ಕಲಬುರಗಿ: ಜಿಲ್ಲೆಯಲ್ಲಿ ಕೋರೋನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಈಗಾಗಲೇ ಜಿಲ್ಲೆಯಾದ್ಯಂತ ಸಂಪೂರ್ಣವಾಗಿ ನಿಷೇದಾಜ್ಞೆ ಜಾರಿಯಲ್ಲಿದ್ದು, ಕಲಬುರಗಿ ನಗರದಲ್ಲಿರುವ ನಿರ್ಗತಿಕರು, ಭೀಕ್ಷುಕರು ಹಾಗೂ ನಿರ್ವಸತಿಯರಿಗೆ ಆಹಾರ ಒದಗಿಸಲು ಆಹಾರ ಸಮಿತಿ ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ಅವರು ತಿಳಿಸಿದ್ದಾರೆ.
ನಿರ್ಗತಿಕರು, ಭೀಕ್ಷುಕರು ಹಾಗೂ ನಿರ್ವಸತಿಯರಿಗೆ ಆಹಾರ ಧಾನ್ಯಗಳನ್ನು ಹಂಚಲು ಅನುಕೂಲವಾಗುವಂತೆ ಸ್ವಯಂ ಪ್ರೇರಿತರಾಗಿ ಆಹಾರ ಧಾನ್ಯಗಳನ್ನು ದಾನ ಮಾಡಲಿಚ್ಛಿಸುವ ದಾನಿಗಳು ತಾವು ನೇರವಾಗಿ ಆಹಾರ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕರಾದ ಡಿ. ಎಂ. ಪಾಣಿ ಅವರನ್ನು ಮೊಬೈಲ್ ಸಂಖ್ಯೆ 94499 85855ಗೆ ಸಂಪರ್ಕಿಸಿ ಕೇವಲ ದವಸ ಧಾನ್ಯಗಳನ್ನು ಮಾತ್ರ ನೀಡಬಹುದಾಗಿದೆ. ಯಾವುದೇ ರೀತಿಯ ತಯಾರಿಸಿದ ಆಹಾರವನ್ನು ನೀಡಲು ಅವಕಾಶ ಇರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…