ಸುರಪುರ: ನಗರದಲ್ಲಿರುವ ವಿವಿಧ ಬಡಾವಣೆಗಳಲ್ಲಿನ ಕಾರ್ಮಿಕರು,ದಿನಗೂಲಿಯವರು.ನಿರ್ಗತಿಕರು,ಆಸ್ಪತ್ರೆಗೆ ಆಗಮಿಸಿದ ರೋಗಿಗಳು ಮತ್ತು ಸಿಬ್ಬಂದಿಗಳಿಗೆ ಹಾಗು ಕೊರೊನಾ ನಿರ್ಮೂಲನೆಗೆ ನಿರಂತರಾವಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಇಲಾಖೆಯ ಸಿಬ್ಬಂದಿಗಳಿಗೆ ರಾಜುಗೌಡ ಟೀಮ್ ಸೇವಾ ಸಮಿತಿ ವತಿಯಿಂದ ಅನ್ನ ನೀರು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಕಲಬುರ್ಗಿ ವಿವಿಯ ಸಿಂಡಿಕೇಟ್ ಸದಸ್ಯ ಗಂಗಾಧರ ನಾಯಕ ಮಾತನಾಡಿ,ಇಂದು ಕೊರೊನಾ ಭೀತಿಯಿಂದ ದೇಶದಲ್ಲಿ ಲಾಕ್‌ಡೌನ್ ಘೋಷಣೆಯಾಗಿದ್ದರಿಂದ ಅನೇಕ ಜನ ಕಾರ್ಮಿಕರು,ಬಡವರು ಮತ್ತು ನಿರ್ಗತಿಕರಿಗೆ ಸರಿಯಾದ ಅನ್ನ ನೀರು ಇಲ್ಲದ ಸ್ಥಿತಿ ನಿರ್ಮಾಣವಾಗಿದೆ.
ಇದನ್ನು ಮನಗಂಡಿರುವ ಶಾಸಕರಾದ ನರಸಿಂಹ ನಾಯಕ (ರಾಜುಗೌಡ) ಅವರ ಮಾರ್ಗದರ್ಶನದಲ್ಲಿ ಇಂದು ನಗರದಲ್ಲಿರುವ ಅನೇಕ ವಾರ್ಡುಗಳಲ್ಲಿನ ಕಾರ್ಮಿಕರಿಗೆ,ಶ್ರಮಿಕರಿಗೆ ಮತ್ತು ಗ್ರಾಮೀಣ ಭಾಗದಿಂದ ಕೊರೊನಾ ಪರೀಕ್ಷೆಗಾಗಿ ಆಗಮಸಿದ ಜನತೆಗೆ ಮತ್ತು ಪೆಟ್ರೋಲ್ ಬಂಕ್‌ಗಳಲ್ಲಿ ಕೆಲಸ ಮಾಡುವವರಿಗೆ ಮತ್ತು ನಮಗಾಗಿ ತಮ್ಮೆಲ್ಲ ಸುಖ ಸಂತೋಷವನ್ನು ಬದಿಗೊತ್ತಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ ಇಲಾಖೆಯ ಸಿಬ್ಬಂದಿಗಳಿಗೆ ಅನ್ನ ನೀರು ವಿತರಿಸುವ ಮೂಲಕ ಸಾರ್ಥಕ ಸೇವೆಯನ್ನು ರಾಜುಗೌಡ ಟೀಮ್ ಸೇವಾ ಸಮಿತಿಯಿಂದ ಮಾಡಲಾಗುತ್ತದೆ ಎಂದರು.ಈ ಸಂದರ್ಭದಲ್ಲಿ ಶರಣು ನಾಯಕ,ಪರಶುರಾಮ ನಾಟೆಕಾರ್ ಇತರರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…