ಕಲಬುರಗಿ: ಲಾಕ್ ಡೌನ್ ದಿಂದ ಬೆಂಗಳೂರು ಸೇರಿದಂತೆ ಹೊರರಾಜ್ಯದಲ್ಲಿ ಸಿಲುಕಿರುವ ಕೂಲಿ ಕಾರ್ಮಿಕರನ್ನು ರಾಜ್ಯಕ್ಕೆ ಕರೆತರಲು ಬಸ್ ಸೌಲಭ್ಯ ಕಲ್ಪಿಸುವಂತೆ ಶಾಸಕ ಪ್ರಿಯಾಂಕ್ ಖರ್ಗೆ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಭೇಟಿ ನೀಡಿ ಮನವಿ ಸಲ್ಲಿಸಿದರು.
ಕೊರೋನಾ ಸೋಂಕು ತನ್ನ ಕರಾಳ ಛಾಯೆ ದಿನೇದಿನೇ ಚಾಚುತ್ತಿದೆ. ಗುಳೆ ಹೋಗಿರುವ ಕಲಬುರಗಿ, ಬೀದರ್, ರಾಯಚೂರು, ಯಾದಗಿರಿ,ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಯ ಕೂಲಿ ಕಾರ್ಮಿಕರು ಬೆಂಗಳೂರು, ಗೋವಾ, ಹೈದರಾಬಾದ್, ಪುಣೆ, ಮುಂಬೈ ಸೇರಿದಂತೆ ಹಲವಾರು ನಗರಗಳಲ್ಲಿ ತಾವಿರುವ ಜಾಗಗಳಲ್ಲಿ ಸಿಲುಕಿ ಅನ್ನ ನೀರಿಗಾಗಿ ಪರದಾಡುತ್ತಿದ್ದಾರೆ.
ಇನ್ನೂ ಕೆಲವರು ನೂರಾರು ಮೈಲಿ ದೂರದ ತಮ್ಮ ಊರುಗಳಿಗೆ ಮಕ್ಕಳು ಮರಿಗಳೊಂದಿಗೆ ತಮ್ಮ ಲಗ್ಗೇಜ್ ಗಳನ್ನು ಹೊತ್ತುಕೊಂಡು ಹಗಲು ರಾತ್ರಿಯೆನ್ನದೆ ಕಾಲ್ನಡಿಗೆಯಲ್ಲಿ ಬರುತ್ತಿರುವ ದೃಶ್ಯ ಹಾಗೂ ಸುದ್ದಿಗಳನ್ನು ಮಾಧ್ಯಮಗಳಲ್ಲಿ ಗಮನಿಸಿರುವ ಶಾಸಕ ಪ್ರಿಯಾಂಕ್ ಖರ್ಗೆ ಅವರು ಖುದ್ದಾಗಿ ಭೇಟಿ ನೀಡಿ ಸಿಎಂ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.
ಕೊರೋನಾ ವಿರುದ್ದದ ಹೋರಾಟಕ್ಕೆ ಕೆಪಿಸಿಸಿ ಅಧ್ಯಕ್ಷರಿಗೆ ಭೇಟಿ ನೀಡಿ ತನ್ನ ಎರಡು ತಿಂಗಳ ಸಂಬಳವನ್ನು (2 ಲಕ್ಷ) ದೇಣಿಗೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಸರ್ವಪಕ್ಷ ಸಭೆ ನಡೆಯುತ್ತಿದ್ದು ಸಿಎಲ್ ಪಿ ಲೀಡರ್ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಹಾಗೂ ಶಾಸಕ ಅಜಯ್ ಸಿಂಗ್ ಹಾಜಿರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…