ಕರ್ಫ್ಯೂ ಉಲ್ಲಂಘಿಸಿ ಓಡಾಡಿದರೆ ವಾಹನ ಜಫ್ತಿ : ಗೋವಿಂದ ಎಂ. ಕಾರಜೋಳ

0
194

ಕಲಬುರಗಿ: ಕೊರೋನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ ಕರ್ಫ್ಯೂ ಹೇರಲಾಗಿದೆ. ಇದನ್ನು ಉಲ್ಲಂಘನೆ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಉಪಮುಖ್ಯಮಂತ್ರಿಗಳು, ಸಮಾಜ ಕಲ್ಯಾಣ, ಲೋಕೋಪಯೋಗಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಎಂ. ಕಾರಜೋಳ ಅವರು ಸೂಚಿಸಿದ್ದಾರೆ.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಭಾನುವಾರ ಕೊರೋನಾ ವೈರಸ್ ತಡೆಗಟ್ಟುವ ಹಿನ್ನೆಲೆಯಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಪರಿಶೀಲನಾ ಸಭೆ ನಡೆಸಿದ ಬಳಿಕ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದರು.
ನಿ?ಧಾಜ್ಞೆ ಉಲ್ಲಂಘಿಸಿ ಓಡಾಡುವರ ಬೈಕ್‌ಗಳನ್ನು ಜಫ್ತಿ ಮಾಡಬೇಕು. ಕನಿಷ್ಠ ದಿನಕ್ಕೆ ೧೦೦ ಬೈಕ್ ವಶಪಡಿಸಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.

Contact Your\'s Advertisement; 9902492681

ಇದೇ ವೇಳೆ ಸಾಮಾಜಿಕ ಜಾಲತಾಣಗಳು ಸುಳ್ಳು ಸುದ್ದಿ ಪ್ರಕಟಿಸುವ ಮೂಲಕ ಸಮಾಜದಲ್ಲಿ ಗೊಂದಲ ಉಂಟು ಮಾಡುತ್ತಿವೆ. ಇಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಬರೀ ಎಚ್ಚರಿಕೆ ನೀಡಿದರೆ ಸಾಲದು, ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಖಡಕ್ ಸೂಚನೆ ನೀಡಿದರು.

ಪತ್ರಿಕಾಗೋಷ್ಟಿಯಲ್ಲಿ ಲೋಕಸಭಾ ಸದಸ್ಯ ಡಾ.ಉಮೇಶ ಜಾಧವ, ಜಿಲ್ಲಾಧಿಕಾರಿ ಶರತ್ ಬಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಪಿ.ರಾಜಾ, ಜಿಲ್ಲಾ ಪೊಲೀಸ್ ವರಿ?ಧಿಕಾರಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಮಹಾನಗರ ಪಾಲಿಕೆ ಆಯುಕ್ತ ರಾಹುಲ ಪಾಂಡ್ವೆ, ಡಿಸಿಪಿ ಕಿಶೋರ್ ಬಾಬು ಅವರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here