ಕಲಬರುಗಿ: ಮನುಕುಲಕ್ಕೆ ಮಾರಕವಾಗಿ ಕಾಡುತ್ತಿರುವ ಕೂರೋನಾ ವೈರಸ್ ತಡೆಗಟ್ಟಲು ಜನತೆಯ ಹಿತದೃಷ್ಟಿಯಿಂದ ಕೇಂದ್ರ ಮತ್ತು ರಾಜ್ಯ ಸರಕಾರಗಳು ಲಾಕ್ ಡೌನ್ ಸೇರಿದಂತೆ ಆರೋಗ್ಯ ಸುರಕ್ಷತೆ ಕ್ರಮಗಳನ್ನು ಜನತೆಗೆ ಪಾಲಿಸುವಂತೆ ಭಾರತೀಯ ಜನತಾ ಪಕ್ಷದ ಕಲಬರುಗಿ ಗ್ರಾಮಾಂತರ ಜಿಲ್ಲೆ ಪ್ರಧಾನ ಕಾರ್ಯದರ್ಶಿ ಗಳಾದ ಲಿಂಗರಾಜ ಬಿರಾದಾರ್ ಮನವಿ ಮಾಡಿದ್ದಾರೆ
ಈ ಕುರಿತು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಅವರು ಈಗಾಗಲೇ ವೈರಸ್ ತಡೆಗಟ್ಟಲು ರಾಜ್ಯದ ಮುಖ್ಯಮಂತ್ರಿಗಳಾದ ಬಿ ಎಸ್ ಯುಡಿಯೂರಪ್ಪನವರು ಮತ್ತು ಆರೋಗ್ಯ ಸಚಿವರು ಹಗಲಿರುಳು ಶ್ರಮಿಸುತ್ತಿದ್ದಾರೆ. ಅನೇಕ ಕಟ್ಟು ನಿಟ್ಟಿನ ಕ್ರಮ ದೊಂದಿಗೆ ವೈದ್ಯರು ಮತ್ತು ವೈದ್ಯಕೀಯ ಚಿಕಿತ್ಸೆ ವಿಭಾಗದವರು ಶ್ರಮಿಸುತ್ತಿದ್ದು ಶುಚಿತ್ವಕ್ಕಾಗಿ ಪೌರ ಕಾರ್ಮಿಕರು, ಭದ್ರತೆಗಾಗಿ ಪೋಲಿಸ್ ಇಲಾಖೆ, ಜಾಗೃತಿಗಾಗಿ ಮಾಧ್ಯಮದವರು ಕಾರ್ಯನಿರ್ವಹಿಸುತ್ತಿದ್ದು, ವಿಶೇಷವಾಗಿ ರೋಗ ಹರಡದಂತೆ ತಡೆಯುವುದು ಜನತೆಯ ಮುಖ್ಯ ಜವಾಬ್ದಾರಿ ಆಗಿದೆ.
ಕೆಲ ನಿಯಮಗಳನ್ನು ಪಾಲಿಸುವುದರಿಂದ ರೋಗ ನಿಯಂತ್ರಣ ಮಾಡಬಹುದಾಗಿದ್ದು ಇದಕ್ಕೆ ಜನರ ಸಹಕಾರ ಬಹಳ ಮುಖ್ಯವಾಗಿದ್ದು ಜನರು ಮನೆಯಿಂದ ಹೊರ ಬರಬಾರದು ಮನೆಯಲ್ಲಿ ಸುರಕ್ಷಿತವಾಗಿ ಇದ್ದು ಜಿಲ್ಲಾಡಳಿತಕ್ಕೆ ಸಹಕರಿಸಬೇಕೆಂದು ಎಂದು ಮನವಿ ಮಾಡಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…