ಕಲಬುರಗಿ: ಉತ್ತರ ಮತಕ್ಷೇತ್ರದ ಕೆಲ ವಾರ್ಡ್‌ಗಳಲ್ಲಿ ವೈದ್ಯಕೀಯ ಸೌಲಭ್ಯ ಒದಗಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬಿಜೆಪಿ ಯುವ ಮುಖಂಡ ಚಂದು ಪಾಟೀಲ್ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರಿಗೆ ಮನವಿಪತ್ರ ಸಲ್ಲಿಸಿದರು. ಸಂಸದ ಡಾ.ಉಮೇಶ ಜಾಧವ್, ಶಾಸಕರಾದ ಬಿ.ಜಿ.ಪಾಟೀಲ್, ಸುಭಾಷ ಗುತ್ತೇದಾರ, ಬಸವರಾಜ ಮತ್ತಿಮೂಡ ಇದ್ದರು.