ಬಿಸಿ ಬಿಸಿ ಸುದ್ದಿ

ಪ್ರಧಾನಿ ಮಂತ್ರಿಗಳ ಪರಿಹಾರ ನಿಧಿಗೆ ಸಂಸದ ಕರಡಿ ಸಂಗಣ್ಣ 1 ಕೋಟಿ ದೇಣಿಗೆ

ಕೊಪ್ಪಳ: ಕೊವೀಡ್ -19, ನೊವೇಲ್ ಕೊರೋನಾ ವೈರಸ್ ತಡೆಗಟ್ಟುವ ನಿಯಂತ್ರಣಕ್ಕಾಗಿ ಪ್ರಧಾನಿ ಮಂತ್ರಿಗಳ ಪರಿಹಾರ ನಿಧಿಗೆ ಸಂಸದರ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಡಿಯಲ್ಲಿ (ಎಂಪಿಎಲ್‌ಎಡಿಎಸ್) ಸಂಸದ ಸಂಗಣ್ಣ ಕರಡಿಯವರು 1 ಕೋಟಿ ರೂ. ನೆರವು ನೀಡಿದ್ದಾರೆ.

ಅವರು ಸೋಮವಾರದಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ ಅವರನ್ನು ಭೇಟಿ ಮಾಡಿ, ಎಂಪಿಎಲ್‌ಎಡಿಎಸ್ ಯೋಜನೆಯ ಅನುದಾನದಡಿ ಪ್ರಧಾನಿ ಮಂತ್ರಿಗಳ ಪರಿಹಾರ ನಿಧಿಗೆ ಸಂಸದರ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಡಿಯಲ್ಲಿನ 1 ಕೋಟಿ ರೂಪಾಯಿಗಳನ್ನು ನೀಡಲು ಒಪ್ಪಿಗೆ ಪತ್ರವನ್ನು ನೀಡಿದರು.

ಜಿಲ್ಲೆಯಲ್ಲಿ ಕೊರಾನಾ ತಡೆಗಟ್ಟಲು ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಬಗ್ಗೆ ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿ, ಸದ್ಯದ ಪರಿಸ್ಥಿತಿ ಹಾಗೂ ಮುಂದಿನ ಕ್ರಮಗಳ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿದರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಸಾಧ್ಯವಿರುವ ಎಲ್ಲಾ ನೆರವು ಒದಗಿಸಿ ಕೊಡುವಲ್ಲಿ ಪ್ರಮಾಣಿ ಪ್ರಯತ್ನವನ್ನು ಮಾಡುವದಾಗಿ ಈ ಸಂದರ್ಭದಲ್ಲಿ ಹೇಳಿದರು.

ಕರೋನಾ ವೈರಸ್ ತಡೆಗಟ್ಟಲು ಜಿಲ್ಲಾಡಳಿತ ಕೈಗೊಂಡಿರುವ ಹಲವು ಕ್ರಮಗಳಿಗೆ ಸಹಕರಿಸಿ, ಸ್ವತಃ ತಾವೇ ಸಾರ್ವಜನಿಕರಿಗೆ ಈ ಬಗ್ಗೆ ಮುಂಜಾಗೃತ ಸೇರಿದಂತೆ ಯಾವುದೇ ತೊಂದರೆಯಾಗದಂತೆ ಅಧಿಕಾರಿಗಳೊಂದಿಗೆ ಹಾಗೂ ಇತರೆ ಜನಪ್ರತಿನಿಧಿಗಳೊಂದಿಗೆ ಸೇವೆಗೆ ನಿಂತಿರುವ ಕೊಪ್ಪಳ ಸಂಸದ ಸಂಗಣ್ಣ ಕರಡಿ ಅವರು ಬೀಕರವಾಗಿ ಕಾಡುತ್ತಿರುವ ಮಹಾಮಾರಿ ಕೊರೋನಾ ವೈರಸ್ ಇಡಿ ವಿಶ್ವವನ್ನೆ ತಲ್ಲಣಗೊಳಿಸಿ ಸಂಕಷ್ಟಕ್ಕೆ ದೂಡಿದೆ, ಇಂತಹ ಸಂಕ್ರಾಮಣ ಪರಿಸ್ಥಿತಿಯಲ್ಲಿ ಸರ್ಕಾರಗಳು ಕೈಗೊಂಡಿರುವ ಕ್ರಮಗಳನ್ನು ಅನುಸರಿಸಿ, ಮಹಾಮಾರಿ ಕೊರೋನಾ ವೈರಸ್ ತಡೆಗಟ್ಟಲು ಸಹಕರಿಸುವಂತೆ ಸಾರ್ವಜನಿಕರಲ್ಲಿ ಕೋರಿದ್ದಾರೆ.

ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಪ್ರದೇಶಗಳಲ್ಲಿ ಮುಂಜಾಗೃತ ಕ್ರಮಗಳನ್ನು ಕೊಪ್ಪಳ, ರಾಯಚೂರು, ಹಾಗೂ ಬಳ್ಳಾರಿ ಜಿಲ್ಲೆಗಳ ಜಿಲ್ಲಾಡಳಿತ ಕೈಗೊಂಡಿದ್ದು, ಲಾಕ್ ಡೌನ್ ಸಂದರ್ಭದಲ್ಲಿ ನಿರ್ಗತಿಕರು, ನಿರಾಶ್ರಿತರು, ಬಡವರು, ವಲಸಿಗರು, ಕಾರ್ಮಿಕರುಗಳು ತೊಂದರೆಗೊಳಗಾದರವರಿಗೆ ಸಹಾಯ ಮಾಡಲಾಗುತ್ತಿದೆ, ಅಲ್ಲದೇ ಸಾರ್ವಜನಿಕರು ಸಹ ಲಾಕ್ ಡೌನ್ ಉಲ್ಲಂಘಿಸದೆ ಸಹಕರಿಸುವಂತೆ ಮನವಿ ಮಾಡಿಕೊಂಡಿದ್ದಾರೆ
ವರದಿ:ಮರಿಗೌಡ ಬಾದರದಿನ್ನಿ

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

5 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

15 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

15 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

15 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago