊಂದಿಗೆ ಸರ್ಕಾರದೊಂದಿಗೆ ಕೈ ಜೋಡಿಸಬೇಕಾಗಿದೆ ಎಂದು ತಿಳಿಸಿದ್ದಾರೆ.
೩೫ಕ್ಕೂ ವರ್ಷಕ್ಕೂ ಹೆಚ್ಚುಕಾಲ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ವಿವಿಧ ಅಂಗ ಸಂಸ್ಥೆಗಳಲ್ಲಿ ಕನ್ನಡ ಶಿಕ್ಷಕರಾಗಿ, ಉಪನ್ಯಾಸಕರಾಗಿ ಸೇವೆ ಸಲ್ಲಿಸಿರುವ ಇವರು ಗೋದೂತಾಯಿ ಮಹಾವಿದ್ಯಾಲಯದಲ್ಲಿ ಪ್ರಾಧ್ಯಾಪಕಿಯಾಗಿ ಸೇವೆಗೈದು ೨೦೧೫ರಲ್ಲಿ ನಿವೃತ್ತಿ ಹೊಂದಿದ್ದಾರೆ.
ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಂಗಶಿಕ್ಷಣ ಸಂಸ್ಥೆಗಳಲ್ಲಿಯೇ ಪ್ರಾಥಮಿಕ ಮಾಧ್ಯಮಿಕ ಮತ್ತು ಪದವಿ ಶಿಕ್ಷಣ ಪೂರೈಸಿರುವ ಪ್ರೊ. ಮಹಾನಂದಾ ಅವರು ಶರಣ ನಾಡಿನ ಆರಾಧ್ಯದೈವ ಪೂಜ್ಯ ಶರಣಬಸವೇಶ್ವರರು ಪ್ರತಿಪಾದಿಸಿದ ದಾಸೋಹ ಸಂಸ್ಕೃತಿಯನ್ನು ಸಾಧ್ಯವಾದಷ್ಟು ಮೈಗೂಡಿಕೊಂಡಿದ್ದೆನೆ ಎಂದು ಅತ್ಯಂತ ನಮ್ರತೆಯಿಂದ ಹೇಳುತ್ತಾರೆ.
ಶನಿವಾರ ಜಿಲ್ಲಾಧಿಕಾರಿ ಶರತ್ ಬಿ ಅವರನ್ನು ಭೇಟಿಯಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದ ಹಣದ ಚೆಕ್‌ನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಎಸ್ ಎಸ್ ಹಿರೇಮಠ, ಸಿದ್ರಾಮಯ್ಯ ಹಿರೇಮಠ ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…