ಕಲಬುರಗಿ: ಲಾಕ್ ಡೌನ್ ಹಿನ್ನಲೆಯಲ್ಲಿ ಬೆಂಗಳೂರು ಸೇರಿದಂತೆ ಹೊರರಾಜ್ಯಗಳಲ್ಲಿ ಬಂಧಿಯಂತಾಗಿರುವ ಕಲ್ಯಾಣ ಕರ್ನಾಟಕದ ಕೂಲಿ ಕಾರ್ಮಿಕರನ್ನು ವಾಪಸ್ ಕರೆಸಿಕೊಳ್ಳಲು ಬಸ್ ವ್ಯವಸ್ಥೆ ಕಲ್ಪಿಸುವಂತೆ ಸಿಎಂ ಅವರಿಗೆ ಶಾಸಕರಾದ ಪ್ರಿಯಾಂಕ್ ಖರ್ಗೆ ಆಗ್ರಹಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದು, ಬರ ಪೀಡಿತ ಕಲ್ಯಾಣ ಕರ್ನಾಟಕದ ಜನರು ಬೆಂಗಳೂರು, ಮಹಾರಾಷ್ಟ್ರ, ಗೋವಾ, ಆಂಧ್ರಪ್ರದೇಶ, ಹೈದರಾಬಾದ್ ಮುಂತಾದ ಕಡೆ ಕೆಲಸ ಅರಸಿ ಗುಳೆ ಹೋಗಿದ್ದು ಪ್ರಸ್ತುತ ಕೊರೋನಾ ಸೋಂಕು ಹಬ್ಬುವ ಭೀತಿಯಿಂದ ಇಡೀ ದೇಶವೇ ಲಾಕ್ ಡೌನ್ ಆಗಿದ್ದರಿಂದ ಕೂಲಿ ಕಾರ್ಮಿಕರು ತಾವಿರುವ ಜಾಗಗಳಲ್ಲಿ ಅನ್ನ ನೀರಿಲ್ಲದೆ ಪರಿತಪಿಸುತ್ತಿದ್ದಾರೆ. ಈ ಕೂಡಲೇ ಅವರನ್ನು ತಮ್ಮ ಸ್ವಂತ ಊರುಗಳಿಗೆ ಕರೆಸಿಕೊಳ್ಳಲು ಸಾರಿಗೆ ವ್ಯವಸ್ಥೆ ಕಲ್ಪಿಸಿ ಇಲ್ಲಿಗೆ ಬಂದ ನಂತರ ಸೂಕ್ತ ವೈದ್ಯಕೀಯ ತಪಾಸಣೆ ನಡೆಸಿದ ಆ ನಂತರ ಸರಕಾರಿ ಶಾಲೆ ಕಲ್ಯಾಣಮಂಟಪ ಮುಂತಾದ ಕಡೆ ಅವರಿಗೆ ಹದಿನಾಲ್ಕು ದಿನಗಳ ಕಾಲ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಆದ್ದರಿಂದ ಈ ನಿಟ್ಟಿನಲ್ಲಿ ಈ ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ತಮ್ಮ ಪತ್ರದಲ್ಲಿ ಸಿಎಂಗೆ ಒತ್ತಾಯಿಸಿದ್ದಾರೆ.
ಕೂಲಿ ಕಾರ್ಮಿಕರು ಸಿಕ್ಕ ಸಿಕ್ಕ ಖಾಸಗಿ ವಾಹನದಲ್ಲಿ ತಮ್ಮ ತಮ್ಮ ಊರುಗಳಿಗೆ ತಂಡೋಪತಂಡವಾಗಿ ಬರುತ್ತಿದ್ದು ಅವರನ್ನು ಸೋಂಕು ತಪಾಸಣೆಗೆ ಒಳಪಡಿಸುತ್ತಿಲ್ಲ. ರಾಜ್ಯ ಈಗಾಗಲೇ ಮೂರನೆಯ ಹಂತ ತಲುಪುವ ಭೀತಿ ಎದುರಿಸುತ್ತಿದ್ದು .ಇದರಿಂದಾಗಿಯೂ ಕೂಡಾ ಸೋಂಕು ಹಬ್ಬುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕ್ರಮ ಅಗತ್ಯವಾಗಿದೆ ಎಂದು ತಿಳಿಸಿದ್ದಾರೆ.
ವಿದೇಶದಲ್ಲಿರುವ ಭಾರತೀಯರನ್ನ ವಿಶೇಷ ವಿಮಾನದ ಮೂಲಕ ತಾಯ್ನಾಡಿಗೆ ಕರೆತಂದರೆ, ನಮ್ಮ ದೇಶದ ಬೇರೆ ಬೇರೆ ಭಾಗಗಳಲ್ಲಿ ವಾಸಿಸುತ್ತಿರುವ ಕೂಲಿಕಾರ್ಮಿಕರನ್ನು ಸುರಕ್ಷಿತ ವಾಗಿ ಅವರ ಊರುಗಳಿಗೆ ವಾಪಸ್ ಕರೆತಂದು ವೈದ್ಯಕೀಯ ತಪಾಸಣೆ ನಡೆಸುತ್ತಿಲ್ಲ ಅಂದು ಶಾಸಕರು ವಿಷಾದ ವ್ಯಕ್ತಪಡಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…