ಬಿಸಿ ಬಿಸಿ ಸುದ್ದಿ

ಕರೋನಾ ಕುರಿತು ಸರ್ವಪಕ್ಷಗಳ ಸಭೆ : ತೆಗೆದುಕೊಂಡ ನಿರ್ಣಯಗಳೇನು.?

ಬೆಂಗಳೂರು: ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ವ ಪಕ್ಷಗಳ ಸಭೆ ನಡೆಯಿತು. ಸಭೆಯಲ್ಲಿ ಸಚಿವ ಸಂಪುಟದ ಸದಸ್ಯರು, ಸಿದ್ದರಾಮಯ್ಯ, ಹೆಚ್. ಡಿ. ಕುಮಾರಸ್ವಾಮಿ, ಎಸ್. ಆರ್. ಪಾಟೀಲ ಸೇರಿದಂತೆ ವಿರೋಧ ಪಕ್ಷಗಳ ಹಲವು ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು.

ಕರೋನಾ ಕುರಿತ ಸರ್ವಪಕ್ಷಗಳ ಸಭೆ – ತೆಗೆದುಕೊಂಡ ನಿರ್ಣಯಗಳು

  • ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಿಗೆ ಅಗತ್ಯ ಸಂಖ್ಯೆಯಲ್ಲಿ ಟೆಸ್ಟಿಂಗ್ ಕಿಟ್ (ಪರೀಕ್ಷಾ ಸಾಧನಗಳು) ವಿತರಿಸಲಾಗುವುದು.
  • ಸರ್ವ ಪಕ್ಷಗಳ ಸಭೆಯಲ್ಲಿ ನಾಯಕರು ಉಪಯುಕ್ತ ಸಲಹೆಗಳನ್ನು ನೀಡಿರುತ್ತಾರೆ. ಸರ್ಕಾರ ಅವುಗಳನ್ನು ಗಂಭೀರವಾಗಿ ಪರಿಗಣಿಸಿ ಅನುಷ್ಠಾನಕ್ಕೆ ತರಲಿದೆ.
  • ಸೋಂಕಿತರಿಗೆ ಚಿಕಿತ್ಸೆ ನೀಡುವ ವೈದ್ಯರು, ನರ್ಸ್‍ಗಳು ಹಾಗೂ ಅರೇ ವೈದ್ಯಕೀಯ ಸಿಬ್ಬಂದಿಗೆ ಪಿಪಿಇ ಕಿಟ್, ಮಾಸ್ಕ್ ಹಾಗೂ ಸ್ಯಾನಿಟೈಜರ್ ಬಾಟಲಿ ಗಳನ್ನು ಸರಬರಾಜು ಮಾಡಲು ಕೂಡಲೇ ಕ್ರಮ ಕೈಗೊಳ್ಳಲಾಗುವುದು.
  • ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ರಕ್ಷಣಾ ಸಾಧನಗಳನ್ನು ಒದಗಿಸಲು ಕೂಡಲೇ ಕ್ರಮಕೈಗೊಳ್ಳಲಾಗುವುದು.
  • ರಾಜ್ಯದ ಗಡಿಗಳಲ್ಲಿ ಸಿಕ್ಕಿಕೊಂಡಿರುವ ಜನರ ವೈದ್ಯಕೀಯ ತಪಾಸಣೆ ನಡೆಸಿ, ಅವರಿಗೆ ಆಶ್ರಯ ಕಲ್ಪಿಸಲು ವ್ಯವಸ್ಥೆ ಮಾಡಲಾಗುವುದು.
  • ಸರ್ವ ಪಕ್ಷದ ಮುಖಂಡರು ಸರ್ಕಾರದ ಕ್ರಮಗಳಿಗೆ ಒಕ್ಕೊರಲಿನ ಬೆಂಬಲ ವ್ಯಕ್ತಪಡಿಸಿ, ಈ ಸಂಕಷ್ಟದ ಸನ್ನಿವೇಶದಲ್ಲಿ ಸರ್ಕಾರದ ಜೊತೆ ಕೈಜೋಡಿಸುವುದಾಗಿ ಸಹಮತ ವ್ಯಕ್ತಪಡಿಸಿದರು.
  • ಸೋಂಕಿಗೊಳಗಾಗಿರುವ ಪ್ರಯಾಣಿಕರಿಗೆ ಕ್ವಾರಂಟೈನ್ ವ್ಯವಸ್ಥೆಗೆ ಒಳಪಡಿಸಲು ಹಾಗೂ ಆರೋಗ್ಯವಾಗಿರುವ ಪ್ರಯಾಣಿಕರನ್ನು ಅವರ ಸ್ಥಳಗಳಿಗೆ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು.
  • ರೈತರ ಕೃಷಿ ಉತ್ಪನ್ನಗಳ, ಸಾಗಣೆ, ಮಾರಾಟ ಮತ್ತು ಒಳಕೆದಾರರಿಗೆ ಸೂಕ್ತವಾಗಿ ವಿತರಿಸಲು ವ್ಯವಸ್ಥೆ ಮಾಡಲಾಗುವುದು.
  • ಮುಸ್ಲಿಂ ಬಾಂಧವರ ಜೊತೆ ನಾನು ಸಭೆ ನಡೆಸಿದ್ದು, ಅವರೆಲ್ಲರೂ ತಮ್ಮ ತಮ್ಮ ಮನೆಗಳಲ್ಲಿಯೇ ಪ್ರಾರ್ಥನೆಯನ್ನು ನಡೆಸಲು ಒಪ್ಪಿ ಸಹಕರಿಸಿರುತ್ತಾರೆ. ಅವರನ್ನು ಅಭಿನಂದಿಸುತ್ತೇನೆ.
  • ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ಇತ್ಯಾದಿಗಳ ವಿತರಣೆ ಸೂಕ್ತ ವ್ಯವಸ್ಥೆ ಮಾಡಲಾಗುವುದು.
  • ಪಡಿತರವನ್ನು ಫಲಾನುಭವಿಗಳ ಮನೆಬಾಗಿಲಿಗೆ ತಲುಪಿಸುವ ಸಲಹೆಯನ್ನು ವಿರೋಧ ಪಕ್ಷದ ನಾಯಕರು ನೀಡಿದ್ದು, ಆ ಬಗ್ಗೆ ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು.
emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 hour ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 hour ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 hour ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

18 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

20 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago